1. ಸುದ್ದಿಗಳು

ಫ್ರೀ ವಿದ್ಯುತ್‌ಗೆ ಅರ್ಜಿ ಸಲ್ಲಿಕೆ ಮುನ್ನ ಈ ಮಹತ್ವದ ಅಂಶಗಳನ್ನು ತಿಳಿಯಿರಿ

Maltesh
Maltesh
Congress Guarantee 200 Unit Free Electricity Guidelines

ಮೂಲಭೂತ ಸೌಕರ್ಯಗಳಲ್ಲಿ ಒಂದಾದ ವಿದ್ಯುಚ್ಛಕ್ತಿಯನ್ನು ಉಚಿತವಾಗಿ ರಾಜ್ಯದ ನಾಗರೀಕರಿಗೆ ಒದಗಿಸಲು ದಿನಾಂಕ: 20.05.2023 ರಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಗೃಹ ಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಒದಿಸಲು ತಾತ್ವಿಕ ಅನುಮೋದನೆ ನೀಡಿದೆ.

ಗೃಹ ಜ್ಯೋತಿಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್ ಗಳವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸಿ ಬಳಕೆಯ (ಆರ್ಥಿಕ ವರ್ಷ 2022-23 ರ ಬಳಕೆಯ ಆಧಾರದನ್ವಯ) ಯೂನಿಟ್ ಗಳ ಮೇಲೆ ಶೇಕಡ 10 ರಷ್ಟು ಹೆಚ್ಚಿನ ವಿದುತ್ ಬಳಕೆಯ ಮಿತಿಯನ್ನು ಅನುಮತಿಸಿ, ಅದಕ್ಕನುಗುಣವಾಗಿ ವಿದ್ಯುತ್ ಬಿಲ್ಲಿನ ಮೊತ್ತವನ್ನು ಉಚಿತವಾಗಿ ಒದಗಿಸಲು ಹಾಗೂ 200 ಯೂನಿಟ್ ಗಳ ಬಳಕೆಯನ್ನು ಮೀರಿದ ಗ್ರಾಹಕರು ಪೂರ್ಣ ವಿದ್ಯುತ್ ಬಿಲ್ಲನ್ನು ಪಾವತಿಸಲು ಸರ್ಕಾರ ಆದೇಶಿಸಿದೆ.

Free Smartphones : ಮಹಿಳೆಯರಿಗೆ ಸ್ಮಾರ್ಟ್‌ ಫೋನ್‌ ಖರೀದಿಗೆ ಹಣ

ಈ ಯೋಜನೆಯನ್ನು ಜುಲೈ 2023 ರ ತಿಂಗಳು ವಿದ್ಯುತ್ ಬಳಕೆಗೆ ಆಗಸ್ಟ್ 2023 ರ ತಿಂಗಳಿಂದ ನೀಡುವ ಬಿಲ್ಲಿಗೆ ಅನ್ವಯವಾಗುವಂತೆ ಈಕೆಳಕಂಡ ಷರತ್ತುಗಳೊಂದಿಗೆ ಜಾರಿಗೆ ತರಲು ಸರ್ಕಾರದ ಆದೇಶ ಸಂಖ್ಯೆ: ಎನರ್ಜಿ /164/ಪಿಎಸ್ ಆರ್ / 2023, ದಿನಾಂಕ: 05.06.2023, ಬೆಂಗಳೂರು ರಂತೆ ಆದೇಶಿಸಿದೆ.

01.ಯೋಜನೆಯು ಗೃಹ ಬಳಕೆಯ ವಿದ್ಯುತ್ ಸಂಪರ್ಕಗಳಿಗೆ ಮಾತ್ರ ಅನ್ವಯವಾಗುತ್ತದೆ; ವಾಣಿಜ್ಯ ಉದ್ದೇಶಗಳಿಗೆ ವಿದ್ಯುತ್ ಉಪಯೋಗಿಸಿದಲ್ಲಿ ಅನ್ವಯವಾಗುವುದಿಲ್ಲ.

02.ಪ್ರತಿ ತಿಂಗಳ ಮೀಟರ್ ರೀಡಿಂಗ್ ಮಾಡಿದಾಗ ಒಟ್ಟು ವಿದ್ಯುತ್ ಬಳಕೆಯ ಪ್ರಮಾಣಕ್ಕೆ ಬಿಲ್ಲನ್ನು ನಮೂದಿಸಲಾಗುವುದು.

03.ಗೃಹ ವಿದ್ಯುತ್ ಬಳಕೆದಾರನ ಅರ್ಹ ಮೊತ್ತವನ್ನು ಬಿಲ್ ನಲ್ಲಿ ಕಡಿತಗೊಳಿಸಿ, ಉಳಿದ ಮೊತ್ತವನ್ನು ಗ್ರಾಹಕರಿಗೆ net bill ನೀಡುವುದು ಹಾಗೂ ಗ್ರಾಹಕರು net bill ನ್ನು ಪಾವತಿಸಬೇಕು.

04.ಅರ್ಹ ಯೂನಿಟ್ / ಮೊತ್ತಕ್ಕಿಂತ ಒಳಗೆ ಬಿಲ್ ಆಗಿದ್ದಲ್ಲಿ ಅಂತಹ ಗ್ರಾಹಕರಿಗೆ ಶೂನ್ಯ ಬಿಲ್ಲನ್ನು ನೀಡಲಾಗುವುದು.

05.ಈ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.

06.ಪ್ರತಿ ಫಲಾನುಭವಿಯು ತನ್ನ Connection ID / Account ID ಅನ್ನು ಆಧಾರ್ ಗೆ ಕಡ್ಡಾಯವಾಗಿ ಜೋಡಣೆ ಮಾಡಬೇಕು.

ನಿಮ್ಮ ಅಕೌಂಟ್‌ಗೆ ಪಿಎಂ ಕಿಸಾನ್‌ 14 ನೆ ಕಂತು ಬರುತ್ತದೆಯೇ? ಈಗಲೇ ತಿಳಿದುಕೊಳ್ಳಿ

07.ಪ್ರಸ್ತುತ ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ / ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ ಜ್ಯೋತಿ ಯೋಜನೆಯ ಫಲಾನುಭವಿಗಳನ್ನು ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಸೇರ್ಪಡಿಸಲಾಗುವುದು.

08.ದಿನಾಂಕ: 30.06.2023 ರ ಅಂತ್ಯಕ್ಕೆ (ಜೂನ್ 2023 ರ ಮಾಹೆಯಲ್ಲಿ ಬಳಸಿದ ವಿದ್ಯುತ್ ಪ್ರಮಾಣಕ್ಕೆ ಜುಲೈ 2023 ರಲ್ಲಿ ವಿತರಿಸಿದ ಬಿಲ್ಲಿನ ಮೊತ್ತ ಒಳಗೊಂಡಂತೆ) ಬಾಕಿ ಇರುವ ವಿದ್ಯುತ್ ಶುಲ್ಕದ ಬಾಕಿ ಮೊತ್ತವನ್ನು 3 ತಿಂಗಳೊಳಗೆ ಪಾವತಿಸತಕ್ಕದದು. ಬಾಕಿ ಮೊತ್ತವನ್ನು ನಿಗಧಿತ ಅವಧಿಯೊಳಗೆ ಪಾವತಿಸದಿದ್ದಲ್ಲಿ ಅಂತಹ ಗ್ರಾಹಕರು ವಿದ್ಯುತ್ ಸ್ಥಾವರಗಳ ಸಂಪರ್ಕವನ್ನು ಕಡಿತಗೊಳಿಸಲಾಗುವುದು.

09.ಗೃಹ ವಿದ್ಯುತ್ ಗ್ರಾಹಕರ ಸ್ಥಾವರಗಳುಗೆ ಮಾಪಕವನ್ನು ಅಳವಡಿಸುವುದು ಹಾಗೂ ಮಾಪಕ ಓದುವುದು ಕಡ್ಡಾಯವಾಗಿರುತ್ತದೆ.

10.ಗೃಹ ವಿದ್ಯುತ್ ಬಳಕೆದಾರರ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಸ್ಥಾವರಗಳಿದ್ದಲ್ಲಿ, ಒಂದು ಸ್ಥಾವರಕ್ಕೆ ಮಾತ್ರ ಈ ಯೋಜನೆಯಡಿಯ ಸೌಲಭ್ಯಕ್ಕೆ ಅರ್ಹರಾಗುವರು.

ಫ್ರೀ ವಿದ್ಯುತ್‌: ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ..ಇಲ್ಲಿದೆ ಡೈರೆಕ್ಟ್‌ ಲಿಂಕ್‌

Published On: 18 June 2023, 10:31 AM English Summary: Congress Guarantee 200 Unit Free Electricity Guidelines

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.