1. ಸುದ್ದಿಗಳು

ಉಡುಪಿ ವಿಡಿಯೋ ಕೇಸ್‌: ಮುನ್ನ ​ಮೌನ ಮುರಿದ ಸಿಎಂ ಸಿದ್ದರಾಮಯ್ಯ ಏನಂದ್ರು?

Maltesh
Maltesh
CM Siddaramaiah talk about udupi case

ಉಡುಪಿ ಕಾಲೇಜು ತನಿಖೆಯನ್ನು ಡಿ.ವೈ.ಎಸ್.ಪಿ ಮಟ್ಟದ ಅಧಿಕಾರಿ ಮಾಡುತ್ತಿದ್ದು, ಪ್ರಕರಣವನ್ನು ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಉದ್ಭವವಾಗುವುದಿಲ್ಲ. ತನಿಖೆಯಾಗಿ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ನಿನ್ನೆ ಉಡುಪಿಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಉಡುಪಿ ಕಾಲೇಜೊಂದರಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುವೋ ಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್.ಐ.ಆರ್ ರಿಜಿಸ್ಟರ್ ಆಗಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದರೂ ಅಂಥವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುವುದು. ಯಾರೊಬ್ಬರೂ ಕಾನೂನನ್ನು ಕೈಗೆ ತೆಗೆದುಕೊಳ್ಳುವಂತಿಲ್ಲ ಎಂದು ಪೊಲೀಸರಿಗೆ ಸೂಚಿಸಿದ್ದೇನೆ. ನಾಡಿನ ಜನರಿಗೆ ಸುರಕ್ಷಿತ, ನೆಮ್ಮದಿಯ ವಾತಾವರಣ ಕಲ್ಪಿಸುವುದು ನಮ್ಮ ಕರ್ತವ್ಯ. ಇದಕ್ಕೆ ಅಡ್ಡಿಪಡಿಸುವವರು ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಅವರು ತಿಳಿಸಿದರು.

ಮುಂದುವರೆದು ಮಾತನಾಡಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಿಬಿಐ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ಅವರ ಪೋಷಕರು ಹಾಗೂ ಸಾಮಾಜಿಕ ಹೋರಾಟಗಾರರು ಈ ಪ್ರಕರಣದ ಮರುತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬಹುದೆಂದು ಚರ್ಚಿಸಿ ತೀರ್ಮಾನ ಮಾಡುತ್ತೇವೆ. ನ್ಯಾಯಾಲಯದ ತೀರ್ಪನ್ನು ಅರ್ಥೈಸಿಕೊಂಡು ನಂತರ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದರೆ ಸಲ್ಲಿಸಲಾಗುವುದು.

ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಅಥವಾ ಯಾವುದೇ ವ್ಯಕ್ತಿಯ ವಿರುದ್ಧ ಅನಗತ್ಯವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು.  ರಚನಾತ್ಮಕ ಟೀಕೆ, ಟಿಪ್ಪಣಿಗಳಿಗೆ ನಾವು ಮುಕ್ತರಿದ್ದೇವೆ, ಆದರೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದುರುಪಯೋಗ ಪಡಿಸಿಕೊಂಡು ಒಬ್ಬ ವ್ಯಕ್ತಿಯ ಅಥವಾ ಆತನ ಕುಟುಂಬದವರ ಮೇಲೆ ಸುಳ್ಳು ಸುದ್ದಿ ಹಬ್ಬಿಸುವುದು, ವೈಯಕ್ತಿಕವಾಗಿ ತೇಜೋವಧೆ ಮಾಡುವುದು ಇಂತದ್ದನ್ನು ಸಹಿಸುವುದಿಲ್ಲ.

ಆರೋಗ್ಯ ಸೂಚ್ಯಂಕದಲ್ಲಿ ಉಡುಪಿ ಕುಸಿತ: ಅಧಿಕಾರಿಗಳಿಗೆ ಅಮಾನತು ಎಚ್ಚರಿಕೆ!

2015 ರಲ್ಲಿ ಆರೋಗ್ಯ ಸೂಚ್ಯಂಕದಲ್ಲಿ ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿತ್ತು. ಈಗ 18ನೇ ಸ್ಥಾನದಲ್ಲಿರುವುದಕ್ಕೆ ತಾಯಂದಿರು ಮತ್ತು ಮಕ್ಕಳ ಸಾವಿನ ಪ್ರಮಾಣದಲ್ಲಿ ಏರಿಕೆ ಆಗಿರುವುದು ಕಾರಣ. ಉಡುಪಿ ಸುಶಿಕ್ಷಿತರ ಜಿಲ್ಲೆ. ಆರೋಗ್ಯ ಸೂಚ್ಯಂಕದಲ್ಲಿ ಈ ಪ್ರಮಾಣದ ಕುಸಿತ ಕಂಡಿರುವುದಕ್ಕೆ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯವೂ ಕಾರಣ. ಜಿಲ್ಲೆಯನ್ನು ಮತ್ತೆ ಮೊದಲ ಸ್ಥಾನಕ್ಕೆ ತರಬೇಕು. ಇಲ್ಲದಿದ್ದರೆ ಕರ್ತವ್ಯದಿಂದ ಅಮಾನತು ಮಾಡಲಾಗುವುದು ಎಂದು ಸಿಎಂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಉಡುಪಿ ಜಿಲ್ಲೆ ಶೈಕ್ಷಣಿಕ ಸೂಚ್ಯಂಕದಲ್ಲಿ 13ನೇ ಸ್ಥಾನಕ್ಕೆ ಕುಸಿದಿರುವುದಕ್ಕೆ ಜಿಲ್ಲಾ ಶಿಕ್ಷಣಾಧಿಕಾರಿಗಳು ಹೊಣೆ. ಮುಂದಿನ ಅವಧಿ ವೇಳೆಗೆ ಜಿಲ್ಲೆಯು ಶೈಕ್ಷಣಿಕ ಸೂಚ್ಯಂಕದಲ್ಲಿ ಕಡ್ಡಾಯವಾಗಿ ಏರುಗತಿಯಲ್ಲಿ ಸಾಗಬೇಕು, ಇಲ್ಲದಿದ್ದರೆ ಇದನ್ನು ಕರ್ತವ್ಯಲೋಪವೆಂದು ಪರಿಗಣಿಸಿ ಅಮಾನತು ಮಾಡಬೇಕಾಗುತ್ತದೆ.

ಉಡುಪಿ ಜಿಲ್ಲೆಯಲ್ಲಿ ರಸ್ತೆ ಗುಂಡಿಗಳು, ಅಪಘಾತ ಮತ್ತು ಸಾವುಗಳ ಪ್ರಮಾಣ ಹಾಗೂ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಳವಾಗಿದೆ. ಇದನ್ನು ಪರಿಣಾಮಕಾರಿಯಾಗಿ ನಿರ್ವಹಿಸುವುದು ಲೋಕೋಪಯೋಗಿ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಕರ್ತವ್ಯ. ಉಡುಪಿ ಜಿಲ್ಲೆಯಲ್ಲಿ ಆರೋಗ್ಯ, ಶಿಕ್ಷಣ, ಕಾನೂನು ಸುವ್ಯವಸ್ಥೆ, ಮೂಲ ಸೌಕರ್ಯಗಳ ಕೊರತೆ ಆಗದಂತೆ ಎಲ್ಲ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಜನರಿಗೆ ಸಕಾಲದಲ್ಲಿ ಸ್ಪಂದಿಸಿ, ಅವರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಅವರು ಹೇಳಿದರು.

Published On: 02 August 2023, 10:39 AM English Summary: CM Siddaramaiah talk about udupi case

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.