News

Rain ರಾಜ್ಯದ ವಿವಿಧೆಡೆ ಮುಂದುವರಿದ ಮಳೆ, ಕಲಬುರಗಿ ಸೇರಿ ವಿವಿಧೆಡೆ ಆಲಿಕಲ್ಲು ಮಳೆ!

27 April, 2023 4:13 PM IST By: Hitesh
Continued rain in different parts of the state, including Kalaburagi and hail in different places! ((Pic Credits: Pexels)

ರೈತರಿಗೆ ಪ್ರಮುಖ ಸುದ್ದಿಗಳನ್ನು ತಲುಪಿಸುವ ಉದ್ದೇಶದಿಂದ ಕೃಷಿ ಜಾಗರಣ ಅಗ್ರಿನ್ಯೂಸ್‌ ಪರಿಚಯಿಸಿದ್ದು, ಇಂದಿನ ಪ್ರಮುಖ ಸುದ್ದಿಗಳು ಈ ರೀತಿ ಇವೆ. 

  • ರಾಜ್ಯದ ವಿವಿಧೆಡೆ ಮುಂದುವರಿದ ಮಳೆ, ಕಲಬುರಗಿ ಸೇರಿ ವಿವಿಧೆಡೆ ಆಲಿಕಲ್ಲು ಮಳೆ!
  • ನೀರಾವರಿ ಜಮೀನಿಗೆ 25 ಸಾವಿರ, ತೋಟಗಾರಿಕೆ ಬೆಳೆಗೆ 28 ಸಾವಿರ: ಸಿ.ಎಂ
  • 2.31 ಬಿಲಿಯನ್‌ಗೆ ಏರಿಕೆ ಕಂಡ ಆಧಾರ್‌ ಕಾರ್ಡ್‌ ದೃಢೀಕರಣ ವಹಿವಾಟು
  • ಚೀತಾಗಳ ಸ್ಥಳಾಂತರಕ್ಕೆ ಮಧ್ಯಪ್ರದೇಶ ಸರ್ಕಾರದಿಂದ ಪತ್ರ

ಸುದ್ದಿಗಳ ವಿವರ ಈ ರೀತಿ ಇದೆ.  

1. ರಾಜ್ಯದ ವಿವಿಧೆಡೆ ಮಳೆ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ ಯಾದಗಿರಿಯ ಸೈದಾಪುರದಲ್ಲಿ 7 ಸೆಂ.ಮೀ ಮಳೆ ಆಗಿರುವುದು ವರದಿ ಆಗಿದೆ.

ಗುರುವಾರ ಹಾಗೂ ಶುಕ್ರವಾರ ರಾಜ್ಯದ ವಿವಿಧ ಭಾಗದಲ್ಲಿ ಮಳೆ ಆಗಲಿದೆ.

ಉತ್ತರ ಒಳನಾಡಿನ ಬೀದರ್‌, ಬಾಗಲಕೋಟೆ, ಧಾರವಾಡ, ರಾಯಚೂರು, ಕಲಬುರ್ಗಿ, ಯಾದಗಿರಿ, ಕೊಪ್ಪಳ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ,

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ದಾವಣಗೆರೆ,ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ,

ಮೈಸೂರು, ತುಮಕೂರು, ವಿಜಯನಗರ, ಶಿವಮೊಗ್ಗ, ರಾಮನಗರ, ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಕರಾವಳಿಯ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ

ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರೀ ಮಳೆ ಮುನ್ನೆಚ್ಚರಿಕೆ: ಇನ್ನು ಮುಂದಿನ 48 ಗಂಟೆಗಳಲ್ಲಿ ಉತ್ತರ ಒಳನಾಡಿನ ಬೀದರ್‌, ಕಲಬುರ್ಗಿ,ಯಾದಗಿರಿ ಜಿಲ್ಲೆಯ ಒಂದೆರಡು ಕಡೆಗಳಲ್ಲಿ

ಆಲಿಕಲ್ಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚು ಸಾಧ್ಯತೆ ಇದ್ದು,

ಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
---------------- 

Cheetah

ಒಣ ಬೇಸಾಯಕ್ಕೆ 13 ಸಾವಿರ ರೂ. ಒಂದೇ ತಿಂಗಳಲ್ಲಿ ರೈತರ ಖಾತೆಗಳಿಗೆ ಹಣ ನೀಡಿದ್ದೇವೆ.

ನೀರಾವರಿ ಜಮೀನಿಗೆ 15 ಸಾವಿರ ದಿಂದ 25 ಸಾವಿರ, ತೋಟಗಾರಿಕೆ ಬೆಳೆಗಳಿಗೆ 18 ಸಾವಿರದಿಂದ 28 ಸಾವಿರಕ್ಕೆ ಹೆಚ್ಚಳ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇನ್ನು ಉತ್ತರ ಕರ್ನಾಟಕದ ಪ್ರಮುಖ ಯೋಜನೆ ಕೃಷ್ಣಾ ಮೇಲ್ದಂಡೆ ಯೋಜನೆಗೆ 50 ಸಾವಿರ ಕೋಟಿ ಕೊಡುವುದಾಗಿ ಕೃಷ್ಣೆಯ ಮೇಲೆ ಕಾಂಗ್ರೆಸ್‌ನವರು ಆಣೆ ಮಾಡಿದ್ದರು.

ಆದರೆ, ಐದು ವರ್ಷ ಯಾವುದೇ ಯೋಜನೆ ಪೂರ್ಣಗೊಳಿಸಲಿಲ್ಲ. ಇದು ವಚನ ಭ್ರಷ್ಟ ಪಕ್ಷ ಕಾಂಗ್ರೆಸ್ ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನು ಈ ಭಾಗದಲ್ಲಿ‌ ಮಹಾಲಕ್ಷ್ಮೀ ಏತ ನೀರಾವರಿ ಯೋಜನೆಯನ್ನು ನಾವೇ ಆರಂಭಿಸಿದ್ದು, ನಾವೇ ಪೂರ್ಣಗೊಳಿಸುವ ಜವಾಬ್ದಾರಿ ತೆಗೆದುಕೊಳ್ಳುತ್ತೇವೆ ಎಂದರು.
----------------
2023ರ ಮಾರ್ಚ್ನಲ್ಲಿ ಆಧಾರ್ ಹೊಂದಿರುವ ಸುಮಾರು 2.31 ಬಿಲಿಯನ್ ದೃಢೀಕರಣ ವಹಿವಾಟುಗಳನ್ನು ಮಾಡಿದ್ದಾರೆ.

ಈ ಅಂಕಿ- ಅಂಶವು ಆಧಾರ್‌ನ ಹೆಚ್ಚುತ್ತಿರುವ ಬಳಕೆ ಮತ್ತು ದೇಶದಲ್ಲಿ ಡಿಜಿಟಲ್ ಆರ್ಥಿಕತೆಯ ಬೆಳವಣಿಗೆಯನ್ನು ಸೂಚಿಸುತ್ತದೆ ಎಂದು ಹೇಳಲಾಗಿದೆ.

ಮಾರ್ಚ್‌ನಲ್ಲಿ ಆಧಾರ್ ದೃಢೀಕರಣ ವಹಿವಾಟುಗಳ ಸಂಖ್ಯೆ ಫೆಬ್ರವರಿಗಿಂತ ಉತ್ತಮವಾಗಿದೆ.

ಫೆಬ್ರವರಿಯಲ್ಲಿ 2.26 ಬಿಲಿಯನ್ ದೃಢೀಕರಣ ವಹಿವಾಟು ಆಗಿತ್ತು. ಹೆಚ್ಚಿನ ದೃಢೀಕರಣ ವಹಿವಾಟುಗಳನ್ನು ಬಯೋಮೆಟ್ರಿಕ್ ಫಿಂಗರ್‌ಪ್ರಿಂಟ್ ಬಳಸಿ ಮಾಡಲಾಗುತ್ತದೆ.

ಇದರ ನಂತರ ಜನಸಂಖ್ಯಾಶಾಸ್ತ್ರ ಮತ್ತು OTP ದೃಢೀಕರಣ ಮಾಡಲಾಗುತ್ತದೆ. ಆಧಾರ್ ಇ-ಕೆವೈಸಿ ಸೇವೆಯು ಬ್ಯಾಂಕಿಂಗ್

ಮತ್ತು ಬ್ಯಾಂಕಿಂಗ್ ಅಲ್ಲದ ಹಣಕಾಸು ಸೇವೆಗಳಿಗೆ ಪಾರದರ್ಶಕ ಮತ್ತು ಉತ್ತಮ ಗ್ರಾಹಕರ ಅನುಭವವನ್ನು

ಒದಗಿಸುವ ಮೂಲಕ ಮತ್ತು ವ್ಯವಹಾರವನ್ನು ಸುಲಭಗೊಳಿಸಲು ಸಹಾಯ ಮಾಡುವ ಮೂಲಕ ಪ್ರಮುಖ ಪಾತ್ರವನ್ನು ವಹಿಸುತ್ತಿದೆ.
----------------
ಕಳೆದ ಒಂದು ತಿಂಗಳ ಅಂತರದಲ್ಲಿ ಆಫ್ರಿಕಾದಿಂದ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ತರಲಾಗಿದ್ದ ಎರಡು ಚೀತಾ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ

ಮಧ್ಯಪ್ರದೇಶ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಪತ್ರದಲ್ಲಿ ಚೀತಾ ಸ್ಥಳಾಂತರಕ್ಕೆ ಮನವಿ ಮಾಡಲಾಗಿದೆ. ಆಫ್ರಿಕಾದಿಂದ ತರಲಾಗಿದ್ದ

ಚೀತಾಗಳಲ್ಲಿ ಎರಡು ಚೀತಾಗಳು ಮೃತಪಟ್ಟಿದ್ದು, ಒಂದು ಚೀತಾ ನಾಲ್ಕು ಮರಿಗಳಿಗೆ ಜನ್ಮವನ್ನು ಸಹ ನೀಡಿದೆ.

ಚೀತಾಗಳು ಮೃತಪಟ್ಟ ಬೆನ್ನಲ್ಲೇ ಮಧ್ಯಪ್ರದೇಶ ಅರಣ್ಯ ಇಲಾಖೆಯು ಜಾಗ ಹಾಗೂ ಸಿಬ್ಬಂದಿ

ಕೊರತೆಯ ಇರುವುದರಿಂದ ಚೀತಾಗಳನ್ನು ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ.  
----------------  
ಇದು ಇಂದಿನ ಪ್ರಮುಖ ಸುದ್ದಿಗಳು ನಿರಂತರ ಸುದ್ದಿಗಾಗಿ ಕೃಷಿ ಜಾಗರಣ ನೋಡಿ ಧನ್ಯವಾದ!