ರಾಜ್ಯದಲ್ಲಿ ಚಳಿ ಇದ್ದು, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಉತ್ತರ ಭಾರತದಲ್ಲಿ ತೀವ್ರ ಚಳಿ; ದೆಹಲಿಯಲ್ಲಿ ಮೈಕೊರೆವ ಥಂಡಿ!
ಮುಂದಿನ 24 ಗಂಟೆಗಳಲ್ಲಿ (ಸೋಮವಾರ ಹಾಗೂ ಮಂಗಳವಾರ) ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ.
ಯುವಕರಿಗೆ ಪ್ರತಿ ತಿಂಗಳು 10 ಸಾವಿರ ಉದ್ಯೋಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಇನ್ನು ಮುಂದಿನ ಎರಡು ದಿನಗಳ ಕಾಲ ಕನಿಷ್ಠ ಉಷ್ಣಾಂಶವು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ಉಳಿದಂತೆ ಭಾರೀ ಮಳೆ ಆಗುವ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Sugarcane Growers| ಕಬ್ಬು ಬೆಳೆಗಾರರಿಗೆ ವಂಚನೆ: 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ!
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರುತ್ತದೆ. ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆಗಳಿವೆ. ಬೆಳಗಿನ ಜಾವ ಕೆಲವು ಕಡೆಗಳಲ್ಲಿ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತವೆ. ಗರಿಷ್ಠ ಉಷ್ಣಾಂಶ 25 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ವಧು ಹುಡುಕಿಕೊಡಿ ಎಂದು ಕುದುರೆಯಲ್ಲಿ ಬಂದರು!
ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕನಿಷ್ಠ ಉಷ್ಣಾಂಶ 9.8 ಡಿಗ್ರಿ ಸೆಲ್ಸಿಯಸ್ ಬಾಗಲಕೋಟೆಯಲ್ಲಿ ದಾಖಲಾಗಿದೆ.
ಉಳಿದಂತೆ ರಾಜ್ಯದಲ್ಲಿ ಬಹುತೇಕ ಒಣಹವೆ ಮುಂದುವರಿಯಲಿದ್ದು, ಯಾವುದೇ ಗಮನಾರ್ಹ ಬದಲಾವಣೆ ಇಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.