News

ರಾಜ್ಯದಲ್ಲಿ ಮುಂದುವರಿದ ಮಳೆಯ ಆರ್ಭಟ!

13 November, 2022 3:12 PM IST By: Hitesh
Continued rain in the state!

ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಆಗುತ್ತಿದೆ.

ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾನುವಾರವೂ ಮಳೆ ಮುಂದುವರಿದಿದೆ.

ಪಿ.ಎಂ ಜನೌಷಧಿ ಯೋಜನೆ: ಕರ್ನಾಟಕ ದೇಶದಲ್ಲೇ ದ್ವಿತೀಯ!

ಕಳೆದ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ವಿವಿಧೆಡೆ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆ ಮಳೆ ಆಗಿದೆ. ಇನ್ನು ಕರಾವಳಿ ಭಾಗದಲ್ಲಿ ಒಣಹವೆ ಮುಂದುವರಿದಿತ್ತು.

ಬೆಂಗಳೂರು ನಗರ, ರಾಮನಗರ, ಬೆಂಗಳೂರು ಎಚ್‌ಎಎಲ್‌ ವಿಮಾನ ನಿಲ್ದಾಣ, ಮಾಲೂರಿನಲ್ಲಿ ತಲಾ 2 ಸೆಂ.ಮೀ ಮಳೆ ಆಗಿದೆ.

ಕೊಳ್ಳೇಗಾಲ, ಮೈಸೂರು, ಹೊಸಕೋಟೆ, ಕೋಲಾರ, ಸುತ್ತೂರು, ಸರಗೂರು, ಕುಣಿಗಲ್‌, ಕೃಷ್ಣರಾಜಪೇಟೆ, ಮದ್ದೂರು, ಬಂಡೀಪುರ, ಹರದನಹಳ್ಳಿಯಲ್ಲಿ ತಲಾ ಒಂದು ಸೆಂ.ಮೀ ಮಳೆ ಆಗಿದೆ.

ಇನ್ನು ಮುಂದಿನ 24 ಗಂಟೆಗಳ ಕಾಲ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.

Shah Rukh Khan: ಬಾಲಿವುಡ್‌ “ಬಾದ್‌ ಶಾ” ಶಾರುಕ್‌ಗೆ ದಂಡ!

ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.

ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ

ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷ-2023: ಅದ್ಧೂರಿ ಆಚರಣೆಗೆ ಸಿದ್ಧತೆ!

ಉಳಿದಂತೆ ಹವಾಮಾನದಲ್ಲಿ ಭಾರೀ ಬದಲಾವಣೆ ಇಲ್ಲ.

ಚಿನ್ನದ ದರದಲ್ಲಿ ಮತ್ತೆ ಏರಿಕೆ, ಎಷ್ಟಿದೆ ಮಾರುಕಟ್ಟೆಯಲ್ಲಿ ಚಿನ್ನದ ದರ ?  

rain

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆ ಆಗುವ ಸಾಧ್ಯತೆ ಇದೆ. ಕೆಲವು ಕಡೆ ಬೆಳಿಗ್ಗೆ ಮಂಜು ಮುಸುಕಿದ ವಾತಾವರಣ ಇರಲಿದೆ.

ನೇಪಾಳದಲ್ಲಿ ಒಂದೇ ವಾರದಲ್ಲಿ ಮೂರನೇ ಬಾರಿ ಭೂಕಂಪನ: ದೆಹಲಿ ಜನಕ್ಕೆ ಆತಂಕ!  

ರಾಜ್ಯದಲ್ಲಿ ಮುಂದಿನ 24 ಗಂಟೆ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

MBBS ಪುಸ್ತಕಗಳು ಕನ್ನಡಕ್ಕೆ ಅನುವಾದವಾಗುವುದೇ, ಸರ್ಕಾರದ ನಿಲುವೇನು?