News

ಸಿಹಿಸುದ್ದಿ: ರೈತರಿಗೆ 5 ತಾಸಿನ ಬದಲು 7 ತಾಸು ವಿದ್ಯುತ್‌ ಪೂರೈಕೆ ಸಿಎಂ ಬೊಮ್ಮಾಯಿ!

30 September, 2022 2:37 PM IST By: Kalmesh T
CM orders to supply electricity to farmers for 7 hours instead of 5 hours!

ರೈತರ ಬೆಳೆಗಳಿಗೆ ನೀರು, ವಿದ್ಯುತ್‌ ಸಮಸ್ಯೆಯ ಅರಿವಿದೆ. 5 ತಾಸು ವಿದ್ಯುತ್‌ ಪೂರೈಕೆಯಾಗುತ್ತಿರುವ ವಿಚಾರ ನನ್ನ ಗಮನಕ್ಕೆ ಬಂದಿದೆ. ನಾಳೆಯಿಂದಲೇ ಏಳು ತಾಸು ವಿದ್ಯುತ್‌ ಪೂರೈಸುವಂತೆ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ತಿಳಿಸಿದ್ದಾರೆ.

ಇದನ್ನೂ ಓದಿರಿ: ಲಂಪಿ ರೋಗಕ್ಕೆ ಬಲಿಯಾದ ಜಾನುವಾರುಗಳಿಗೆ ಸಿಎಂ ಬೊಮ್ಮಾಯಿ ಪರಿಹಾರ ಘೋಷಣೆ: ! ಎಷ್ಟು ಗೊತ್ತೆ?

ರೈತರ ಬೆಳೆಗಳಿಗೆ ನೀರು, ವಿದ್ಯುತ್‌ ಸಮಸ್ಯೆಯ ಅರಿವಿದೆ. 5 ತಾಸು ವಿದ್ಯುತ್‌ ಪೂರೈಕೆಯಾಗುತ್ತಿರುವ ವಿಚಾರ ನನ್ನ ಗಮನಕ್ಕೆ ಬಂದಿದೆ. ನಾಳೆಯಿಂದಲೇ ಏಳು ತಾಸು ವಿದ್ಯುತ್‌ ಪೂರೈಸುವಂತೆ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ತಿಳಿಸಿದ್ದಾರೆ.

ಬ್ಯಾಡಗಿ ತಾಲೂಕಿನ ಅರಬಗೊಂಡ ಗ್ರಾಮದಲ್ಲಿ 70 ಕೋಟಿ ವೆಚ್ಚದ ಮೆಗಾಡೈರಿ ನಿರ್ಮಾಣ ಕಾರ್ಯಕ್ಕೆ ಗುರುವಾರ ಮುಖ್ಯಮಂತ್ರಿ ಬೊಮ್ಮಾಯಿ ಭೂಮಿಪೂಜೆ ನೆರವೇರಿಸಿದರು.

ಮಳೆ ವರದಿ; ಅಕ್ಟೋಬರ್‌ 2ರ ವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ! 

ಈ ವೇಳೆ ಮಾತನಾಡಿದ ಅವರು, ಈ ಮೆಗಾ ಡೈರಿಯಿಂದ ಹಾವೇರಿ ಒಕ್ಕೂಟವು ಮುಂದಿನ ದಿನಗಳಲ್ಲಿ ದೊಡ್ಡ ಪ್ರಮಾಣದ ಲಾಭ ನಿರೀಕ್ಷಿಸಬಹುದಾಗಿದೆ.

ಮೆಗಾ ಡೈರಿ ಯೋಜನೆ ಮೂರು ಲಕ್ಷ ಲೀಟರ್‌ವರೆಗೆ ಹಾಲು ಉತ್ಪಾದಿಸಿ ಮೌಲ್ಯವರ್ಧನೆ ಮಾಡುವ ಸಾಮರ್ಥ್ಯ ಹೊಂದಿದೆ. ಇಲ್ಲೇ ಪ್ಯಾಕ್‌ಮಾಡಿ ಮಾರಾಟ ಮಾಡಿದರೆ ಹೆಚ್ಚು ಲಾಭ ಸಿಗಲಿದೆ ಎಂದರು.

11 ಕೋಟಿಗೂ ಹೆಚ್ಚು ರೈತರ ಖಾತೆಗೆ ಈ ದಿನ ಬರಲಿದೆ ಪಿಎಂ ಕಿಸಾನ್‌ 12ನೇ ಕಂತಿನ ಹಣ!

ಪೌಚ್‌ನಲ್ಲಿ ಹಾಲು ಪ್ಯಾಕ್‌ ಮಾಡಲು ಹೆಚ್ಚುವರಿಯಾಗಿ .20 ಕೋಟಿ ಬಿಡುಗಡೆ ಮಾಡಲಾಗಿದೆ. ಒಟ್ಟು 1.50 ಲಕ್ಷ ಲೀಟರ್‌ ಹಾಲು ಪ್ಯಾಕ್‌ ಮಾಡಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು.

ಧಾರವಾಡ ಹಾಲು ಒಕ್ಕೂಟದಿಂದ ಪ್ರತ್ಯೇಕಗೊಂಡಿರುವ ಹಾವೇರಿ ಜಿಲ್ಲಾ ಸಹಕಾರ ಹಾಲು ಒಕ್ಕೂಟಕ್ಕೆ ಮೆಗಾ ಡೈರಿ ಸ್ಥಾಪಿಸಬೇಕೆಂಬ ಬೇಡಿಕೆ ಬಹುದಿನಗಳಿಂದ ಇತ್ತು.