ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರಿದಿದೆ.
ಕಳೆದ 24 ಗಂಟೆಯ ಅವಧಿಯಲ್ಲಿ ಕರಾವಳಿಯ ಒಂದೆರಡು ಕಡೆಗಳಲ್ಲಿ ಮಳೆಯಾಗಿದ್ದು, ಒಳನಾಡಿನಲ್ಲಿ ಒಣಹವೆ ಇತ್ತು.
ಉಳಿದಂತೆ ಸೆಂ.ಮೀ ಪ್ರಮಾಣದಲ್ಲಿ ಮಳೆ ಆಗಿಲ್ಲ. ಇನ್ನು ರಾಜ್ಯದಲ್ಲಿಯೇ ಅತೀ ಗರಿಷ್ಠ ಉಷ್ಣಾಂಶ
ಅತೀ ಗರಿಷ್ಠ ಉಷ್ಣಾಂಶ 41.0 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿರುವುದು ವರದಿ ಆಗಿದೆ.
ಮುಂದಿನ 24 ಗಂಟೆಗಳು: ರಾಜ್ಯದಲ್ಲಿ ಮುಂದಿನ 24 ಗಂಟೆಯ ಅವಧಿಯಲ್ಲಿ ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು,
ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಅಲ್ಲದೇ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಮುಂದಿನ 48 ಗಂಟೆಗಳು: ಇನ್ನು ಮುಂದಿನ 48 ಗಂಟೆಗಳ ಅವಧಿಯಲ್ಲಿ ಅಂದರೆ, ಬುಧವಾರ ಹಾಗೂ ಗುರುವಾರದ ಅವಧಿಯಲ್ಲಿ ದಕ್ಷಿಣ ಒಳನಾಡಿನ ಚಿಕ್ಕಮಗಳೂರು,
ಹಾಸನ, ಕೊಡಗು, ಮೈಸೂರು, ರಾಮನಗರ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ
ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಭಾರೀ ಮಳೆ ಎಚ್ಚರಿಕೆ: ರಾಜ್ಯದಲ್ಲಿ ಯಾವುದೇ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇಲ್ಲದೆ ಇರುವುದರಿಂದ ಭಾರೀ ಮಳೆ ಎಚ್ಚರಿಕೆಯನ್ನು ನೀಡಿಲ್ಲ.
ಅದೇ ರೀತಿಯಲ್ಲಿ ಮೀನುಗಾರರಿಗೂ ಯಾವುದೇ ಮುನ್ನೆಚ್ಚರಿಕೆಯನ್ನು ನೀಡಿಲ್ಲ.
ಅಲ್ಲದೇ ಉಳಿದಂತೆ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳು ಕಂಡುಬಂದಿಲ್ಲ.
ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶ: ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ 24 ಗಂಟೆಯ
ಅವಧಿಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಉಷ್ಣಾಂಶವು 33 ಮತ್ತು ಕನಿಷ್ಠ
ಉಷ್ಣಾಂಶವು 23 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
Pic Crdits: Pexels