ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಮತ ಎಣಿಕೆ ಪ್ರಾರಂಭವಾಗಿದ್ದು, 10 ಗಂಟೆಯ ವರೆಗೆ ಮತ ಎಣಿಕೆಯ ಫಲಿತಾಂಶವನ್ನು ರಾಜ್ಯ ಚುನಾವಣಾ ಆಯೋಗ ತನ್ನ ಅಧಿಕೃಷತ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದೆ.
ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಮತ ಎಣಿಕೆಯ 10 ಗಂಟೆಯವರೆಗಿನ ಅಪ್‌ಡೇಟ್‌ನ್ನು ನೋಡುವುದಾದರೆ ಕಾಂಗ್ರೆಸ್ ಬರೋಬ್ಬರಿ 65 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇತ್ತ BJP 41 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ಜೆಡಿಎಸ್ ಕೂಡ 2 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ.
ಈ ಕ್ಷಣದ ಅಪ್‌ಡೇಟ್ ಏನು..?
ಅಚ್ಚರಿ ಎಂಬಂತೆ ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ಅಭ್ಯರ್ಥಿ ಎದುರು ಭಾರೀ ಹಿನ್ನಡೆ ಅನುಭವಿಸಿದ್ದಾರೆ. ಅಲ್ಲಿಯ ಅಭ್ಯರ್ಥಿ ಇಕ್ಬಾಲ್ ಹುಸೇನ್ ಪ್ರಬಲ ಪೈಪೋಟಿಯನ್ನು ನೀಡುತ್ತಿದ್ದಾರೆ..
ಯಮಕನಮರಡಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ 24 ಸಾವಿರ ವೋಟ್‌ಗ ಭರ್ಜರಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ..
ಹೀರೆಕೇರೂರು ಕಾಂಗ್ರೆಸ್ ಅಭ್ಯರ್ಥಿ ಯುಬಿ ಬಣಕಾರ್ ಎದುರು 6 ಸಾವಿರ ಮತಗಳ ಅಂತರದಿಂದ ಹಿನ್ನಡೆಯನ್ನು ಅನುಭವಿಸುತ್ತಿದ್ದಾರೆ..
ಹಾಸನದಲ್ಲಿ ಬಿಜೆಪಿಯ ಪ್ರೀತಂ ಗೌಡ್ ಅವರು ಅಲ್ಪ ಅಂತರದಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
Share your comments