ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಮಾನ್ಯ ಹಾಗೂ ಹಗುರದಿಂದ ಕೂಡಿದ ಮಳೆ ಆಗಿರುವುದು ವರದಿ ಆಗಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಇನ್ನು ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು.
ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ 39.4 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ.
ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು,
ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನಲ್ಲಿ ಹಾಗೂ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಕೇಂದ್ರ ಮೀಸಲು ಪೊಲೀಸ್ ಪಡೆಯ ನೇಮಕಾತಿ ಕನ್ನಡದಲ್ಲಿ ನಡೆಸಲು ಆಗ್ರಹ
ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಇನ್ನು ಗುಡುಗು ಸಹಿತ ಮಳೆ ಆಗುವ ಯಾವ ಎಚ್ಚರಿಕೆಯನ್ನು ನೀಡಿಲ್ಲ.
ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ
ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನಿಂದ ಕೂಡಿದ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗರಿಷ್ಠ ಉಷ್ಣಾಂಶದ ಎಚ್ಚರಿಕೆ
ಮುಂದಿನ 48 ಗಂಟೆಗಳು ಗರಿಷ್ಠ ಉಷ್ಣಾಂಶ ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ
ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ: ಸಾಧಾರಣ ಮಳೆ ಆಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೀನುಗಾರರಿಗೆ ಯಾವುದೇ ಮುನ್ನೆಚ್ಚರಿಕೆಯನ್ನು ನೀಡಿಲ್ಲ.
ಭಾರತೀಯ ರೈಲ್ವೆ: ರೈಲು ಅಪಘಾತದಲ್ಲಿ ಸಾವಿರಾರು ಜಾನುವಾರು ಸಾವು!
ಮುಂದಿನ 24 ಗಂಟೆಗಳ ಹೊರ ನೋಟ: ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹವಾಮಾನದಲ್ಲಿ ಯಾವುದೇ ಹೆಚ್ಚಿನ ಬದಲಾವಣೆಗಳು ಕಂಡುಬಂದಿಲ್ಲ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳಲ್ಲಿ: ಬೆಂಗಳೂರು ನಗರದಲ್ಲಿ ನಿರ್ಮಲ ಆಕಾಶವಿದ್ದು, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ.
ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ನಗರದಲ್ಲಿ ನಿರ್ಮಲ ಆಕಾಶವಿರುತ್ತದೆ.
ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.
ಉಳಿದಂತೆ ರಾಜ್ಯದಲ್ಲಿ ಅಲ್ಲಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ.