1. ಸುದ್ದಿಗಳು

ಪಿಎಂ ಮೋದಿ ಹಿಂದುಳಿದವರು ಇನ್ನಷ್ಟು ಹಿಂದುಳಿಯುವಂತೆ ಮಾಡಿದ್ದಾರೆ- ಸಿಎಂ ಸಿದ್ದರಾಮಯ್ಯ ಕಿಡಿ

Maltesh
Maltesh
CM Siddaramaiah talk about modi in telangana

ಪ್ರಧಾನಿ ಮೋದಿ 9 ವರ್ಷಗಳಲ್ಲಿ ಹಿಂದುಳಿದವರಿಗೆ, ದಲಿತರ ಉದ್ಧಾರಕ್ಕೆ ಯಾವ ಕಾರ್ಯಕ್ರಮಗಳನ್ನೂ ಜಾರಿ ಮಾಡಲಿಲ್ಲ. ಬದಲಿಗೆ ಹಿಂದುಳಿದವರು ಇನ್ನಷ್ಟು ಹಿಂದುಳಿಯುವಂತೆ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದ್ದಾರೆ.

ಮೊನ್ನೆ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಕಾಮರೆಡ್ಡಿ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ "ಹಿಂದುಳಿದ ವರ್ಗಗಳ ನಿರ್ಣಯ" ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.

ಪ್ರಧಾನಿ ಮೋದಿಯವರು ಹಿಂದುಳಿದವರ ಉದ್ಧಾರಕ್ಕೆ ಅವತಾರ ಎತ್ತಿದವರಂತೆ ಭಾಷಣ ಮಾಡುತ್ತಾರೆ. ಆದರೆ ಅವರು ಪ್ರಧಾನಿ ಆದ 9 ವರ್ಷಗಳಲ್ಲಿ ಹಿಂದುಳಿದವರಿಗೆ, ದಲಿತರ ಉದ್ಧಾರಕ್ಕೆ ಯಾವ ಕಾರ್ಯಕ್ರಮಗಳನ್ನೂ ಜಾರಿ ಮಾಡಲಿಲ್ಲ.

ಬದಲಿಗೆ ಹಿಂದುಳಿದವರು ಇನ್ನಷ್ಟು ಹಿಂದುಳಿಯುವಂತೆ ಮಾಡಿದ್ದಾರೆ. ಮೋದಿಯವರು ದೇಶದ ಶೇ.4 ರಷ್ಟು ಮೇಲ್ವರ್ಗದ ಜನರ ಉದ್ದಾರಕ್ಕೆ ಮಾತ್ರ ಕೆಲಸ ಮಾಡುತ್ತಾರೆ. ನಾಗಪುರದ ಈ ಶೇ.4 ಜನರ ಪರವಾಗಿ ಹೇಳಿಕೊಟ್ಟ ಕಾರ್ಯಕ್ರಮವನ್ನು ಜಾರಿ ಮಾಡುವುದಷ್ಟೆ ಮೋದಿಯವರ ಕೆಲಸ ಎಂದು ಸಿಎಂ ವಾಗ್ದಾಳಿ ನಡೆಸಿದರು.

ಕರ್ನಾಟಕ ರಾಜ್ಯದಲ್ಲಿ ನಾವು ಐದು ಗ್ಯಾರಂಟಿಗಳನ್ನು 100 ದಿನಗಳಲ್ಲಿ ಜಾರಿ ಮಾಡಿದ್ದೇವೆ. ತೆಲಂಗಾಣದಲ್ಲೂ ಒಂದು ಬೋನಸ್ ಸೇರಿ ಆರು ಗ್ಯಾರಂಟಿಗಳು 100 ದಿನಗಳಲ್ಲಿ ಜಾರಿ ಆಗುತ್ತವೆ. ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯೇ ಆಗಿಲ್ಲ ಎಂಬ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಹಸಿ ಹಸಿ ಸುಳ್ಳುಗಳನ್ನು ಯಾರೊಬ್ಬರೂ ನಂಬಬೇಡಿ ಎಂದು ಮನವಿ ಮಾಡುತ್ತೇನೆ. ಕೆ.ಸಿ.ಆರ್ ಅವರೇ, ಕರ್ನಾಟಕ ರಾಜ್ಯಕ್ಕೆ ಬನ್ನಿ. 5 ಗ್ಯಾರಂಟಿ ಯೋಜನೆಗಳ ಸಕ್ಸಸ್ ನೋಡಿ ಬಳಿಕ ಚರ್ಚೆ ಮಾಡೋಣ. ನನ್ನ ಸವಾಲು ಸ್ವೀಕರಿಸಲು ಸಿದ್ಧರಿದ್ದೀರ?

BJP ಮತ್ತು BRS ಎರಡೂ ಒಂದೇ. BRS ತೆಲಂಗಾಣದಲ್ಲಿ BJP ಪಕ್ಷದ ಬಿ ಟೀಮ್ ಆಗಿ ಕೆಲಸ ಮಾಡುತ್ತಿದೆ. ತೆಲಂಗಾಣದ ಜನತೆ ಕೆ.ಸಿ.ಆರ್ ಮತ್ತು ಮೋದಿಯವರ ಮಕ್ಮಲ್ ಟೋಪಿಗೆ ಈ ಬಾರಿ ತಲೆ ಕೊಡುವುದಿಲ್ಲ ಎಂಬ ನಂಬಿಕೆ ನನಗಿದೆ. ಕೆ.ಸಿ.ಆರ್ ಹತ್ತು ವರ್ಷ ಅಧಿಕಾರದಲ್ಲಿದ್ದೂ ತೆಲಂಗಾಣವನ್ನು ಅಭಿವೃದ್ಧಿ ಮಾರ್ಗದಲ್ಲಿ ಕೊಂಡೊಯ್ಯದೆ ಭ್ರಷ್ಟಾಚಾರದಲ್ಲಿ ಮುಳುಗಿಸಿದರು. ಪ್ರಧಾನಿ ಮೋದಿಯವರು ಈ ಹತ್ತು ವರ್ಷಗಳಲ್ಲಿ ದೇಶದ ಆರ್ಥಿಕತೆಯನ್ನು ಹಳ್ಳ ಹಿಡಿಸಿದರು. ಇದನ್ನು ಕರ್ನಾಟಕದ ಜನತೆ ಅರ್ಥ ಮಾಡಿಕೊಂಡರು, ಜಾಗೃತರಾದರು. ತೆಲಂಗಾಣದ ಜನತೆಯೂ ಅರ್ಥ ಮಾಡಿಕೊಳ್ಳಬೇಕಾದ ಸಮಯ ಬಂದಿದೆ.
ಮೋದಿಯವರು ಜಾರಿಗೆ ತಂದಿರುವ ಎಲ್ಲಾ ಜನದ್ರೋಹಿ, ಜನ ವಿರೋಧಿ ಯೋಜನೆಗಳಿಗೆ ಕೆ.ಸಿ.ಆರ್ ಮತ್ತು ಬಿ.ಆರ್.ಎಸ್ ಬೆಂಬಲ ನೀಡಿ ತಾವೂ ಜನವಿರೋಧಿ ಆಗಿದ್ದಾರೆ.

ಕೆ.ಸಿ.ಆರ್ ಚುನಾವಣೆಯಲ್ಲಿ ಖರ್ಚು ಮಾಡುವ ಹಣ ಪಾಪದ ಹಣ. ಆದರೆ ತೆಲಂಗಾಣ ಜನತೆ BRC ಯನ್ನು ಸೋಲಿಸಲು ಸ್ಪಷ್ಟ ತೀರ್ಮಾನ ಮಾಡಿದ್ದಾರೆ.
BJP ತೆಲಂಗಾಣದಲ್ಲಿ 5 ಸೀಟು ಗೆದ್ದರೆ ಅದೇ ಹೆಚ್ಚು. ನರೇಂದ್ರ ಮೋದಿ ನೂರು ಬಾರಿ ತೆಲಂಗಾಣಕ್ಕೆ ಪ್ರಚಾರಕ್ಕೆ ಬಂದರೂ ಇಲ್ಲಿ ಬಿಜೆಪಿ ಗೆಲ್ಲಲ್ಲ. ಬಿಜೆಪಿ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳುತ್ತಾರೆ.ರೇಂದ್ರ ಮೋದಿ ಅವರು ಕರ್ನಾಟಕಕ್ಕೂ 48 ಬಾರಿ ಚುನಾವಣಾ ಪ್ರಚಾರಕ್ಕೆ ಬಂದಿದ್ದರು. ಅವರು ಪ್ರಚಾರ ಮಾಡಿದ ಜಾಗಗಳಲ್ಲೆಲ್ಲಾ ಬಿಜೆಪಿ ಹೀನಾಯವಾಗಿ ಸೋತಿದೆ ಎಂದು ಸಿಎಂ ವ್ಯಂಗ್ಯವಾಡಿದರು.

Published On: 13 November 2023, 04:57 PM English Summary: CM Siddaramaiah talk about modi in telangana

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.