News

ಕರ್ನಾಟಕದಲ್ಲಿ ಮೇ 15ರವರೆಗೆ ಲಾಕ್‍ಡೌನ್‍ಗೆ ಸಿಎಂ ಒಲವು

27 April, 2020 6:48 PM IST By:

 ಕೊರೊನಾ ವೈರಸ್ ಸೋಂಕು (ಕೋವಿಡ್-19) ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಮೇ 3ರ ಬಳಿಕವೂ ಹಾಟ್‍ಸ್ಪಾಟ್ ಪ್ರದೇಶಗಳಲ್ಲಿ ಲಾಕ್ಡೌನ್ ಮುಂದುವರಿಸುವ ಬಗ್ಗೆ ಹೆಚ್ಚಿನ ಮುಖ್ಯಮಂತ್ರಿಗಳು ಪ್ರಧಾನಿ ನರೇಂದ್ರ ಮೋದಿ ಬಳಿ ಚರ್ಚೆ ನಡೆಸಿದ್ದಾರೆ.

ದೇಶಾದ್ಯಂತ ಎರಡನೇ ಹಂತದಲ್ಲಿ ಮುಂದುವರಿಸಿರುವ ಲಾಕ್ ಡೌನ್ ಕುರಿತ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪರಿಶೀಲನಾ ಸಭೆ ನಡೆಸಿದ ಈ ವೇಳೆ, ಮೇ 16 ವರೆಗೆ ಲಾಕ್ಡೌನ್ ವಿಸ್ತರಣೆಗೆ ಅವಕಾಶ ನೀಡಬೇಕು ಎಂದು ಮೇಘಾಲಯ ಮತ್ತು ಮಿಜೋರಾಂ ಮುಖ್ಯಂತ್ರಿಗಳು ಮನವಿ ಮಾಡಿದ್ದಾರೆ. ಹಂತಹಂತವಾಗಿ ಆರ್ಥಿಕ ಚಟುವಟಿಕೆಗಳಿಗೆ ಅನುಮತಿ ನೀಡುತ್ತೇವೆ ಎಂದು ಉತ್ತರಾಖಂಡ ಮುಖ್ಯಮಂತ್ರಿಯವರು ಪ್ರಧಾನಿಗೆ ತಿಳಿಸಿದ್ದಾರೆ.

ಪ್ರಸ್ತುತ ಕೋವಿಡ್ 19 ವೈರಸ್ ಬಿಕ್ಕಟ್ಟನ್ನು ನಿರ್ವಹಿಸಲು ರಾಜ್ಯಗಳ ಇಚ್ಛಾಶಕ್ತಿಯ ಶ್ರಮ ದೊಡ್ಡ ಬೆಂಬಲ ನೀಡಿದಂತಾಗಿದೆ. ಕಳೆದ ಒಂದೂವರೆ ತಿಂಗಳಿನಿಂದ ರಾಜ್ಯ ಸರ್ಕಾರಗಳು ಕೈಗೊಂಡ ಕ್ರಮದಿಂದ ಸಾವಿರಾರು ಮಂದಿಯ ಜೀವ ಉಳಿದಂತಾಗಿದೆ. ನಾವು ಈಗಾಗಲೇ ಎರಡು ಹಂತದ ಲಾಕ್ ಡೌನ್ ಕಂಡಿದ್ದೇವೆ. ಮೊದಲ ಹಂತದಲ್ಲಿ ಕಠಿಣ ನಿಯಮ ಜಾರಿಯಲ್ಲಿದ್ದು, ನಂತರ 2ನೇ ಹಂತದಲ್ಲಿ ಸ್ವಲ್ಪ ಸಡಿಲಿಕೆ ಮಾಡಲಾಗಿತ್ತು.  ಕೊರೊನಾ ವಿರುದ್ಧದ ಹೋರಾಟದಲ್ಲಿ ರಾಜ್ಯ ಸರ್ಕಾರಗಳ ಪಾತ್ರ ಮತ್ತು ಸಹಕಾರವನ್ನು ಪ್ರಧಾನಿಯವರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಲಾಕ್ಡೌನ್ ನಿಯಮ ಉಲ್ಲಂಘಿಸಬಾರದು. ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮಲ್ಲಿ ಕೊರೊನಾ ಕಡಿಮೆ ಇರುವುದು ನಿಜ. ಆದರೂ ಲಾಕ್ಡೌನ್ ನಿಯಮಗಳನ್ನು ಯಾರೂ ಉಲ್ಲಂಘಿಸಬಾರದು ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಇನ್ನು ಮುಂದೆ ರಾಜ್ಯ ಸರ್ಕಾರಗಳು ಕೋವಿಡ್ 19 ವೈರಸ್‍ನ ರೆಡ್‍ಜೋನ್‍ಗಳನ್ನು ಆರೆಂಜ್ ಮತ್ತು ಅದರ ನಂತರ ಗ್ರೀನ್ ಜೋನ್ ಆಗಿ ಪರಿವರ್ತಿಸುವ ನಿಟ್ಟಿನಲ್ಲಿ ಶ್ರಮವಹಿಸಬೇಕಾಗಿದೆ. ನಾವು ಧೈರ್ಯಶಾಲಿಗಳಾಗಬೇಕು, ಜತೆಗೆ ಬದಲಾವಣೆಯೊಂದಿಗೆ ಸಾಮಾನ್ಯ ಜನರಂತೆ ಬದುಕಲು ಸಾಧ್ಯವಾಗುತ್ತದೆ ಎಂದು ತಿಳಿಸಿz್ದÁರೆ.

ಹಾಟ್‍ಸ್ಪಾಟ್‍ಗಳಲ್ಲದ ಪ್ರದೇಶಗಳಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಿಕೊಡಬೇಕು. ಸೋಂಕು ಪ್ರಕರಣಗಳನ್ನು ಆಧರಿಸಿ ಆಯಾ ರಾಜ್ಯಗಳಲ್ಲಿ ಹಂತ ಹಂತವಾಗಿ ಲಾಕ್ಡೌನ್ ನಿಯಮಗಳನ್ನು ಸಡಿಲಗೊಳಿಸಬೇಕು ಎಂದು ಮುಖ್ಯಮಂತ್ರಿಗಳು ಆಗ್ರಹಿಸಿದರು.

ಕೊರೊನಾ ಪಿಡುಗಿನಿಂದ ರಾಜ್ಯಗಳ ಆರ್ಥಿಕ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿದ್ದು, ಸರ್ಕಾರಗಳಿಗೆ ಆರ್ಥಿಕ ಚೈತನ್ಯ ತುಂಬಲು ವಿಶೇಷ ಆರ್ಥಿಕ ನೆರವನ್ನು ಘೋಷಣೆ ಮಾಡಬೇಕು. ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಅಗತ್ಯವಿರುವ ಟೆಸ್ಟ್ ಕಿಟ್ ಹಾಗೂ ಪಿಪಿಇಗಳನ್ನು ಒದಗಿಸಬೇಕು ಎಂದು ಮುಖ್ಯಮಂತ್ರಿಗಳು ಒತ್ತಾಯಿಸಿದರು.