News

ಮೀನುಗಾರರಿಗೆ ಭರ್ಜರಿ ಸುದ್ದಿ ನೀಡಿದ ಸಿಎಂ, 3 ಲಕ್ಷ ಸಹಾಯಧನ ಘೋಷಣೆ!

16 October, 2022 5:52 PM IST By: Kalmesh T
CM gave great news to fishermen, announced 3 lakh subsidy!

ಮೀನುಗಾರಿಕೆ ಮಾಡುವ ರೈತರಿಗೆ ಸಿಎಂ ಬಸವರಾಜ್‌ ಬೊಮ್ಮಾಯಿಯವರಿಂದ ಭರ್ಜರಿ ಸಹಾಯಧನ ಘೋಷಣೆ, ಇನ್ಮುಂದೆ ಮೀನುಗಾರಿಕೆ ಮಾಡುವವರಿಗೆ ಸರ್ಕಾರದಿಂದ 3 ಲಕ್ಷ ಸಹಾಯಧನ ನೀಡಲಾಗುವುದು. ಇಲ್ಲಿದೆ ಮಾಹಿತಿ

ಇದನ್ನು ಓದಿರಿ: ಜಾಗತಿಕ ಹಸಿವಿನ ಸೂಚ್ಯಾಂಕದಲ್ಲಿ ಭಾರತಕ್ಕೆ 107ನೇ ಸ್ಥಾನ !

ಕೇಬಲ್ ನೆಟ್ ಮೂಲಕ ಮೀನುಗಾರಿಕೆ ಮಾಡುವವರಿಗೆ 3 ಲಕ್ಷ ರೂಪಾಯಿಗಳ ಸಹಾಯಧನವನ್ನು ಪ್ರಸ್ತುತ 300 ಜನರಿಗೆ ನೀಡುತ್ತಿದೆ. ಇನ್ಮುಂದೆ ಇದನ್ನು 1000 ಮೀನುಗಾರರಿಗೆ ಸಹಾಯಧನ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಘೋಷಿಸಿದರು.

ಬೆಂಗಳೂರಿನ ಅರಮನೆ ಮೈದಾನದ ನಡೆಯುತ್ತಿರುವ ಒಳನಾಡು ಮೀನು ಉತ್ಪಾದಕರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸ್ತ್ರೀ ಸಾಮರ್ಥ್ಯ ಯೋಜನೆಯಡಿ 3 ರಿಂದ 5 ಲಕ್ಷ ನೀಡಲಾಗುತ್ತಿದ್ದು ಒಳನಾಡು ಮೀನುಗಾರಿಕೆ ಕೈಗೊಳ್ಳಲು ಮುಂದೆ ಬರುವ ಸ್ತ್ರೀ ಶಕ್ತಿ ಸಂಘಗಳಿಗೆ ಹಾಗೂ ಸ್ವಾಮಿ ವಿವೇಕಾನಂದರ ಯೋಜನೆಯಡಿ ನೀಡುವ ಸಹಾಯ ಧನವನ್ನು ಬಳಸಿ ಸುಮಾರು 1000 ಸಂಘಗಳಿಗೆ ಮೀನುಗಾರಿಕೆ ಕೈಗೊಳ್ಳಲು ಮುಂದಾಗಬೇಕು ಎಂದರು.

ಈಗಾಗಲೇ ಆದೇಶ ನೀಡಿ ಅನುದಾನ ಬಿಡುಗಡೆ ಮಾಡಲಾಗಿದೆ.  ಮೀನುಗಾರಿಕೆಯಲ್ಲಿ ರಾಜ್ಯ ಇನ್ನೂ ಸಾಧನೆ ಮಾಡಬೇಕಿದೆ. ರಫ್ತು ಮಾಡುವಲ್ಲಿ ಆಂಧ್ರಪ್ರದೇಶ ಮುಂದುವರೆದಿದೆ. ಹೀಗಾಗಿ ಒಂದು ತಂಡವನ್ನು ಆಂಧ್ರಪ್ರದೇಶಕ್ಕೆ ಕರೆದೊಯ್ಯಲು ಸೂಚಿಸಿರುವುದಾಗಿಯೂ ಕೂಡ ತಿಳಿಸಿದ್ದಾರೆ.

ಡ್ರೋನ್ ಖರೀದಿಸಲು ಯೋಜಿಸುತ್ತಿರುವ ರೈತರಿಗೆ ಸುವರ್ಣಾವಕಾಶ, ಸರ್ಕಾರ 50% ಸಬ್ಸಿಡಿ

ಸದ್ಯದ ಮೀನುಗಾರಿಕೆ ಚಟುವಟಿಕೆಗಳನ್ನು ವಿಸ್ತರಿಸಿ, ಈಗಿನ ರಫ್ತು ಪ್ರಮಾಣಕ್ಕಿಂತ ಮೂರುಪಟ್ಟು ಹೆಚ್ಚು ಮಾಡಲು ಚಿಂತಿಸಿದ್ದೇವೆ. ಇದಕ್ಕೆ ಮುಂದಿನ ಆಯವ್ಯಯದಲ್ಲಿ ಅನುದಾನ ಮೀಸಲಿರಿಸಲಾಗುವುದು ಎಂದು ಹೇಳಿದರು.

ಮೀನುಗಾರರಿಗೆ ಮನೆ ನಿರ್ಮಾಣ-ಸಿಎಂ!

ಮೀನುಗಾರರು ಆರ್ಥಿಕವಾಗಿ ಸಬಲರಾಗಲು 5000 ಮೀನುಗಾರರ ಮನೆಗಳಿಗೆ ಮಂಜೂರಾತಿ ನೀಡಿದೆ. ಕಾಲಮಿತಿಯಲ್ಲೇ ಈ ಮನೆಗಳನ್ನು ಪೂರ್ಣಗೊಳಿಸಬೇಕು ಎಂದರು.

5600 ಕೆರೆಗಳಲ್ಲಿ ಮೀನು ಅಭಿವೃದ್ಧಿಗೆ ಅನುದಾನ!

ಕರಾವಳಿ ಪಕ್ಕದಲ್ಲಿ ಕಡಲ ಕೊರೆತವಾಗಿ ಹೂಳು ತುಂಬಿ ತೊಂದರೆಯಾಗುತ್ತಿರುವುದರಿಂದ ಎಂಟು ಮೀನುಗಾರಿಕೆ ಬಂದರುಗಳಿಗೆ ವಿಶೇಷ ಅನುದಾನ ನೀಡಿ ಹೂಳು ತೆಗೆಯಲು ಈ ವರ್ಷ ಅನುಮೋದನೆ ನೀಡಲಾಗಿದೆ.

ಮೀನುಗಾರರಿಗೆ ಡೀಸಲ್ ಹಾಗೂ ಸೀಮೆ ಎಣ್ಣೆ ಸಹಾಯಧನವನ್ನು ಹೆಚ್ಚಿಸಲಾಗಿದೆ. ಪ್ರವಾಹ ಬಂದ ಸಂದರ್ಭದಲ್ಲಿ ಮೀನುಗಾರರ ಹಡುಗುಗಳು ಹಾಳಾಗುತ್ತವೆ. ಅದಕ್ಕೆ ಎನ್.ಡಿ.ಆರ್.ಎಫ್ ನಿಯಮಾವಳಿ ಪ್ರಕಾರ ಅನುದಾನ  ನೀಡಲು ಅವಕಾಶವಿಲ್ಲ.

ಕಬ್ಬಿನ ದರ ನಿಗದಿಗೆ ಸಿ.ಎಂ ನೇತೃತ್ವದಲ್ಲಿ ಸಭೆ: ಶಂಕರ ಪಾಟೀಲ ಮುನೇನಕೊಪ್ಪ 

ರಾಜ್ಯ ಸರ್ಕಾರ ದಿಂದಲೇ ಮೀನುಗಾರರ ದೋಣಿಗಳಿಗೆ ಸಹಾಯಧನ ನೀಡಲು ತೀರ್ಮಾನಿಸಲಾಗಿದೆ. ಒಳನಾಡು ಮೀನುಗಾರಿಕೆಗೂ ಪ್ರೋತ್ಸಾಹ ನೀಡಲು 5600 ಗ್ರಾಮ ಪಂಚಾಯಿತಿಯಲ್ಲಿ 5600 ಕೆರೆಗಳಲ್ಲಿ ಮೀನು ಅಭಿವೃದ್ಧಿಗೆ ಅನುದಾನ ನೀಡಿದೆ.

BBMP ವಾರ್ಡ್ ಗಳಲ್ಲಿ ಮೀನು ಆಹಾರ ಮಳಿಗೆ ಆರಂಭ

BBMP ವಲಯಗಳಲ್ಲಿ ಮೀನಿನ ಆಹಾರಕ್ಕೆ ಬಹಳ ಬೇಡಿಕೆಯಿದೆ. ಪ್ರತಿಯೊಂದು ವಾರ್ಡಿನಲ್ಲಿ 1500-2000   ಚ.ಮೀ.   ವಿಸ್ತೀರ್ಣದಲ್ಲಿ ಮೀನಿನ ಆಹಾರವನ್ನು ಒದಗಿಸುವ ಮಳಿಗೆಯನ್ನು ಪ್ರಾರಂಭಿಸುವ ಯೋಜನೆ ಇದೆ.

ಬೆಂಗಳೂರಿನ 243 ವಾರ್ಡ್ ಗಳಲ್ಲಿಯೂ ಇದಕ್ಕೆ ಸ್ಥಳಾವಕಾಶ ಮಾಡಿಕೊಡಲಾಗುವುದು. ಖಾಸಗಿ ವಲಯದವರು ಇಲ್ಲಿ ಮಳಿಗೆಯನ್ನು ತೆರೆಯಬಹುದು. ಬೆಂಗಳೂರು ನಗರದಲ್ಲಿ ಈ ಯೋಜನೆ ಸಫಲವಾದರೆ, ರಾಜ್ಯದ ಎಲ್ಲ ಮಹಾನಗರಪಾಲಿಕೆ ವ್ಯಾಪ್ತಿಗೆ ಈ ಯೋಜನೆಯನ್ನು ವಿಸ್ತರಿಸಲಾಗುವುದು ಎಂದರು.