1. ಸುದ್ದಿಗಳು

ರಾಜ್ಯದ ಹಲವು ಜಿಲ್ಲೆಯಲ್ಲಿ ಮುಂದುವರಿದ ಮಳೆ

Hitesh
Hitesh
Rain

ರಾಜ್ಯದ ವಿವಿಧೆಡೆ ಸಾಧಾರಣ ಮಳೆ ಮುಂದುವರಿದಿದೆ. ಎಲ್ಲೆಲ್ಲಿ ಮಳೆ ಆಗಲಿದೆ, ವಾತಾವರಣ ಹೇಗಿರಲಿದೆ ಇಲ್ಲಿದೆ ಮಾಹಿತಿ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ 24ಗಂಟೆಗಳಲ್ಲಿ ಸಾಧಾರಣ ಮಳೆ ಆಗಲಿದೆ.

ಇದನ್ನೂ ಓದಿರಿ: ನವೆಂಬರ್‌ 7ರಿಂದ ಒಂದು ತಿಂಗಳು ಜಾನುವಾರುಗಳಿಗೆ ಕಾಲುಬಾಯಿ ಲಸಿಕೆ ಅಭಿಯಾನ: ಪ್ರಭು ಚವ್ಹಾಣ್‌

ಮಲೆನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಹಗುರ ಮತ್ತು ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.

ಕರಾವಳಿ ಮತ್ತು ದಕ್ಷಿಣದ ವಿವಿಧ ಜಿಲ್ಲೆಗಳಲ್ಲಿ ಅತಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ.

ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಅತಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ ಪ್ರದೇಶದ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು “ಕೃಷಿ ಮೇಳ” ಹಲವು ದಾಖಲೆ ಸೃಷ್ಟಿ ; ಮೇಳಕ್ಕೆ 17.35 ಲಕ್ಷ ಜನ ಭೇಟಿ! 

ಇನ್ನು ಧಾರವಾಡ, ಬೆಳಗಾವಿ, ಹಾವೇರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಗುರದಿಂದ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.

ಈ ಪ್ರದೇಶದ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಮಲೆನಾಡಿನ ಕೊಡಗು ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗಲಿದ್ದು, ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ
ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಸ್ವಲ್ಪಮಟ್ಟಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ರೈತರ ಖಾತೆಗೆ ನೇರವಾಗಿ ಡೀಸೆಲ್‌ ಸಬ್ಸಿಡಿ ಪಾವತಿ; ದಾಖಲೆಯೂ ಬೇಕಿಲ್ಲ: ಬಿ.ಸಿ ಪಾಟೀಲ್ 

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚದುರಿದಂತೆ ಅಲ್ಲಲ್ಲಿ ಅತಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಅತಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.    

13.5 ಲಕ್ಷ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: 7ನೇ ವೇತನ ಆಯೋಗ ರಚನೆಗೆ ಅಸ್ತು! 

Rain

ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳ ಕಾಲ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 19 ಡಿಗ್ರಿ ಸೆಲ್ಸಿಯಸ್‌ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಕಳೆದ 24 ಗಂಟೆಗಳಲ್ಲಿ ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಕನಿಷ್ಠ 11.6 ಡಿಗ್ರಿ ಸೆಲ್ಸಿಯಸ್‌ಬೀದರ್‌ನಲ್ಲಿ ದಾಖಲಾಗಿದೆ.

ರಾಜ್ಯದಲ್ಲಿ ಮುಂದಿನ 24 ಗಂಟೆಗಳ ಕಾಲ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್‌ಹಾಗೂ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್‌ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ರಾಜ್ಯದ ಹವಾಮಾನದಲ್ಲಿ ಭಾರಿ ಬದಲಾವಣೆಗಳು ಇಲ್ಲ. ಮೀನುಗಾರರಿಗೆ ಅಥವಾ ನಿರ್ದಿಷ್ಟ ಪ್ರದೇಶದಲ್ಲಿ ಯಾವುದೇ ಗಮನಾರ್ಹ ಮುನ್ಸೂಚನೆ ಅಥವಾ ಎಚ್ಚರಿಕೆಯನ್ನು ನೀಡಿಲ್ಲ.  

ಇದನ್ನೂ ಓದಿರಿ ತಿರುಪತಿ ತಿರುಮಲದಲ್ಲಿರುವ ಆಸ್ತಿ ಮೌಲ್ಯ ಐದು ಸಾವಿರ ಕೋಟಿ! 10.25 ಟನ್‌ ಬಂಗಾರ, ಒಟ್ಟಾರೆ ಆಸ್ತಿ ಎಷ್ಟು ಗೊತ್ತೆ?

Published On: 07 November 2022, 12:32 PM English Summary: Continued rain in many districts of the state

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.