News

Heavy Rain ರಾಜ್ಯದ ವಿವಿಧ ಭಾಗದಲ್ಲಿ ಮುಂದುವರಿದ ಭಾರೀ ಮಳೆ!

27 June, 2023 9:40 AM IST By: Hitesh
Continued heavy rain in different parts of the state!

ರಾಜ್ಯದ ವಿವಿಧ ಜಿಲ್ಲೆಯಲ್ಲಿ ಮುಂಗಾರು ಚುರುಕು ಪಡೆದುಕೊಂಡಿದ್ದು, ಹಲವು ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ.

ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕು ಪಡೆದುಕೊಳ್ಳುತ್ತಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನ ಬಹುತೇಕ

ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿದೆ.

ಭಾರೀ ಪ್ರಮಾಣದಲ್ಲಿ ಮಳೆ: ರಾಜ್ಯದ ಉತ್ತರ ಕನ್ನಡದ ಹೊನ್ನಾವರದಲ್ಲಿ 14 ಸೆಂ.ಮೀ ಹಾಗೂ ಮಂಕಿಯಲ್ಲಿ 13 ಸೆಂ.ಮೀ ಮಳೆಯಾಗಿರುವುದು ವರದಿ ಆಗಿದೆ.

ಅಲ್ಲದೇ ಉಡುಪಿಯ ಕಾರ್ಕಳ, ಗೇರುಸೊಪ್ಪ, ಅಂಕೋಲದಲ್ಲಿ ತಲಾ 7 ಸೆಂ.ಮೀ ಮಳೆಯಾಗಿದೆ.

ಉಡುಪಿ, ಕುಮಟಾ, ಕ್ಯಾಸಲ್‌ ರಾಕ್‌, ಕಾರವಾರ, ಗೋಕರ್ಣ, ಬೇಲಿಕೇರಿ, ಮೂಲ್ಕಿ, ಮಂಗಳೂರು, ಪಣಂಬೂರು, ಕೋಟದಲ್ಲಿ ತಲಾ 5 ಸೆಂ. ಮೀ ಮಳೆಯಾಗಿದೆ.

ಸಿದ್ದಾಪುರ, ಶಿರಾಲಿ, ಪಿಟಿಒ, ಮಂಗಳೂರು ವಿಮಾನ ನಿಲ್ದಾಣ, ಕೊಲ್ಲೂರು, ಕುಂದಾಪುರ, ಲೋಂಡಾ, ದೇವದುರ್ಗ, ಲಿಂಗನಮಕ್ಕಿ, ಕೊಟ್ಟಿಗೆಹಾರ

ಹಾಗೂ ಚಂದೂರಾಯನಹಳ್ಳಿ ಕೆವಿಕೆಯಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.

ಮುಂದಿನ 24 ಗಂಟೆಗಳು: ಮುಂದಿನ 24 ಗಂಟೆಯ ಅವಧಿಯಲ್ಲಿ ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ

ಕೆಲವು ಕಡೆಗಳಲ್ಲಿ ಮಿಂಚು ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಮುಂದಿನ 48 ಗಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಮಿಂಚು ಗುಡುಗು ಸಹಿತ ಮಳೆಯಾಗಲಿದೆ

ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರೀ ಮಳೆ ಮುನ್ನೆಚ್ಚರಿಕೆ

ಮುಂದಿನ ಎರಡು ದಿನಗಳ ಅವಧಿಯಲ್ಲಿ ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀಯಿಂದ ಅತಿ

ಭಾರವಾದ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಗುಡುಗು ಮುನ್ನೆಚ್ಚರಿಕೆ

ಮುಂದಿನ 48 ಗಂಟೆಯ ಅವಧಿಯಲ್ಲಿ ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗಲಿದೆ

ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ಮೀನುಗಾರರಿಗೆ ಎಚ್ಚರಿಕೆ: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40ರಿಂದ 45 ಕಿ.ಮೀ ನಿಂದ

55 ಕಿ.ಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಹೀಗಾಗಿ, ಈ ಸಂದರ್ಭದಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತ

ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ 24 ಗಂಟೆಯ ಅವಧಿಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು,

ಕೆಲವು ಪ್ರದೇಶಗಳಲ್ಲಿ ಮಿಂಚು ಗುಡುಗು ಸಹಿತ ಧಾರಾಕಾರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಅಲ್ಲದೇ ಗರಿಷ್ಠ ಉಷ್ಣಾಂಶವು 29 ಮತ್ತು ಕನಿಷ್ಠ

ಉಷ್ಣಾಂಶವು 21 ಡಿಗ್ರಿ ಸೆಲ್ಸಿಯಸ್‌ ಇರುವ ಬಹಳಷ್ಟು ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.  

image courtesy pexels