ಉಡುಪಿ: ರೈತರ ಮಕ್ಕಳಿಗೆ ಘೋಷಿಸಿರುವ ವಿದ್ಯಾನಿಧಿ ಯೋಜನೆಯನ್ನು ನೇಕಾರರ ಮತ್ತು ಮೀನುಗಾರರ ಮಕ್ಕಳಿಗೂ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಲ್ಲಿನ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಬೊಮ್ಮಾಯಿ ಈ ಘೋಷಣೆ ಮಾಡಿದ್ದಾರೆ. ನಾವು ಸಮಸ್ಯೆಗಳನ್ನು ಚರ್ಚೆ ಮಾಡಿ ಗುದ್ದಾಡೋದಲ್ಲ. ಬದಲಾಗಿ ಅದಕ್ಕೆ ಪರಿಹಾರ ಕೊಡುವ ಸಂಕಲ್ಪ ಮಾಡಬೇಕು ಎಂದಿದ್ದಾರೆ.
ಏಪ್ರಿಲ್ 14ರಿಂದ 17ರವರೆಗೆ ಬ್ಯಾಂಕ್ ರಜೆ! ಈಗಲೇ ಮುಗಿಸಿಕೊಳ್ಳಿ ನಿಮ್ಮ ಕೆಲಸ
ಮಣ್ಣು ಪರೀಕ್ಷೆ ಮಾಡಿ ದುಪ್ಪಟ್ಟು ಲಾಭ ಪಡೆಯಿರಿ!
ವಿವಿಧ ಬೇಡಿಕೆಗಳ ಕುರಿತು ಮಾತನಾಡಿದ ಅವರು, ಮೂರು ಜಿಲ್ಲೆಗಳಿಗೆ ಸೇರಿ 5 ಸಾವಿರ ಮನೆಗಳನ್ನು ನೀಡುವುದಾಗಿ ಹೇಳಿದ್ದಾರೆ. ಜೊತೆಗೆ ಈ ಕರಾವಳಿ ಭಾಗದ ಎಲ್ಲಾ ಬಂದರಿನ ಡ್ರಜ್ಜಿಂಗ್ (ಹೂಳೆತ್ತುವ) ಕೆಲಸ ಮಾಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಮಹಾಲಕ್ಷ್ಮಿ ದೇವಸ್ಥಾನದ ಅಭಿವೃದ್ಧಿಗೆ ಮುಜರಾಯಿ ಇಲಾಖೆಯಿಂದ ಐದು ಕೋಟಿ ರೂಪಾಯಿ ಅನುದಾನವನ್ನು ಸಹ ಘೋಷಣೆ ಮಾಡಿದ್ದಾರೆ.ಜೊತೆಗೆ ಮೊಗವೀರ ಮಕ್ಕಳಿಗೆ ಹಿಂದುಳಿದ ವರ್ಗಗಳ ಹಾಸ್ಟೆಲ್ ನಿರ್ಮಿಸಿಕೊಡುವುದಾಗಿ ಹೇಳಿದ್ದಾರೆ.
ಮೀನುಗಾರರಿಗೆ 10 ತಿಂಗಳಿಗೆ ಎರಡು ಲಕ್ಷ ಲೀ. ಡೀಸೆಲ್ ಸಬ್ಸಿಡಿ ನೀಡುವ ಬಗ್ಗೆ ಚಿಂತನೆ ನಡೆಸಲಾಗುವುದು. ಜೊತೆಗೆ ಮಹಿಳೆಯರ ಅಭಿವೃದ್ಧಿಗೆ ಶೂನ್ಯ ಬಡ್ಡಿದರದಲ್ಲಿ ಸಾಲಸೌಲಭ್ಯ ನೀಡಲು ಬ್ಯಾಂಕ್ ಗಳ ಜೊತೆ ಮಾತುಕತೆ ನಡೆಸಿ ಯೋಜನೆ ರೂಪಿಸುವುದಾಗಿ ಸಿಎಂ ಬೊಮ್ಮಾಯಿ ಭರವಸೆ ನೀಡಿದ್ದಾರೆ.ಮೊಗವೀರ ಸಮುದಾಯದವರು ಶ್ರಮ ಜೀವಿಗಳು. ಇಲ್ಲಿನ ಮೀನುಗಾರರಿಗೆ ನನ್ನ ಮನೆ ಮತ್ತು ಮನಸ್ಸಿನ ಬಾಗಿಲು ಸದಾ ತರೆದಿರುತ್ತದೆ. ನಾನು ಮೊಗವೀರ ಸಮುದಾಯದ ಜೊತೆ ಇದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಯ ನೀಡಿದ್ದಾರೆ.
EPFO ಹೊಸ ಮಾರ್ಗಸೂಚಿ ರಿಲೀಸ್.. ಇಲ್ಲಿದೆ ಟ್ಯಾಕ್ಸ್ ಲೆಕ್ಕಾಚಾರ
ATM Card ಇಲ್ಲದೆ ಹಣ ಪಡೆಯಿರಿ: RBI ತರುತ್ತಿದೆ ಹೊಸ ಸೌಲಭ್ಯ !
ಈ ವರ್ಷ ನೇಕಾರರ ಹಾಗೂ ಮೀನುಗಾರರ ಮಕ್ಕಳಿಗೂ ರೈತ ವಿದ್ಯಾನಿಧಿ ಯೋಜನೆಯನ್ನು ವಿಸ್ತರಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಆಂಕರ್ ಬ್ಯಾಂಕ್ ಸ್ಥಾಪನೆ..!
ಮಹಿಳಾ ಸ್ವಸಹಾಯ ಸಂಘಗಳಿಗೆ ಬ್ಯಾಂಕಿನಿಂದ ಸಾಲ ಸೌಲಭ್ಯ ಒದಗಿಸಲು ಸಾರ್ವಜನಿಕ ವಲಯದ ಆಂಕರ್ ಬ್ಯಾಂಕನ್ನು ಜೋಡಿಸಲಾಗುವುದು.ಮಹಿಳಾ ಸ್ವಸಹಾಯ ಸಂಘಗಳಿಗೆ ಆರ್ಥಿಕ ನೆರವು ನೀಡಲು 500 ಕೋಟಿ ರೂ. ಒದಗಿಸುವ ವಿನೂತನ ಕಾರ್ಯಕ್ರಮದಿಂದ 3.9 ಲಕ್ಷ ಮಹಿಳೆಯರಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಹಿಳೆಯರು ಅಭಿವೃದ್ಧಿಯಲ್ಲಿ ಪಾಲುದಾರರಾಗಬೇಕು.ಬಡತನದಲ್ಲಿರುವ ಮಹಿಳೆಯರ ಆದಾಯವನ್ನು ಹೆಚ್ಚಿಸುವ ಮೂಲಕ ರಾಜ್ಯದ ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ ಮಹಿಳೆಯಲ್ಲಿ ಆರ್ಥಿಕ ಶಕ್ತಿಯನ್ನು ತುಂಬುವ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
ರಷ್ಯಾದಿಂದ ಅಪಾರ ಬೇಡಿಕೆಯಿದ್ದರೂ 200 ರೂ. ಕುಸಿತ ಕಂಡ ಗೋಧಿ..ಕಾರಣವೇನು..?
Big Announce! ರೈತರ income ಹೆಚ್ಚಿಸಲು 100 ಕೋಟಿ ಮೀಸಲು CM ಬೊಮ್ಮಾಯಿ ಅವರಿಂದ Big GIft, ಬಜೆಟ್‌ನಲ್ಲಿ ಘೋಷಣೆ
ಅಲ್ಲದೆ, ಈ ವರ್ಷದಲ್ಲಿ ವಿಶೇಷವಾಗಿ ಮಹಿಳಾ ಕಾರ್ಯಕ್ರಮಗಳಿಗೆ 47 ಸಾವಿರ ಕೋಟಿ ರೂ. ಮತ್ತು ಮಕ್ಕಳಿಗೆ ಸಂಬಂಧಿಸಿದ ನಾನಾ ಯೋಜನೆಗಳಿಗೆ 43 ಸಾವಿರ ಕೋಟಿ ರೂ.ಗಳಷ್ಟು ಅಗಾಧ ಮೊತ್ತವನ್ನು ಬಜೆಟ್ಟಿನಲ್ಲಿ ಪ್ರಕಟಿಸಲಾಗಿದೆ. ಇವೆಲ್ಲವುಗಳ ಅನುಷ್ಠಾನದ ಸಂಬಂಧ ಇನ್ನು ಒಂದು ವಾರದಲ್ಲಿ ಸೂಕ್ತ ಆದೇಶಗಳನ್ನು ಹೊರಡಿಸಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.