ರೈತಾಪಿ ಕೃಷಿಕರ ಮೇಲಿನ ಹೊರೆ ತಪ್ಪಿಸಲು ಬಜೆಟ್‌ನಲ್ಲಿ ಘೋಷಿಸಿದಂತೆ "ರೈತ ಶಕ್ತಿ ಯೋಜನೆ" ಗೆ ಈ ತಿಂಗಳಾಂತ್ಯಕ್ಕೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ.
ನಾಳೆ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ! ಮಹತ್ವದ ಯೋಜನೆಗಳಿಗೆ ಚಾಲನೆ
ರೈತರಿಗೆ ಕೃಷಿ ಯಾಂತ್ರಿಕರಣವು ಡೀಸೆಲ್ ಇಂಧನದ ಮೇಲೆ ಬಹುತೇಕ ಅವಲಂಬಿತವಾಗಿದೆ. ಹೀಗಾಗಿ ರೈತರ ಮೇಲಿನ ಆರ್ಥಿಕ ಹೊರೆ ಆದಷ್ಟು ಕಡಿತಗೊಳಿಸುವ ನಿಟ್ಟಿನಲ್ಲಿ 2022-23 ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ "ರೈತ ಶಕ್ತಿ ಯೋಜನೆ" (Raita Shakti Yojana) ಯನ್ನು ತಿಂಗಳಾಂತ್ಯಕ್ಕೆ ಚಾಲನೆ ನೀಡಲು ನಿರ್ಧರಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ಯಂತ್ರೋಪಕರಣಗಳನ್ನು ಪ್ರೋತ್ಸಾಹಿಸಲು ಹಾಗೂ ಇಂಧನದ (Diesel subsidy) ವೆಚ್ಚದ ಹೊರೆಯನ್ನು ಕಡಿಮೆ ಮಾಡಲು ಕರ್ನಾಟಕ ರಾಜ್ಯದಲ್ಲಿಯೇ ಮೊದಲ ಬಾರಿಗೆ ಈ "ರೈತ ಶಕ್ತಿ ಯೋಜನೆ" ಇದೇ ತಿಂಗಳಾಂತ್ಯಕ್ಕೆ ಜಾರಿಯಾಗಲಿದೆ.
ಸ್ವಯಂ ಉದ್ಯೋಗಕ್ಕೆ ನೇರ ಸಾಲ ಯೋಜನೆ: ಪ್ರತಿ ಫಲಾನುಭವಿಗೆ ಸಿಗಲಿದೆ ರೂ.1,00,000 ಧನ ಸಹಾಯ
Diesel subsidy for farmers : ಪ್ರತಿ ಎಕರೆಗೆ 250 ರೂ.ಗಳಂತೆ ಗರಿಷ್ಠ 5 ಎಕರೆಗೆ ಡಿ.ಬಿ.ಟಿ ಮೂಲಕ ಡೀಸೆಲ್ ಗೆ ಸಹಾಯಧನವನ್ನು ನೀಡುವ "ರೈತ ಶಕ್ತಿ" ಯೋಜನೆಯು ಈ ತಿಂಗಳಾಂತ್ಯಕ್ಕೆ ಅನುಷ್ಠಾನಗೊಳ್ಳುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸುಮಾರು 45 ಲಕ್ಷಕ್ಕೂ ಹೆಚ್ಚಿನ ರೈತಾಪಿ ಕುಟುಂಬಗಳಿಗೆ ಡಿಬಿಟಿ ಮೂಲಕ ಸಬ್ಸಿಡಿಯನ್ನು ನೇರವಾಗಿ ರೈತರ ಖಾತೆಗೆ ಬಿಡುಗಡೆ ಮಾಡಲಿದ್ದಾರೆ.
ರಾಜ್ಯದ ರೈತರಿಗೆ ಕೃಷಿ ಇಲಾಖೆಯ ಎಲ್ಲಾ ಯೋಜನೆಗಳನ್ನು FRUITS ಫೋರ್ಟಲ್ ಮೂಲಕ ನೋಂದಣಿ ಗುರುತಿನ ಸಂಖ್ಯೆ ಬಳಸಿ ಕಿಸಾನ್ ತಂತ್ರಾಂಶದ ಮೂಲಕವೇ ಅನುಷ್ಠಾನ ಮಾಡಲಾಗುತ್ತಿದೆ.
ಅದೇ ರೀತಿಯಲ್ಲಿ FRUITS ಪೋರ್ಟಲ್‌ನಲ್ಲಿ ನೊಂದಣಿಗೊಂಡ ರಾಜ್ಯದ ಎಲ್ಲಾ ರೈತರಿಗೆ ರೈತ ಶಕ್ತಿ ಯೋಜನೆಯನ್ನು ಸಹ ಕಿಸಾನ್ ತಂತ್ರಾಂಶ ಬಳಸಿಕೊಂಡು ನೇರ ವರ್ಗಾವಣೆ (DBT) ಮೂಲಕವೇ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ.
Millets : ರಾಷ್ಟ್ರೀಯ ಯುವಜನೋತ್ಸವದಲ್ಲಿ ಸಿರಿಧಾನ್ಯ ವೈಭವ - ಪ್ರದರ್ಶನ ಮತ್ತು ಮಾರಾಟ
ನಗದು ಯೋಜನೆಯ FRUITS ಪೋರ್ಟಲ್ ನಲ್ಲಿ ನೊಂದಣಿಗೊಂಡ ರಾಜ್ಯದ ಎಲ್ಲ ರೈತರು ಈ ಯೋಜನೆಯ ಫಲಾನುಭವಿಗಳಾಗಿರುತ್ತಾರೆ. ಈ ಯೋಜನೆಯು ಅರ್ಹತಾಧಾರಿತ ಯೋಜನೆಯಾಗಿರುವುದರಿಂದ ಯಾವುದೇ ರೈತರು ಪ್ರತ್ಯೇಕವಾಗಿ ವೈಯಕ್ತಿಕ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ, ದಾಖಲೆಗಳ ಪರಿಶೀಲನೆಯನ್ನು ಸರ್ಕಾರದ FRUITS ಪೋರ್ಟಲ್ ನಲ್ಲಿ ಲಭ್ಯವಿರುವ ದತ್ತಾಂಶಗಳ ಆಧಾರದ ಮೇಲೆ ಮಾಡಲಾಗುವುದು.
FRUITS ಪೋರ್ಟಲ್‌ನಲ್ಲಿ ನಮೂದಿಸಲಾದ ಹಿಡುವಳಿಯ ವಿಸ್ತೀರ್ಣದ ಆಧಾರದ ಮೇಲೆ ರೈತರಿಗೆ ಡೀಸೆಲ್ ಸಹಾಯಧನವನ್ನು ನೇರ ನಗದು ವರ್ಗಾವಣೆ (DBT) ಮೂಲಕ ರೈತರ ಖಾತೆಗೆ ವರ್ಗಾಯಿಸಲಾಗುವುದು.
FRUITS ತಂತ್ರಾಂಶದಲ್ಲಿ ನೋಂದಾವಣಿಗೊಂಡ ರೈತರು ಹೊಂದಿರುವ ಭೂ ಹಿಡುವಳಿಯ ಆಧಾರದ ಮೇಲೆ ಪ್ರತಿಯೊಬ್ಬ ರೈತರಿಗೆ ಪ್ರತಿ ಎಕರೆಗೆ 250 ರೂ. ರಂತೆ ಗರಿಷ್ಠ 5 ಎಕರೆಗೆ 1250 ರೂ. ವರಗೆ ಡೀಸೆಲ್ ಸಹಾಯಧನವನ್ನು ಒದಗಿಸಲಾಗುವುದು.
ಅರ್ಹ ರೈತರಿಗೆ ಡೀಸಲ್ ಸಹಾಯಧನದ ಮೊತ್ತವನ್ನು ಸರ್ಕಾರದ DBT ವೋರ್ಟಲ್ ಮೂಲಕ ಆಧಾರದ ಸೀಡೆಡ್ ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್ ಖಾತೆಗೆ ವರ್ಷಕ್ಕೊಮ್ಮೆ ವರ್ಗಾಯಿಸಲಾಗುವುದು.
Share your comments