1. ಸುದ್ದಿಗಳು

“ಬಡವರ ಅಕ್ಕಿಯಲ್ಲಿ ಯಾರು ಎಷ್ಟೇ ರಾಜಕಾರಣ ಮಾಡಿದ್ರು ಅನ್ನಭಾಗ್ಯ ಜಾರಿ ಫಿಕ್ಸ್‌”-ಸಿಎಂ

Maltesh
Maltesh

ಕಾಂಗ್ರೆಸ್‌ ಸರ್ಕಾರ ನೀಡಿದ್ದ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾಗಿದ್ದ ಅನ್ನಭಾಗ್ಯ ಗ್ಯಾರಂಟಿಯು ದಿನದಿಂದ ದಿನಕ್ಕೆ ಜಟಿಲವಾಗುತ್ತಾ ಸಾಗಿದೆ. ಕೇಂದ್ರ ಸರ್ಕಾರದ ಮೇಲೆ ಕಿಡಿಕಾರುತ್ತಿರುವ ರಾಜ್ಯ ಕಾಂಗ್ರೆಸ್‌ ದಾಸ್ತಾನಿದ್ದರು ಅಕ್ಕಿ ನೀಡದ ಕೇಂದ್ರದ ಮೇಲೆ ಸಿಎಂ ಹರಿಹಾಯ್ದಿದ್ದಾರೆ. ಅಷ್ಟೇ ಅಲ್ಲದೆ ಅನ್ನಭಾಗ್ಯವನ್ನು ಖಂಡಿತವಾಗಿ ಈಡೇರಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ನ್ಯಾಷನಲ್ ಕೋ-ಆಪರೇಟಿವ್ ಕನ್ಸೂಮರ್ಸ್ ಫೆಡರೇಷನ್ (ಎನ್.ಸಿ.ಸಿ.ಎಫ್), ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್ (ನಾಫೆಡ್) ಹಾಗೂ  ಕೇಂದ್ರೀಯ ಭಂಡಾರ, ಈ ಮೂರು ಸಂಸ್ಥೆಗಳು ಭಾರತ ಸರ್ಕಾರಕ್ಕೆ ಸೇರಿದ್ದು, ಈ ಮೂರು ಸಂಸ್ಥಗಳಿಂದ ಅಕ್ಕಿ ಪಡೆಯಲು ದರಪಟ್ಟಿ ಕರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

Free Smartphones : ಮಹಿಳೆಯರಿಗೆ ಸ್ಮಾರ್ಟ್‌ ಫೋನ್‌ ಖರೀದಿಗೆ ಹಣ

ಈ ಕುರಿತು ಫೇಸ್‌ಬುಕ್‌ನಲ್ಲಿ ಮಾಹಿತಿ ನೀಡಿದ ಅವರು  ಭಾರತೀಯ ಆಹಾರ ಮಂಡಳಿ(ಎಫ್.ಸಿ.ಐ) ನಿಂದ 34 ರೂ. ಅಕ್ಕಿ , 2.60 ರೂ. ಸಾಗಾಣಿಕೆ ವೆಚ್ಚ ಸೇರಿ ಒಂದು ಕೆ.ಜಿ. ಅಕ್ಕಿಗೆ ಒಟ್ಟು 36.40 ರೂ. ವೆಚ್ಚ ತಗಲುತ್ತದೆ. ಈ ಮೂರು ಸಂಸ್ಥೆಗಳು ನಮೂದಿಸುವ ದರ, ಸರಬರಾಜು ಮಾಡುವ ಪ್ರಮಾಣಗಳ ವಿವರ ಪಡೆಯಲಾಗುವುದು. ಟೆಂಡರ್ ಮೂಲಕ ಅಕ್ಕಿ ಪಡೆಯಲೂ ಕ್ರಮ ಕೈಗೊಳ್ಳಲಾಗುವುದು ಎಂದರು.

ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ವಿತರಿಸಲು ಒಂದು ತಿಂಗಳಿಗೆ 840 ಕೋಟಿ ರೂ. ವೆಚ್ಚ ತಗುಲಲಿದೆ. ವರ್ಷಕ್ಕೆ ರೂ. 10,092 ಕೋಟಿ ವೆಚ್ಚವಾಗಲಿದೆ. ಸರ್ಕಾರ ಈ ವೆಚ್ಚವನ್ನು ಭರಿಸಿ ಅಕ್ಕಿಯನ್ನು ವಿತರಿಸಲು ಸಿದ್ಧವಿದೆ.  ಅಕ್ಕಿಯ ದಾಸ್ತಾನು ಲಭ್ಯವಿದ್ದರೂ ಕೇಂದ್ರ ಸರ್ಕಾರದವರು ಅಕ್ಕಿ ನೀಡಲು ಒಪ್ಪುತ್ತಿಲ್ಲ. ರಾಜ್ಯ ಬಿಜೆಪಿ ಪಕ್ಷದವರು ರಾಜ್ಯದ ಬಡವರಿಗೆ ಅನುಕೂಲವಾಗಲು ಅಕ್ಕಿಯನ್ನು ವಿತರಿಸುವಂತೆ ಕೇಂದ್ರ ಸರ್ಕಾರವನ್ನು ಮನವಿ ಮಾಡಬಹುದಲ್ಲವೇ ಎಂದು ಅವರು ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ರಾಗಿ, ಜೋಳವನ್ನು 6 ತಿಂಗಳವರೆಗೆ ತಲಾ 2 ಕೆಜಿ ಕೊಡುವಷ್ಟು ಮಾತ್ರ ದಾಸ್ತಾನು ಲಭ್ಯವಿದೆ. ಹಳೇ ಮೈಸೂರು ಭಾಗದ ಜನರಿಗೆ 2 ಕೆಜಿ ರಾಗಿ ಹಾಗೂ ಹೈದ್ರಾಬಾದ್ ಕರ್ನಾಟಕ ಹಾಗೂ ಮುಂಬೈ ಕರ್ನಾಟಕದ ಭಾಗದ ಜನರಿಗೆ 2 ಕೆಜಿ ಜೋಳ ನೀಡಬಹುದು.

ಇನ್ನುಳಿದ 3 ಕೆಜಿಯಷ್ಟು ಪ್ರಮಾಣದ ಅಕ್ಕಿಯನ್ನು ನೀಡಬೇಕಾಗುತ್ತದೆ. ಜುಲೈ 1 ರಿಂದ ರಾಜ್ಯದ ಜನರಿಗೆ ಅಕ್ಕಿಯನ್ನು ನೀಡಲು ಸರ್ಕಾರ ಪ್ರಮಾಣಿಕವಾಗಿ ಪ್ರಯತ್ನಿಸುತ್ತಿದೆ. ಕೇಂದ್ರ ಸರ್ಕಾರದಲ್ಲಿ ಅಕ್ಕಿಯ ದಾಸ್ತಾನು ಲಭ್ಯವಿದ್ದು, ಅವರು ರಾಜ್ಯಕ್ಕೆ ಅಕ್ಕಿ ನೀಡಲು ಮನಸ್ಸು ಮಾಡಬೇಕಿದೆ. ಎಂಎಸ್ ಪಿ ಮೂಲಕ ಅಕ್ಕಿ ಖರೀದಿಸಬೇಕಾಗಿದೆ. ಬಡವರಿಗೆ ಅಕ್ಕಿ ನೀಡುವ ವಿಷಯದಲ್ಲಿ ಯಾರೇ ಎಷ್ಟೇ ರಾಜಕಾರಣ ಮಾಡಿದರೂ, ನಮ್ಮ ಸರ್ಕಾರ ಅನ್ನಭಾಗ್ಯ ಯೋಜನೆಯನ್ನು ಖಂಡಿತ ಜಾರಿಗೊಳಿಸಲಿದೆ.

ಒಂದು ಎಕರೆ ಭೂಮಿಯಲ್ಲಿ ಕೋಟಿಗಟ್ಟಲೆ ಆದಾಯ ಕೊಡುವ ಕೃಷಿ  ಇದು

ಸಹಕಾರಿ ಒಕ್ಕೂಟದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಪದೇ ಪದೇ ಹೇಳುತ್ತಾರೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಕೇಂದ್ರ ಸರ್ಕಾರಕ್ಕೆ ತೆರಿಗೆ ಬರುವುದು ರಾಜ್ಯಗಳಿಂದ. ಹೀಗಾಗಿ ಅವರು ಒಕ್ಕೂಟ ಧರ್ಮ ಪಾಲನೆ ಮಾಡುವ ಮೂಲಕ ರಾಜ್ಯಗಳಿಗೆ ಸಹಕಾರ ನೀಡಬೇಕು.

Published On: 19 June 2023, 04:19 PM English Summary: CM Siddaramaih Talk About Aanna Bhagya Issue

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.