News

Rain ರಾಜ್ಯದ ಕರಾವಳಿ ಭಾಗದಲ್ಲಿ ಮುಂದುವರಿದ ವರ್ಷಧಾರೆ!

12 July, 2023 9:43 AM IST By: Hitesh
Continued drought in the coastal part of the state!

ರಾಜ್ಯದ ವಿವಿಧ ಭಾಗದಲ್ಲಿ ಮಳೆ ಮುಂದುವರಿದಿದೆ. ಆದರೆ, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಕಳೆದ 24 ಗಂಟೆಯ ಅವಧಿಯಲ್ಲಿ ನೈರುತ್ಯ ಮುಂಗಾರು ರಾಜ್ಯದಾದ್ಯಂತ ದುರ್ಬಲವಾಗಿತ್ತು.

ಕರಾವಳಿಯ ಬಹುತೇಕ ಕಡೆಗಳಲ್ಲಿ; ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.

ಮಳೆ ಪ್ರಮಾಣ ಸೆಂ.ಮೀನಲ್ಲಿ: ಮಂಗಳೂರಿನಲ್ಲಿ (ದಕ್ಷಿಣ ಕನ್ನಡ ಜಿಲ್ಲೆ) 5 ಸೆಂ.ಮೀ ಮಳೆಯಾಗಿರುವುದು ವರದಿ ಆಗಿದೆ.

ಕ್ಯಾಸಲ್‌ ರಾಕ್‌ (ಉತ್ತರ ಕನ್ನಡ ಜಿಲ್ಲೆ) ದೊಡ್ಡಬಳ್ಳಾಪುರದಲ್ಲಿ ತಲಾ 3 ಸೆಂ.ಮೀ ಇದೆ.

ಅಂಕೋಲಾ, ಪಣಂಬೂರು, ದೇವನಹಳ್ಳಿ, ಕೆಎಸ್‌ಎನ್‌ಡಿಎಂಸಿ ಕ್ಯಾಂಪಸ್‌, ಬೆಂಗಳೂರು ಕೆಐಎಎಲ್‌ ವಿಮಾನ ನಿಲ್ದಾಣ,

ಯಲಹಂಕ ಐಎಎಫ್‌ನಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ.

ಮುಂದಿನ 24 ಗಂಟೆ ಅವಧಿ: ಮುಂದಿನ 24 ಗಂಟೆಯ ಅವಧಿಯಲ್ಲಿ ಕರಾವಳಿಯ ಬಹುತೇಕ ಕಡೆಗಳಲ್ಲಿ;

ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಿಂಚು ಗುಡುಗು

ಸಹಿತ ಧಾರಾಕಾರ ಮಳೆಯಾಗುವ ಬಹಳಷ್ಟು ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮುನ್ನೂಚನೆ ನೀಡಿದೆ.  

ಮುಂದಿನ 48 ಗಂಟೆಯ ಅವಧಿ: ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮಿಂಚು ಗುಡುಗು ಸಹಿತ

ಧಾರಾಕಾರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ

ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ಭಾರೀ ಮಳೆ ಮುನ್ನೆಚ್ಚರಿಕೆ: ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಗುಡುಗು ಮುನ್ನೆಚ್ಚರಿಕೆ

ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಮಿಂಚು ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದರೂ, ಗಾಳಿಯ ವೇಗ ತೀವ್ರತೆ ಪಡೆದುಕೊಳ್ಳದೆ ಇರುವುದರಿಂದ

ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಯಾವುದೇ ಮುನ್ಸೂಚನೆಯನ್ನು ಈ ಸಂದರ್ಭದಲ್ಲಿ ಭಾರತೀಯ ಹವಾಮಾನ ಇಲಾಖೆ ನೀಡಿಲ್ಲ.

ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶ

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಕೆಲವು ಬಾರಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ.

ಇನ್ನೂ ಕೆಲವೊಮ್ಮೆ ಬಲವಾದ ಮೇಲ್ಮೈ ಸುಳಿಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶವು 26 ಡಿಗ್ರಿ ಸೆಲ್ಸಿಯಸ್‌ ಹಾಗೂ

ಕನಿಷ್ಠ ಉಷ್ಣಾಂಶವು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.