News

ಮೈಸೂರು ಅಪಘಾತ: ಮೃತರ ಕುಟುಂಬಸ್ಥರಿಗೆ 2 ಲಕ್ಷ ರೂ ಪರಿಹಾರ- ಸಿಎಂ

30 May, 2023 10:46 AM IST By: Maltesh
CM Siddaramaiah announces Rs 2 lakh each compensation

ಮೈಸೂರು ಬಳಿ ನಡೆದ ರಸ್ತೆ ಅಪಘಾತದಲ್ಲಿ 10 ಜನರು ದಾರುಣ ಅಂತ್ಯ ಕಂಡಿದ್ದಾರೆ. ಪ್ರಾಣ ಕಳೆದುಕೊಂಡವರಲ್ಲಿ ಇಬ್ಬರು ಮಕ್ಕಳೂ ಸೇರಿದ್ದಾರೆ. ಕುರಬೂರು ಬಸ್ ಮತ್ತು ಕಾರು ಡಿಕ್ಕಿ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಈ ದುರಂಯ ಸಂಭವಿಸಿದೆ. ಸದ್ಯದ ಮಾಹಿತಿ ಪ್ರಕಾರ ಕಾರಿನಲ್ಲಿದ್ದ ವ್ಯಕ್ತಿ ಬದುಕುಳಿದಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಧಾನಿ ಮೋದಿ ಸಂತಾಪ

ಮೈಸೂರು ಬಳಿ ನಡೆದ ಅಪಘಾತಕ್ಕೆ ಪ್ರಧಾನಿ ನರೇಂದ್ರ ಮೋದಿ ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ಕರ್ನಾಟಕದ ಮೈಸೂರಿನಲ್ಲಿ ಸಂಭವಿಸಿದ ಭೀಕರ ಅಪಘಾತದಿಂದ ತೀವ್ರ ದುಃಖವಾಗಿದೆ. ದುರ್ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬದವರಿಗೆ ದೇವರು ದುಖಃ ಭರಿಸುವ ಶಕ್ತಿಯನ್ನು ನೀಡಲಿ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಪರಿಹಾರ ಘೋಷಣೆ

ಇನ್ನು ಮೈಸೂರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಹಣಕಾಸಿನ ನೆರವು ಘೋಷಣೆ ಮಾಡಿದ್ದಾರೆ. ಮೃತ ಕುಟುಂಬದವರಿಗೆ 2 ಲಕ್ಷ ರೂಪಾಯಿಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿದ ಅವರು  ʼʼಮೈಸೂರು ಜಿಲ್ಲೆಯ ತಿ.ನರಸೀಪುರ ಬಳಿ ಸಂಭವಿಸಿದ ಅಪಘಾತದಲ್ಲಿ 10 ಮಂದಿ ಸಾವಿಗೀಡಾದ ಸುದ್ದಿ ಕೇಳಿ ಸಂಕಟವಾಯಿತು‌. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ದುರ್ಘಟನೆಯಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆʼʼ ಎಂದು ಟ್ವೀಟ್‌ ಮಾಡಿದ್ದಾರೆ.

ಘಟನೆಯ ಹಿನ್ನೆಲೆ

ಮೈಸೂರಿನ ಕುರಬೂರು ಬಸ್‌ ಹಾಗೂ ಇನ್ನೋವಾ ಕಾರ್‌ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ  ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಮೃತರು ಮಹದೇಶ್ವರ ಬರಟ್ಟಕ್ಕೆ ತೆರಳಿ ವಾಪಸ್ಸಾಗುತ್ತಿದ್ದಾಗ ಈ ಘಟನೆ ನಡೆದಿದೆ. ಮೃತರು ಬಳ್ಳಾರಿ ಜಿಲ್ಲೆಯವರೆಂದು ಗುರುತಿಸಲಾಗಿದೆ.