News

ಮೊಲಾಸಸ್ ತಯಾರಿಸುವವರಿಗೆ ಪ್ರತಿ ಟನ್‌ ಕಬ್ಬಿಗೆ ₹100 ಹೆಚ್ಚಿಸಿ ಆದೇಶ ಸಿಎಂ ಬೊಮ್ಮಾಯಿ

02 January, 2023 12:41 PM IST By: Kalmesh T
CM Bommai orders increase of ₹100 per ton of sugarcane for molasses makers

ಮೊಲಾಸಸ್ ತಯಾರಿಸುವವರಿಗೆ ಪ್ರತಿ ಟನ್ ಗೆ 100 ರೂಪಾಯಿ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಂಡ್ಯದಲ್ಲಿ ಆಯೋಜಿಸಿದ್ದ ಜನಸಂಕಲ್ಪ ಯಾತ್ರೆಯಲ್ಲಿ ಕೇಂದ್ರದ ಗೃಹ ಹಾಗೂ ಸಹಕಾರಿ ಸಚಿವ ಅಮಿತ್ ಶಾ ಅವರೊಂದಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

18 ಚಿಕ್ಕಮಗಳೂರು ಹಬ್ಬ 2023ರ ಅಂಗವಾಗಿ ಜನವರಿ 18ರಿಂದ ಕೃಷಿ ಮೇಳ ಆಯೋಜನೆ

ಮೈಶುಗರ್ ಕಾರ್ಖಾನೆ ನೂರಾರು ವರ್ಷಗಳಿಂದ ಮುಚ್ಚಿದ್ದರೂ ಯಾವುದೇ ಸರ್ಕಾರ ಈ ಬಗ್ಗೆ ಚಿಂತನೆ ಮಾಡಿರಲಿಲ್ಲ. ಅಧಿಕಾರಿಗಳು ಈ ಕಾರ್ಖಾನೆಯನ್ನು ಮಾರಾಟ ಮಾಡಿ ಖಾಸಗಿಯವರಿಗೆ ವಹಿಸಲು ಒತ್ತಡ ತಂದಿದ್ದರು.

ಈ ಭಾಗದ ಜನಪ್ರತಿನಿಧಿಗಳು ಹಾಗೂ ರೈತ ಮುಖಂಡರ ಸಭೆ ಕರೆದು ಕಾರ್ಖಾನೆಗೆ ಕಾಯಕಲ್ಪವನ್ನು ಸರ್ಕಾರಿ ವಲಯದಿಂದಲೇ ನೀಡುವುದಾಗಿ ಪಣ ತೊಟ್ಟು ಈ ವರ್ಷ ಕಬ್ಬು ಅರೆಸಲು ಪ್ರಾರಂಭಿಸಲಾಗಿದೆ ಈ ಭಾಗದ ರೈತರಿಗೆ ಆತ್ಮವಿಶ್ವಾಸವನ್ನು ತುಂಬುವ ಕೆಲಸ ಮಾಡಲಾಗಿದೆ.

ಬರುವ ವರ್ಷದಲ್ಲಿ ಎಥನಾಲ್ ಘಟಕ ಪ್ರಾರಂಭಿಸಲು ವ್ಯವಸ್ಥೆ ಕಲ್ಪಿಸಲಾಗುವುದು. ಇದನ್ನು  ಲಾಭದಾಯಕವಾಗಿಸಲು, ರೈತರ ಸಕ್ಕರೆ ಕಾರ್ಖಾನೆಯಾಗಿ ಪರಿವರ್ತನೆ ಮಾಡಲಾಗುವುದು ಎಂದರು.

ಪಿಎಂ ಕಿಸಾನ್‌ ಅಪ್ಡೇಟ್‌: ಕೋಟಿಗಟ್ಟಲೆ ರೈತರಿಗೆ ಪಿಎಂ ಕಿಸಾನ್ 13ನೇ ಕಂತಿನ ಕುರಿತು ಮಹತ್ವದ ಮಾಹಿತಿ

ಕರೊನಾ ಬಂದಾಗ ಗರೀಬ್ ಕಲ್ಯಾಣ ಯೋಜನೆ ಜಾರಿ ಮಾಡಿ ಮುಂದಿನ ವರ್ಷಕ್ಕೂ ಯೋಜನೆ ವಿಸ್ತರಣೆ ಆಗಿದೆ. ಪ್ರತಿ ಬಡವನಿಗೆ 5 ಕೆಜಿ ಅಕ್ಕಿ ನೀಡುವ ನಿರ್ಣಯವನ್ನು ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ಮಾಡಿದ್ದಾರೆ ಎಂದರು.

ಎಲ್ಲಾ ವರ್ಗಗಳಿಗೂ ನ್ಯಾಯ ನೀಡಲು ಪ್ರಾಮಾಣಿಕ ಪ್ರಯತ್ನ

ನಮ್ಮ ಸರ್ಕಾರ ರೈತ ವಿದ್ಯಾ ನಿಧಿ ಯೋಜನೆಯಡಿ 10.ಲಕ್ಷಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳಿಗೆ ಯೋಜನೆಯಿಂದ ಲಾಭ ದೊರೆತಿದೆ. ಕುಶಲಕರ್ಮಿಗಳಿಗೆ 50 ಸಾವಿರ ರೂ.ಗಳ ಸಹಾಯಧನ ನೀಡುವ ಕಾಯಕ ಯೋಜನೆ, ಸ್ತ್ರೀ ಸಾಮರ್ಥ್ಯ, ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ ರೂಪಿಸಿದೆ. 

ಹೊಸ ವರ್ಷಕ್ಕೆ ಮೋದಿ ಸಿಹಿಸುದ್ದಿ: 81.35 ಕೋಟಿ ಫಲಾನುಭವಿಗಳಿಗೆ ಉಚಿತ ಆಹಾರಧಾನ್ಯ ವಿತರಣೆ - 2 ಲಕ್ಷ ಕೋಟಿ ಸಬ್ಸಿಡಿ!

ಸಾಮಾಜಿಕ ನ್ಯಾಯ ನೀಡುತ್ತಿರುವುದು ಭಾಜಪ . ಎಸ್.ಸಿ.ಎಸ್.ಟಿ ಮೀಸಲಾತಿ ಹೆಚ್ಚಿಸಿದೆ. ಹಿಂದುಳಿದ ವರ್ಗಗಳಿಗೂ  ಸಾಮಾಜಿಕ ನ್ಯಾಯ ಒದಗಿಸುತ್ತಿದೆ. ಎಲ್ಲಾ ವರ್ಗಗಳಿಗೂ ನ್ಯಾಯ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ.

ಈ ಬಾರಿ ಕಾಂಗ್ರೆಸ್  ಹಾಗೂ ಜೆಡಿಎಸ್ ನ ಕಪ್ಳು ಬಿಳುಪು ಸಿನಿಮಾ ನೋಡಿಯಾಗಿದೆ. ಈ ಭಾಗದ  ಅಭಿವೃದ್ಧಿಗೆ  ಏನಾದರೂ ಕೊಡುಗೆ ಕೊಟ್ಟಿದ್ದಾರೆ ಅದು  ನಮ್ಮ ಯಡಿಯೂರಪ್ಪನವರು. ಅವರ ಜನ್ಮಭೂಮಿಯ ಸಮಗ್ರ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡಿದ್ದಾರೆ.