ರಾಜ್ಯದಲ್ಲಿ ಮಳೆಯ ತೀವ್ರತೆ ಅಲ್ಪ ಮಟ್ಟಿಗೆ ಕಡಿಮೆ ಆಗಿದೆ. ಆದರೆ, ಕೆಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.
ಉದ್ಯೋಗ ಮೇಳ; 75 ಸಾವಿರಕ್ಕೂ ಹೆಚ್ಚು ಮಂದಿಗೆ ನೇಮಕಾತಿ ಪತ್ರ ವಿತರಣೆ !
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಈಚೆಗೆ ಧಾರಾಕಾರ ಮಳೆ ಆಗಿತ್ತು. ಸದ್ಯ ಮಳೆಯ ತೀವ್ರತೆ ಕಡಿಮೆ ಆಗಿದ್ದು, ಸಾಧಾರಣ ಮಳೆ ಮುಂದುವರಿದಿದೆ.
ನೈಋತ್ಯ ಮಾನ್ಸೂನ್ ರಾಜ್ಯದ ಉತ್ತರಒಳನಾಡಿನಲ್ಲಿ ಸಕ್ರಿಯವಾಗಿದೆ. ಕರಾವಳಿ ಭಾಗದಲ್ಲಿ ದುರ್ಬಲವಾಗಿದೆ. ಉತ್ತರ ಕರ್ನಾಟಕದ ಹಲವೆಡೆ ಮತ್ತು ಕರಾವಳಿಯ ಕೆಲವು ನಿರ್ದಿಷ್ಟ ಪ್ರದೇಶದಲ್ಲಿ ಮಳೆಯಾಗಿದೆ.
PM Kisan Samman Sammelan 2022: ರೈತರ ಖಾತೆಗೆ ಬರಲಿದೆ ನೇರವಾಗಿ 16,000 ಕೋಟಿ!
ಮುಂದಿನ 24 ಗಂಟೆಗಳ ಕಾಲ ಕರಾವಳಿಯ ಎಲ್ಲ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ,ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಸೇರಿದಂತೆ ವಿವಿಧೆಡೆ ಮಿಂಚು ಮತ್ತು ಗುಡುಗು ಸಹಿತ ಧಾರಾಕಾರ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನಷ್ಟು ಓದಿರಿ: ಗುಡ್‌ನ್ಯೂಸ್: ಪ್ರಧಾನಿ ಮೋದಿಯಿಂದ ಯುವಕರಿಗೆ ಭರ್ಜರಿ ಉಡುಗೊರೆ, 10 ಲಕ್ಷ ಸಿಬ್ಬಂದಿ ನೇಮಕಾತಿ!
ರಾಜ್ಯದಲ್ಲಿ ಮುಂದಿನ ಎರಡು ದಿನಗಳಕಾಲ ಮೋಡಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಚದುರಿದಂತೆ ಮಳೆ ಆಗಲಿದೆ. ಉಳಿದಂತೆ ಯಾವುದೇ ಜಿಲ್ಲೆಯಲ್ಲಿ ಭಾರೀ ಮಳೆ ಆಗುವ ಮುನ್ಸೂಚನೆ ಇಲ್ಲ.
ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಮುಂದಿನ 24 ಗಂಟೆಗಳ ಕಾಲ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.