News

Rain ರಾಜ್ಯದಲ್ಲಿ ಮುಂದುವರಿದ ಸಾಧಾರಣ ಮಳೆ!

13 July, 2023 1:48 PM IST By: Hitesh
Continued moderate rain in the state!

ರಾಜ್ಯದ ವಿವಿಧ ಭಾಗದಲ್ಲಿ ಸಾಧಾರಣ ಮಳೆ ಮುಂದುವರಿದಿದೆ. ಕಳೆದ 24 ಗಂಟೆಯ ಅವಧಿಯಲ್ಲಿ ನೋಡುವುದಾದರೆ, ರಾಜ್ಯದಲ್ಲಿ ನೈರುತ್ಯ ಮುಂಗಾರು ದುರ್ಬಲವಾಗಿತ್ತು.

ಇನ್ನು ಕಳೆದ 24 ಗಂಟೆಯ ಅವಧಿಯಲ್ಲಿ ಕರಾವಳಿಯ ಬಹುತೇಕ ಕಡೆಗಳಲ್ಲಿ; ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ

ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿರುವುದು ವರದಿ ಆಗಿದೆ.

ಮಳೆ ಪ್ರಮಾಣ ಸೆಂ.ಮೀನಲ್ಲಿ: ಬುಧವಾರ ಉಡುಪಿಯ ಸಿದ್ದಾಪುರದಲ್ಲಿ, ಸುಳ್ಯ, ಮಾಣಿ, ಮಂಕಿ, ಚಿಂಚೋಳಿಯಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.

ಸಿದ್ದಾಪುರ, ಕ್ಯಾಸಲ್‌ ರಾಕ್‌, ಶಿರಾಲಿ ಪಿಟಿಒ, ಮಂಗಳೂರು, ಪುತ್ತೂರು, ಪಣಂಬೂರು, ಮಂಗಳೂರು ವಿಮಾನ ನಿಲ್ದಾಣ,

ಬುಕ್ಕಪಟ್ಟಣ, ಸರಗೂರು, ತುಮಕೂರು ಹಾಗೂ ದಾವಣಗೆರೆಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿರುವುದು ವರದಿ ಆಗಿದೆ.

ಮುಂದಿನ 24 ಗಂಟೆಯ ಅವಧಿ: ಮುಂದಿನ 24 ಗಂಟೆಯ ಅವಧಿಯಲ್ಲಿ ಕರಾವಳಿಯ ಬಹುತೇಕ ಕಡೆಗಳಲ್ಲಿ

ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮಿಂಚುಗುಡುಗು ಸಹಿತ ಮಳೆಯಾಗಲಿದೆ.

ಉತ್ತರ ಒಳನಾಡಿನ ಹಲವು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. 

ಮುಂದಿನ 48 ಗಂಟೆಯ ಅವಧಿ: : ಮುಂದಿನ 48 ಗಂಟೆಯ ಅವಧಿಯಲ್ಲಿ ಕರಾವಳಿಯ ಬಹುತೇಕ

ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮಿಂಚುಗುಡುಗು ಸಹಿತ ಮಳೆಯಾಗಲಿದೆ.

ಉತ್ತರ ಒಳನಾಡಿನ ಹಲವು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. 

ಭಾರೀ ಮಳೆ ಮುನ್ನೆಚ್ಚರಿಕೆ: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚುಗುಡುಗು ಸಹಿತ ಮಳೆಯಾಗಲಿದೆ.

ಇದೇ ಸಂದರ್ಭದಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು,

ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ಗುಡುಗು ಮುನ್ನೆಚ್ಚರಿಕೆ: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ.

ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಮೀನುಗಾರರಿಗೆ ಎಚ್ಚರಿಕೆ: ಮುಂದಿನ 24 ಗಂಟೆಯ ಅವಧಿಯಲ್ಲಿ ಕರ್ನಾಟಕದ ಕರಾವಳಿಯ ಭಾಗದಲ್ಲಿ ಬಿರುಗಾಳಿಯು ಗಂಟೆಗೆ

40ರಿಂದ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಬೀಸುವ ವಾತಾವರಣ ಇರುವುದರಿಂದ ಈ ಸಂದರ್ಭದಲ್ಲಿ

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಳಿದಂತೆ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳು ಇಲ್ಲ.

ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶ

ಮುಂದಿನ 24 ಗಂಟೆಯ ಅವಧಿಯಲ್ಲಿ ಬೆಂಗಳೂರು ನಗರ ಹಾಗೂ ಬೆಂಗಳೂರು ನಗರದ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾಮಾನ್ಯವಾಗಿ

ಮೋಡ ಕವಿದ ವಾತಾವರಣವಿರಲಿದ್ದು, ಒಂದೆರಡು ಬಾರಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ.

ಉಳಿದಂತೆ ಒಂದೆರಡು ಬಾರಿ ಹಗುರದಿಂದ ಕೂಡಿದ ಸಾಧಾರಣ ಮಿಂಚುಗುಡುಗು ಸಹಿತ

ಮಳೆಯಾಗಲಿದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಸುಳಿಗಾಳಿ ಬೀಸುವ ಸಾಧ್ಯತೆ ಇದೆ.

ಉಳಿದಂತೆ ಗರಿಷ್ಠ ಉಷ್ಣಾಂಶವು 28 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 21 ಡಿಗ್ರಿ ಸೆಲ್ಸಿಯಸ್‌ ಇರುವ ಬಹಳಷ್ಟು ಸಾಧ್ಯತೆ ಇದೆ

ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮುನ್ಸೂಚನೆಯನ್ನು ನೀಡಿದೆ.