1. ಸುದ್ದಿಗಳು

Congress 5 guarantee approval: ಉಚಿತ ಸೌಲಭ್ಯ ಈಡೇರಿಕೆಗೆ ಸಚಿವ ಸಂಪುಟ ಅನುಮೋದನೆ! ಈ ದಿನದಿಂದಲೇ ಜಾರಿ

Kalmesh T
Kalmesh T
Congress 5 guarantee approval: Cabinet approval for the implementation of free facilities!

Congress 5 guarantee approval: ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಸರ್ಕಾರ ಪ್ರಜೆಗಳಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಶುಕ್ರವಾರ ಸಚಿವ ಸಂಪುಟ ಉಚಿತ ಸೌಲಭ್ಯಗಳನ್ನು ಈ ದಿನಾಂಕಗಳಿಂದ ಜಾರಿಗೆ ಬರುವಂತೆ ಘೋಷಿಸಿದೆ. ಇಲ್ಲಿದೆ ಸಂಪೂರ್ಣ ವಿವರ

ಕಾಂಗ್ರೆಸ್‌ನ ಪ್ರಮುಖ ಐದು ಗ್ಯಾರಂಟಿಗಳ ಜಾರಿಗೆ (Congress 5 guarantee approval) ರಾಜ್ಯ ಸರ್ಕಾರ ಶುಕ್ರವಾರ ಹಸಿರು ನಿಶಾನೆ ತೋರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗ್ಯಾರಂಟಿ ಜಾರಿಗೆ ಸಂಬಂಧ ಸರಣಿ ಸಭೆಗಳು ನಡೆದಿದ್ದವು. ಎಲ್ಲ ಐದು ಗ್ಯಾರಂಟಿಗಳನ್ನು ಈ ಆರ್ಥಿಕ ವರ್ಷದಲ್ಲಿಯೇ ಜಾರಿಗೆ ತರಲಾಗುವುದು ಎಂದಿದ್ದಾರೆ.

ಮೂರು ಗಂಟೆಗಳ ಕಾಲ ನಡೆದ ಸಚಿವ ಸಂಪುಟ ಸಭೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿದರು. ಜಾತಿ, ಧರ್ಮ, ಭಾಷೆ ಬೇಧವಿಲ್ಲದೆ ಕರ್ನಾಟಕದ ಜನತೆಗೆ ಎಲ್ಲ ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದರು. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಜೂ.11ರಿಂದ ಜಾರಿಯಾಗಲಿದೆ ಎಂದರು.

ಜುಲೈನಿಂದ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುವುದು. ಇದಲ್ಲದೇ ಜುಲೈ 1ರಿಂದ ಬಿಪಿಎಲ್ ಕಾರ್ಡ್ ಹೊಂದಿರುವ ಎಲ್ಲ ಸದಸ್ಯರಿಗೂ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುವುದು.

ಗೃಹ ಲಕ್ಷ್ಮಿ ಯೋಜನೆಯಡಿ ಎಲ್ಲ ಮಹಿಳಾ ಮುಖಂಡರಿಗೂ 2 ಸಾವಿರ ರೂ.ಗಳನ್ನು ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು. ಆಗಸ್ಟ್ 15 ರಂದು 76 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಈ ಯೋಜನೆಯನ್ನು ಪ್ರಾರಂಭಿಸಲಾಗುವುದು.

Congress guarantee 1- Gruha Jyoti: ಉಚಿತ 200 ಯುನಿಟ್ ವಿದ್ಯುತ್

ಜುಲೈ 1 ರಿಂದ ಅನ್ವಯವಾಗುವಂತೆ ರಾಜ್ಯದ ಪ್ರತಿ ಮನೆಗೆ ಗರಿಷ್ಠ 200 ಯುನಿಟ್ ವರೆಗೆ ವಿದ್ಯುತ್ ಅನ್ನು (200 units of free power to all households) ಉಚಿತವಾಗಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸಚಿವ ಸಂಪುಟವು ಅನುಮೋದನೆ ನೀಡಿದೆ.

ಈ ಯೋಜನೆಯ ದುರ್ಬಳಕೆ ತಡೆಯಲು ಫಲಾನುಭವಿಗಳು ಹಿಂದಿನ ಒಂದು ವರ್ಷದ ಅವಧಿಯಲ್ಲಿ ಬಳಕೆ ಮಾಡಿರುವ ವಿದ್ಯುತ್ ಸರಾಸರಿಯನ್ನು ಗಣನೆಗೆ ತೆಗೆದುಕೊಂಡು, ಅದರ ಜೊತೆಗೆ 10% ವಿದ್ಯುತನ್ನು ಹೆಚ್ಚುವರಿಯಾಗಿ ಉಚಿತವಾಗಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಜುಲೈ 1ರ ವರೆಗೆ ಬಳಕೆ ಮಾಡಿರುವ ವಿದ್ಯುತ್ ಬಿಲ್ ಅನ್ನು ಬಳಕೆದಾರರು ಕಟ್ಟಬೇಕಿದ್ದು, ಆಗಸ್ಟ್ ನಿಂದ ಎಲ್ಲರೂ ಈ ಯೋಜನೆಯ ಲಾಭ ಪಡೆಯಬಹುದಾಗಿದೆ.

ಜನತೆಗೆ ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ಪ್ರತಿ ಮನೆಗೆ ಉಚಿತ್ ವಿದ್ಯುತ್ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

Congress guarantee 1- Gruha Jyoti: ಉಚಿತ 200 ಯುನಿಟ್ ವಿದ್ಯುತ್

Congress guarantee 2- Gruha Lakshmi: ಮನೆಯ ಯಜಮಾನಿಗೆ ಮಾಸಿಕ ರೂ. 2,000 ಸಹಾಯಧನ

ಯಾವುದೇ ಜಾತಿ, ಧರ್ಮ, ಭಾಷೆಯನ್ನು ಪರಿಗಣಿಸದೆ ನಾಡಿನ ಪ್ರತಿ ಮನೆಯ ಯಜಮಾನಿಗೆ ಮಾಸಿಕ ರೂ. 2,000 ಸಹಾಯಧನವನ್ನು (Rs 2,000 monthly assistance to the woman head of every family ) ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸಂಪುಟ ಸಭೆಯು ಅನುಮೋದನೆ ನೀಡಿದೆ.

ಬಿಪಿಎಲ್ ಅಥವಾ ಎಪಿಎಲ್ ಕುಟುಂಬದ ಮಹಿಳೆಯು ತಮ್ಮ ಬ್ಯಾಂಕ್ ಖಾತೆಯ ಮಾಹಿತಿ ಹಾಗೂ ಆಧಾರ್ ಕಾರ್ಡ್‌ನ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಿ, ತನ್ನನ್ನು ಮನೆಯ ಯಜಮಾನಿ ಎಂದು ಘೋಷಿಸಿಕೊಳ್ಳಬೇಕು.

ಜೂನ್ 15 ರಿಂದ ಜುಲೈ 15ರ ವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶವಿದ್ದು, ಅರ್ಜಿಗಳ ಪರಿಶೀಲನೆ ಹಾಗೂ ತಂತ್ರಾಂಶ ಅಭಿವೃದ್ಧಿಪಡಿಸಿ ಆಗಸ್ಟ್ 15ರ ಸ್ವಾತಂತ್ರ್ಯ ದಿನದಂದು ಯೋಜನೆಗೆ ಚಾಲನೆ ನೀಡಲಾಗುವುದು.

ಕುಟುಂಬ ನಿರ್ವಹಣೆಯ ಹೊಣೆಹೊತ್ತ ಮನೆಯ ಯಜಮಾನಿಗೆ ಆರ್ಥಿಕ ನೆರವು ನೀಡಿ, ಅವರ ಕಷ್ಟಗಳಿಗೆ ಹೆಗಲಾಗಿ ನಿಲ್ಲಲು ಸರ್ಕಾರ ಬದ್ಧವಾಗಿದೆ.

Congress guarantee 2- Gruha Lakshmi: ಮನೆಯ ಯಜಮಾನಿಗೆ ಮಾಸಿಕ ರೂ. 2,000 ಸಹಾಯಧನ

Congress guarantee 3- Anna Bhagya: ತಲಾ 10 ಕೆ.ಜಿ ಆಹಾರಧಾನ್ಯ ಉಚಿತ

ಬಡತನ ರೇಖೆಗಿಂತ ಕೆಳಗಿನ ಹಾಗೂ ಅಂತ್ಯೋದಯ ಕಾರ್ಡ್‌ಗಳನ್ನು ಹೊಂದಿರುವ ರಾಜ್ಯದ ಎಲ್ಲಾ ಕುಟುಂಬದ ಪ್ರತಿ ಸದಸ್ಯನಿಗೆ ಮಾಸಿಕ ತಲಾ 10 ಕೆ.ಜಿ ಆಹಾರಧಾನ್ಯವನ್ನು (10 kg of rice free to every member of a BPL household) ಉಚಿತವಾಗಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸಂಪುಟ ಸಭೆಯು ನಿರ್ಧರಿಸಿದೆ.

ಬಡಜನರ ಹಸಿವು ನೀಗಿಸುವ ಉದ್ದೇಶದೊಂದಿಗೆ ಹಿಂದಿನ ನಮ್ಮ ಸರ್ಕಾರ ಜಾರಿಗೆ ತಂದಿದ್ದ ಅನ್ನಭಾಗ್ಯ ಯೋಜನೆಯಡಿ ಸದ್ಯ 5 ಕೆ.ಜಿ ಆಹಾರಧಾನ್ಯವನ್ನು ಉಚಿತವಾಗಿ ನೀಡಲಾಗುತ್ತಿದ್ದು, ಅದನ್ನು 10 ಕೆ.ಜಿ ಗೆ ಏರಿಸಲಾಗಿದೆ ಹಾಗೂ ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೂ ಯೋಜನೆಯನ್ನು ವಿಸ್ತರಿಸಲಾಗಿದೆ.

ಈ ಮೂಲಕ ನಾಡಿನ ಎಲ್ಲಾ ಬಡಕುಟುಂಬಗಳ ಹಸಿವನ್ನು ನೀಗಿಸಿ, ಹಸಿವು ಮುಕ್ತ ಕರ್ನಾಟಕ ನಿರ್ಮಾಣ ಮಾಡಲು ಸರ್ಕಾರ ಬದ್ಧವಾಗಿದೆ.

Congress guarantee 3- Anna Bhagya: ತಲಾ 10 ಕೆ.ಜಿ ಆಹಾರಧಾನ್ಯ ಉಚಿತ

Congress guarantee 4- YuvaNidhi: ಪದವೀಧರ ನಿರುದ್ಯೋಗಿಗಳಿಗೆ ನಿರುದ್ಯೋಗ ಭತ್ಯೆ

2022-23 ನೇ ಶೈಕ್ಷಣಿಕ ವರ್ಷದಲ್ಲಿ ವೃತ್ತಿಪರ ಕೋರ್ಸುಗಳೂ ಸೇರಿದಂತೆ ಎಲ್ಲ ವಿಧದ ಪದವೀಧರ ನಿರುದ್ಯೋಗಿ ಯುವಕ-ಯುವತಿಯರಿಗೆ ಮಾಸಿಕ ರೂ.3,000 ಹಾಗೂ ಡಿಪ್ಲೊಮಾ ಪಾಸಾದ ನಿರುದ್ಯೋಗಿ ಯುವಜನರಿಗೆ ಮಾಸಿಕ ರೂ. 1,500 ನಿರುದ್ಯೋಗ ಭತ್ಯೆ (Rs 3,000 every month for unemployed graduate youth and Rs 1,500 for unemployed diploma holders) ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸಂಪುಟ ಸಭೆಯು ನಿರ್ಧರಿಸಿದೆ.

ಪದವಿ ಪಡೆದು 180 ದಿನಗಳು ಕಳೆದರೂ ಉದ್ಯೋಗ ಸಿಗದೆ ಭವಿಷ್ಯದ ಬಗ್ಗೆ ಆತಂಕದಲ್ಲಿರುವ ನಿರುದ್ಯೋಗಿ ಯುವಜನರಿಗೆ ಮಾಸಿಕ ನಿರುದ್ಯೋಗ ಭತ್ಯೆ ನೀಡುವ ಮೂಲಕ ಉದ್ಯೋಗ ಹುಡುಕಾಟಕ್ಕೆ ಅನುಕೂಲ ಕಲ್ಪಿಸುವುದು ಮತ್ತು ಆರ್ಥಿಕ ಸಂಕಷ್ಟದಿಂದ ಅವರನ್ನು ಪಾರುಮಾಡುವುದು ಈ ಯೋಜನೆಯ ಉದ್ದೇಶ. ಲಿಂಗತ್ವ ಅಲ್ಪಸಂಖ್ಯಾತರು ಕೂಡ ಈ ಯೋಜನೆಯ ಲಾಭ ಪಡೆಯಬಹುದಾಗಿದೆ.

ಸ್ವಂತ ಪರಿಶ್ರಮದಿಂದ ಬದುಕು ಕಟ್ಟಿಕೊಳ್ಳಬೇಕೆಂಬ ಕನಸು ಹೊಂದಿದ್ದು, ಉದ್ಯೋಗ ಸಿಗದೆ ಸಂಕಷ್ಟದಲ್ಲಿರುವ ನಾಡಿನ ಯುವಶಕ್ತಿಗೆ ಆರ್ಥಿಕ ನೆರವು ನೀಡಿ ಅವರ ಭವಿಷ್ಯದ ಕನಸಿಗೆ ಬೆಂಬಲವಾಗಿ ನಿಲ್ಲಲು ಸರ್ಕಾರ ಬದ್ಧವಾಗಿದೆ.

Congress guarantee 4- YuvaNidhi: ಪದವೀಧರ ನಿರುದ್ಯೋಗಿಗಳಿಗೆ ನಿರುದ್ಯೋಗ ಭತ್ಯೆ

Congress guarantee 5- Shakti: ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ

ಶಾಲಾ ವಿದ್ಯಾರ್ಥಿನಿಯರು ಸೇರಿದಂತೆ ರಾಜ್ಯದ ಎಲ್ಲಾ ವರ್ಗದ ಮಹಿಳೆಯರಿಗೆ ಎಸಿ ಹಾಗೂ ಲಕ್ಷುರಿ ಬಸ್ ಗಳನ್ನು ಹೊರತುಪಡಿಸಿ ಇತರೆ ಎಲ್ಲಾ ಬಸ್ ಗಳಲ್ಲಿ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯ (free travel for women in public transport buses) ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸಂಪುಟ ಸಭೆ ನಿರ್ಧರಿಸಿದೆ.

ಜೂನ್ 11 ರಂದು "ಶಕ್ತಿ" ಯೋಜನೆಗೆ ಚಾಲನೆ ನೀಡಲಿದ್ದು, ಶೇ. 94 ರಷ್ಟು ಬಸ್ ಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣದ ಸೌಲಭ್ಯ ದೊರೆಯಲಿದೆ.

ಪುರುಷ ಪ್ರಯಾಣಿಕರ ಹಿತದೃಷ್ಟಿಯಿಂದ ಬಸ್‌ಗಳಲ್ಲಿ ಶೇ. 50 ರಷ್ಟು ಸೀಟುಗಳನ್ನು ಪುರುಷರಿಗಾಗಿ ಮೀಸಲಿಡಲಾಗುತ್ತದೆ.

ಶಿಕ್ಷಣ, ಉದ್ಯೋಗ ಹೀಗೆ ಜವಾಬ್ದಾರಿ ನಿರ್ವಹಣೆಗಾಗಿ ನಿತ್ಯ ಪ್ರಯಾಣ ಕೈಗೊಳ್ಳುವ ನಾಡಿನ ಮಹಿಳೆಯರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ.

Congress guarantee 5- Shakti: ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ

ಈ ರೀತಿಯಾಗಿ ಸರ್ಕಾರ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವತ್ತ ಕಾರ್ಯಪ್ರವೃತ್ತವಾಗಿವೆ.

ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯನವರಿಂದ ಭರ್ಜರಿ ಸಿಹಿಸುದ್ದಿ: ತುಟ್ಟಿಭತ್ಯೆ ಹೆಚ್ಚಿಸಿ ಆದೇಶ!

Photos Courtesy : Official Page of the Chief Minister of Karnataka

Published On: 03 June 2023, 11:28 AM English Summary: Congress 5 guarantee approval: Cabinet approval for the implementation of free facilities!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.