ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಇನ್ನೂ ಮೂರು ದಿನ ಭಾರೀಯಿಂದ ಭಾರೀ ಮಳೆ (Heavy to heavy rain)ಯಾಗಲಿದೆ
ಎಂದು ಭಾರತೀಯ ಹವಾಮಾನ ಇಲಾಖೆ (Indian Meteorological Department forecast) ಮುನ್ಸೂಚನೆ ನೀಡಿದೆ.
ಕರ್ನಾಟಕ, ತೆಲಂಗಾಣ ಹಾಗೂ ಕೇರಳ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ನೈರುತ್ಯ ಮುಂಗಾರು ಚುರುಕು ಪಡೆದುಕೊಂಡಿದ್ದು,
ಭಾರೀಯಿಂದ ಭಾರೀ ಮಳೆಯಾಗುತ್ತಿದೆ.
ಇನ್ನು ಕಳೆದ 24 ಗಂಟೆಯ ಅವಧಿಯಲ್ಲಿ ನೈರುತ್ಯ ಮುಂಗಾರು ರಾಜ್ಯದಾದ್ಯಂತ ಚುರುಕಾಗಿತ್ತು.
ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆಯಾಗಿರುವುದು ವರದಿ ಆಗಿದೆ.
ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್‌ನಲ್ಲಿ ಬರೋಬ್ಬರಿ 21 ಸೆಂ.ಮೀ ಮಳೆ (Rain)ಯಾಗಿರುವುದು ವರದಿ ಆಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ 17 ಸೆಂ.ಮೀ, ಗೇರುಸೊಪ್ಪ, ಉಡುಪಿಯಲ್ಲಿ ತಲಾ 13 ಸೆಂ.ಮೀ ಮಳೆಯಾಗಿರುವುದು ವರದಿ ಆಗಿದೆ.
ಅಲ್ಲದೇ ಹೊನ್ನಾವರ, ಲಿಂಗನಮಕ್ಕಿಯಲ್ಲಿ ತಲಾ 11 ಸೆಂ.ಮೀ., ಕುಮಟಾ, ಮಂಚಿಕೆರೆ, ಮಂಕಿ,
ಕೊಲ್ಲೂರು, ಕೋಟ, ಕುಂದಾಪುರದಲ್ಲಿ ತಲಾ 10ಸೆಂ.ಮೀ (Rained) ಮಳೆಯಾಗಿದೆ.
ಇನ್ನು ಮುಂದಿನ 24 ಗಂಟೆಯ ಅವಧಿಯಲ್ಲಿ ರಾಜ್ಯದಾದ್ಯಂತ ಬಹುತೇಕ ಕಡೆಗಳಲ್ಲಿ
ಮಿಂಚು ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಗುರುವಾರ ಹಾಗೂ ಶುಕ್ರವಾರವು ಕರಾವಳಿ ಮತ್ತು ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ
ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ
ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.
ಭಾರೀ ಮಳೆ ಮುನ್ನೆಚ್ಚರಿಕೆ: ಕರಾವಳಿಯ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀಯಿಂದ ಅತೀ ಭಾರೀ ಮಳೆಯಾಗುವ ಸಾಧ್ಯತೆ ಇದ್ದು,
ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಭಾರೀ ಮಳೆ ಮುನ್ನೆಚ್ಚರಿಕೆ
ಕರಾವಳಿಯ ಎಲ್ಲ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು,
ಒಂದೆರಡು ಕಡೆಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ ಜೆಲ್ಲೆ
ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ
ಭಾರೀಯಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ.
ಅಲ್ಲದೇ ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ
ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಗುಡುಗು ಮುನ್ನೆಚ್ಚರಿಕೆ
ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಮಿಂಚು ಗುಡುಗಿನ ಸಾಧ್ಯತೆ ಇದೆ.
ಬಿರುಗಾಳಿಯ ವೇಗವು ಗಂಟೆಗೆ 40ರಿಂದ 50 ಕಿ.ಮೀ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಮೀನುಗಾರರಿಗೆ ಎಚ್ಚರಿಕೆ
ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯ ವೇಗವು ಗಂಟೆಗೆ 40ರಿಂದ 45 ಕಿ.ಮೀ ನಿಂದ 55 ಕಿ.ಮೀ
ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಹೀಗಾಗಿ, ಈ ಸಂದರ್ಭದಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
ಉಳಿದಂತೆ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳು ಕಂಡು ಬಂದಿಲ್ಲ.
ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತ
ಬೆಂಗಳೂರು ನಗರ ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು,
ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶವು 25 ಮತ್ತು
ಕನಿಷ್ಠ ಉಷ್ಣಾಂಶವು 20 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
Image Credit: Pexels
Share your comments