News

ರಾಜ್ಯದ ವಿವಿಧೆಡೆ ಮುಂದುವರಿದ ಧಾರಾಕಾರ ಮಳೆ!

27 March, 2023 11:13 AM IST By: Hitesh
Continued Torrential Rain in Different Parts Of The State!

ರಾಜ್ಯದ ವಿವಿಧೆಡೆ ಮಳೆ ಮುಂದುವರಿದಿದ್ದು, ಸೋಮವಾರ ಹಾಗೂ ಮಂಗಳವಾರವೂ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ ಆಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು.

ಇನ್ನು ಚಿಕ್ಕಬಳ್ಳಾಪುರದಲ್ಲಿ 1 ಸೆಂ.ಮೀ ಮಳೆ ಆಗಿರುವುದು ವರದಿ ಆಗಿದೆ.

ಮುಂದಿನ 24 ಗಂಟೆಗಳ ಕಾಲ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ,

ಚಾಮರಾಜನಗರ, ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆ, ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ.

ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಉಳಿದ ಕಡೆಗಳಲ್ಲಿ ಒಣಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.

ಗುಡುಗು ಮುನ್ನೆಚ್ಚರಿಕೆ

ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ ಹಾಗೂ ಮಂಡ್ಯ

ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗುಡುಗು ಹಾಗೂ ಮಿಂಚು ಸಹಿತ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೇಂದ್ರದಿಂದ ಎಲ್‌ಪಿಜಿ ಗ್ಯಾಸ್‌ ಹೊಂದಿರುವವರಿಗೆ ಸಿಹಿಸುದ್ದಿ: ಬರೋಬ್ಬರಿ 200 ಸಬ್ಸಿಡಿ ನೀಡಲು ಅನುಮೋದನೆ

ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ ಅಂದರೆ ಹೆಚ್ಚು ಬಿಸಿಲು ಕಂಡು ಬಂದ ಪ್ರದೇಶಗಳಲ್ಲಿ ಕಲಬುರಗಿ ಇದೆ.

ಕಲಬುರಗಿಯಲ್ಲಿ 38.3 ಡಿಗ್ರಿ ಸೆಲ್ಸಿಯಸ್‌ (ನೆತ್ತಿ ಸುಡುವ ಬಿಸಿಲು) ದಾಖಲಾಗಿದೆ.

ಇನ್ನು ಅತೀ ಕನಿಷ್ಠ ತಾಪಮಾನ ಅಂದರೆ, ಚಳಿ ಹೆಚ್ಚಾಗಿ ಕಂಡು ಬಂದ ಪ್ರದೇಶಗಳಲ್ಲಿ ಬಾಗಲಕೋಟೆ ಇದೆ.

ಬಾಗಲಕೋಟೆಯಲ್ಲಿ ಕನಿಷ್ಠ ಉಷ್ಣಾಂಶವು 13 ಡಿಗ್ರಿ ಸೆಲ್ಸಿಯಸ್‌ ಇರುವುದು ದಾಖಲಾಗಿದೆ.

ಮಾರ್ಚ್‌ 28ರ ವರೆಗಿನ ಮುನ್ಸೂಚನೆ

ದಕ್ಷಿಣ ಒಳನಾಡಿನ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ ಹಾಗೂ ಮಂಡ್ಯ ಜಿಲ್ಲೆಯ ಒಂದೆರಡು ಕಡೆಗಳಲ್ಲಿ

ಗುಡುಗು ಹಾಗೂ ಮಿಂಚು ಸಹಿತ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ.

ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಉಳಿದ ಕಡೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಸಿಹಿಸುದ್ದಿ: ತುಟ್ಟಿಭತ್ಯೆ ಹೆಚ್ಚುವರಿ ಕಂತು ಬಿಡುಗಡೆಗೆ ಸಂಪುಟ ಅನುಮೋದನೆ

ಮುಂದಿನ 48 ಗಂಟೆಗಳು

ರಾಜ್ಯದಾದ್ಯಂತ ಮುಂದಿನ 48 ಗಂಟೆಗಳ ಕಾಲ ಒಣಹವೆ ಮುಂದುವರಿಯುವ ಬಹಳಷ್ಟು ಸಾಧ್ಯತೆಗಳಿವೆ.

ಈ ಸಂದರ್ಭದಲ್ಲಿ ಮೀನುಗಾರರಿಗೆ ಯಾವುದೇ ಮುನ್ಸೂಚನೆ ನೀಡಿಲ್ಲ.

PM Kisan 14th Installment release: ಪಿಎಂ ಕಿಸಾನ್‌ 14ನೇ ಕಂತಿನ ಕುರಿತು ಮಹತ್ವದ ಮಾಹಿತಿ!

Rain

ಗರಿಷ್ಠ ಉಷ್ಣಾಂಶದ ಎಚ್ಚರಿಕೆ

ಗರಿಷ್ಠ ಉಷ್ಣಾಂಶವು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ ಕಡಿಮೆ ಆಗುವ ಸಾಧ್ಯತೆ ಇದೆ.

ಮುಂದಿನ 24 ಗಂಟೆಗಳಲ್ಲಿ ಗರಿಷ್ಠ ಉಷ್ಣಾಂಶವು ಕರಾವಳಿಯ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್‌ ಕಡಿಮೆಯಾಗುವ ಸಾಧ್ಯತೆ ಇದೆ.

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ.

ಸಂಜೆ, ರಾತ್ರಿ ವೇಳೆ ಮಳೆ ಹಾಗೂ ಗುಡುಗಿನಿಂದ ಕೂಡಿದ ಹಗುರ ಮಳೆ ಆಗುವ ಸಾಧ್ಯತೆ ಇದೆ.

ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್‌ ಇರುವ ಬಹಳಷ್ಟು ಸಾಧ್ಯತೆಗಳಿವೆ.

ಮುಂದಿನ 48 ಗಂಟೆಗಳಲ್ಲಿ

ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ನಿರ್ಮಲ ಆಕಾಶವಿರುತ್ತದೆ.

ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್‌ ಇರುವ ಬಹಳಷ್ಟು ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ. 

Aadhaar- Pan ಈ ನಿರ್ದಿಷ್ಟ ವ್ಯಾಪ್ತಿಯಲ್ಲಿದ್ದರೆ ಆಧಾರ್‌- ಪ್ಯಾನ್‌ ಲಿಂಕ್‌ ಮಾಡಬೇಕಿಲ್ಲ!