News

Janaspandan ಮುಂದಿನ ತಿಂಗಳು ಸಿ.ಎಂ ಜನಸ್ಪಂದನ ಕಾರ್ಯಕ್ರಮ

28 January, 2024 2:40 PM IST By: Hitesh
ಮುಂದಿನ ತಿಂಗಳು ಜನಸ್ಪಂನ ಕಾರ್ಯಕ್ರಮ

ರೈತರಿಗೆ ಪ್ರಮುಖ ಸುದ್ದಿಗಳನ್ನು ತಲುಪಿಸುವ ಉದ್ದೇಶದಿಂದ ಕೃಷಿ ಜಾಗರಣ ಕನ್ನಡ ಅಗ್ರಿನ್ಯೂಸ್‌ ಪರಿಚಯಿಸಿದೆ.

ಇಂದಿನ ಪ್ರಮುಖ ಸುದ್ದಿಗಳು ಈ ರೀತಿ ಇವೆ.  

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಚೆಗೆ ಜನಸ್ಪಂದನ ಕಾರ್ಯಕ್ರಮವನ್ನು

ಆಯೋಜಿಸಿದ್ದು, ಭಾರೀ ಜನಸ್ಪಂದನೆ ವ್ಯಕ್ತವಾಗಿತ್ತು.

ಇದೀಗ ಫೆಬ್ರವರಿಯಲ್ಲಿ ಎರಡನೇ ಬಾರಿ ಜನಸ್ಪಂದನ ಆಯೋಜಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. 

ಮುಖ್ಯಾಂಶಗಳು

1. ಫೆಬ್ರವರಿಯಲ್ಲಿ ಗ್ಯಾರಂಟಿ ಯೋಜನೆ ಸಮಾವೇಶ
2. ಅನ್ನದಾತರ ಕೈಬಿಡಬೇಡಿ: ನಟ ದರ್ಶನ್‌ ಮನವಿ
3. ಜಲಧಾರೆ ಯೋಜನೆ: 1,600 ಕೋಟಿ ಅನುದಾನ
4. ಮುಂದಿನ ತಿಂಗಳು ಸಿ.ಎಂ ಜನಸ್ಪಂದನ ಕಾರ್ಯಕ್ರಮ
5. ಕೆ.ಸಿ.ಜನರಲ್ ಆಸ್ಪತ್ರೆ ಅಭಿವೃದ್ಧಿಗೆ 150 ಕೋಟಿ ರೂಪಾಯಿ
6. ಬ್ರಾಹ್ಮಣರಿಗೆ 5 ಲಕ್ಷ ರೂ. ಸರ್ಕಾರಿ ಸಹಾಯಧನ

ಸುದ್ದಿಗಳ ವಿವರ ಈ ರೀತಿ ಇದೆ.

1. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಾಗೂ ಮೇಲ್ವಿಚಾರಣೆಗೆ ಸಮಿತಿ ರಚಿಸಿದ ನಂತರ

ಇದೀಗ ಮುಂದಿನ  ತಿಂಗಳಿನಿಂದ ಎಲ್ಲ ತಾಲ್ಲೂಕುಗಳಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ

ಸರ್ಕಾರ ಮುಂದಾಗಿದೆ. ಇದಕ್ಕಾಗಿ ತಹಶೀಲ್ದಾರ್ ಮತ್ತು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯನ್ನು

ನೊಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ ಎಂದು ಸಚಿವ ಸಂತೋಷ ಲಾಡ್  ತಿಳಿಸಿದ್ದಾರೆ.
---------------------------- 

2.ಅನ್ನದಾತರ ಕೈಬಿಡಬೇಡಿ ಎಂದು ಚಾಲೆಂಜಿಗ್‌ ಸ್ಟಾರ್‌ ನಟ ದರ್ಶನ್‌ ಅವರು ಮನವಿ ಮಾಡಿದ್ದಾರೆ.

ಬೆಳೆ ಬೆಳೆದು ದೇಶಕ್ಕೆ ಅನ್ನ ನೀಡುತ್ತಿರುವ ರೈತರ ಕೈಬಿಡಬೇಡಿ. ರೈತ ಸಂಘಕ್ಕೆ ಕೈಕೊಡಬೇಡಿ ಎಂದಿದ್ದಾರೆ.

ರೈತ ನಾಯಕ ದಿ.ಕೆ ಎಸ್‌ ಪುಟ್ಟಣ್ಣಯ್ಯನವರ 75ನೇ ವರ್ಷದ ಜನ್ಮದಿನ ಹಾಗೂ ಕಾಟೇರ ಚಿತ್ರತಂಡದ

ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

----------------------------
3. ಯಾದಗಿರಿಯಲ್ಲಿ ಜಲಧಾರೆ ಯೋಜನೆ ಕಾಮಗಾರಿ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುತ್ತಿದ್ದು, ಜಲಧಾರೆ

ಎನ್ನುವ ಯೋಜನೆಯ ಅಡಿಯಲ್ಲಿ 1 ಸಾವಿರದ 600 ಕೋಟಿ ರೂಪಾಯಿ ಮೊತ್ತದಲ್ಲಿ ಅನುಷ್ಠಾನ ಮಾಡುತ್ತಿರುವುದಾಗಿ

ಸಚಿವ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ ದರ್ಶನಾಪುರ್ ತಿಳಿಸಿದ್ದಾರೆ.
----------------------------
4. ರಾಜ್ಯ ಸರ್ಕಾರವು ಇದೀಗ ಎರಡನೇ ಬಾರಿ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಿದೆ.

ರಾಜ್ಯ ಸರ್ಕಾರವು ಮೊದಲ ಬಾರಿ ಆಯೋಜಿಸಿದ್ದ ಜನಸ್ಪಂದನಾ ಕಾರ್ಯಕ್ರಮಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಇದೀಗ ಫೆಬ್ರವರಿ 8ಕ್ಕೆ ವಿಧಾನಸೌಧದ ಮುಂಭಾಗದಲ್ಲಿ ರಾಜ್ಯ ಮಟ್ಟದ ಎರಡನೇ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ

ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
----------------------------
5. ಬೆಂಗಳೂರಿನ ಪ್ರಮುಖ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಒಂದಾಗಿರುವ ಕೆ.ಸಿ ಜನರಲ್‌ ಆಸ್ಪತ್ರೆ ಅಭಿವೃದ್ಧಿಗೆ ಸರ್ಕಾರ ಮುಂದಾಗಿದೆ.

ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ 150 ಕೋಟಿ ರೂಪಾಯಿ ವೆಚ್ಚದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವುದಾಗಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.  ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ತಾಯಿ ಮಕ್ಕಳ ಆಸ್ಪತ್ರೆ  ,

ಶವಾಗಾರ, ಅಡುಗೆ ಮನೆ, ಜೈವಿಕ ತ್ಯಾಜ್ಯ ಕೊಠಡಿ ಹಾಗೂ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ

ನಿಟ್ಟಿನಲ್ಲಿ 150 ಕೋಟಿ ಅನುದಾನ ಮೀಸಲಿಡಲಾಗುವುದು. ಇದನ್ನು ಸಚಿವ ಸಂಪುದಲ್ಲಿಟ್ಟು ಒಪ್ಪಿಗೆ ಪಡೆಯಲಾಗುವುದು ಎಂದಿದ್ದಾರೆ.
---------------------------- 

6. ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬದವರ ಶ್ರೇಯೋಭಿವೃದ್ಧಿಗಾಗಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ

ಮಂಡಳಿಯಿಂದ ಸ್ವಯಂ ಉದ್ಯೋಗಿ ಬ್ರಾಹ್ಮಣರಿಗೆ 5 ಲಕ್ಷ ರೂಪಾಯಿಯ ವರೆಗೆ ಸರ್ಕಾರಿ ಸಹಾಯಧನ ಸಿಗಲಿದೆ .

ಅಲ್ಲದೇ ಸ್ವಾವಲಂಬಿ ಮತ್ತು ಸಾಂದೀಪಿನಿ ಶಿಷ್ಯ ವೇತನದ ಯೋಜನೆಅರ್ಹರು

ಪಡೆದುಕೊಳ್ಳಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.