1. ಸುದ್ದಿಗಳು

ಪ್ರತಿ ಗ್ರಾಮ ಪಂಚಾಯಿತಿಗೆ ಕೃಷಿ ಪತ್ತಿನ ಸಹಕಾರ ಸಂಘ ಸ್ಥಾಪನೆ- ಸಹಕಾರ ಸಚಿವ ಕೆ.ಎನ್.ರಾಜಣ್ಣ

Maltesh
Maltesh
Cooperative Minister K.N. Rajanna Talk About Cooperative Societies

ರೈತಾಪಿ ವರ್ಗಕ್ಕೆ ಅನುಕೂಲವಾಗಲು ಪ್ರತಿ ಗ್ರಾಮ ಪಂಚಾಯಿತಿಗೊಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ (ಪಿಕೆಪಿಎಸ್) ಸಂಘಗಳನ್ನು ರಚಿಸುವುದಾಗಿ ರಾಜ್ಯದ ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದರು.

ಸಹಕಾರ ಇಲಾಖೆಯ ಕಲಬುರಗಿ ಪ್ರಾಂತ್ಯದ ಪ್ರಗತಿ ಪರಿಶೀಲನೆ ಸಭೆ ನಡೆಸಿದ‌ ನಂತರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವೈದ್ಯನಾಥನ್ ವರದಿ ಪ್ರಕಾರ ಪ್ರತಿ ಗ್ರಾಮ ಪಂಚಾಯತಿ ಕೇಂದ್ರಕ್ಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಇರಬೇಕೆಂದು ತಿಳಿಸಿದ್ದು, ಅದರಂತೆ ಸ್ಥಾಪಿಸಲಾಗುವುದು ಎಂದರು.

ಈಗ ಗ್ರಾಮ ಪಂಚಾಯಿತಿಗೊಂದು ಸಂಘಗಳಿಲ್ಲ. ಎಲ್ಲ ಗ್ರಾಮ ಪಂಚಾಯತಿ ಯಲ್ಲಿ ಸಂಘಗಳು ರಚನೆಯಾದಲ್ಲಿ ಎಲ್ಲ ರೈತರಿಗೆ ಸಮರ್ಪಕ ಸಹಾಯ ಕಲ್ಪಿಸಲು ಅನುಕೂಲವಾಗುತ್ತದೆ.

ಹೊ‌ಸ ಸಂಘಗಳ ರಚನೆ ಕಾರ್ಯ ಆದಷ್ಟು ಬೇಗನೇ ಕೈಗೆತ್ತಿಕೊಳ್ಳಲಾಗುವುದು. ಇಂದಿನ ಸಭೆಯಲ್ಲಿ ಡಿಸೆಂಬರ್ ಒಳಗೆ ಗ್ರಾಮ ಪಂಚಾಯಿತಿವಾರು ಸಂಘಕ್ಕೆ ಗ್ರಾಮ ಪಂಚಾಯತಿವಾರು ಗಡಿ ಗುರುತಿಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ರಾಜ್ಯದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಅಥವಾ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಜತೆಗೆ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳನ್ನು ಸಹಕಾರ ಸಂಘದ 128( ಎ) ಅನ್ವಯ ಸೇವಾ ಭದ್ರತೆ ಕಲ್ಪಿಸಲು ಉದ್ದೇಶಿಸಲಾಗಿದೆ.

ಪಿಕೆಪಿಸ್ ಆಡಳಿತ ಮಂಡಳಿ ಅವಕೃಪೆಗೆ ಒಳಗಾದರೆ ಕಾರ್ಯದರ್ಶಿ ಮನೆಗೆ ಹೋಗುವ ಪರಿಸ್ಥಿತಿ ಈಗಿದೆ. ಇದನ್ನು ತಪ್ಪಿಸಲು ಮತ್ತು ಅವರಿಗೆ ಸೇವಾ ಭದ್ರತೆ ಕಲ್ಪಿಸುವುದರ ಜತೆಗೇ ಕೆಲವು ಜವಾಬ್ದಾರಿಗಳನ್ನು ವಹಿಸಲು ರೂಪು ರೇಷೆ ಸಿದ್ಧಮಾಡಲಾಗುತ್ತಿದೆ ಎಂದು ಸಚಿವರು ಸ್ಪಷ್ಟ ಪಡಿಸಿದರು.

6,000 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿಗಳು ಹಾಗೂ 15,500 ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳನ್ನು ಯಾವ ಮಾನದಂಡದ ಮೇಲೆ ಸೇವಾ ಭದ್ರತೆ ಕಲ್ಪಿಸಬೇಕೆಂಬುದನ್ನು ಇಲಾಖೆಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸುದೀರ್ಘವಾಗಿ ಚರ್ಚೆ ನಡೆಸಿ ಅಂತಿಮಗೊಳಿಸಲಾಗುವುದು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.

ಅವ್ಯವಹಾರ ತನಿಖೆಗೆ: ಸಹಕಾರ ಇಲಾಖೆಯಲ್ಲಿ ನಡೆದ ಅವ್ಯವಹಾರ ತನಿಖೆ ನಡೆಯುತ್ತವೆ. ಆದರೆ ಮುಂದೆ ಕ್ರಮ ಜರುಗುವುದಿಲ್ಲ ಎಂಬ ವ್ಯಾಪಕ ದೂರಿನ ಹಿನ್ನೆಲೆಯಲ್ಲಿ ಸಾಲ ಹಂಚಿಕೆಯಲ್ಲಿ ಎಸಗಿರುವ ಅವ್ಯಹಾರ ಅವ್ಯವಹಾರ ಹಗರಣವನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಅವ್ಯವಹಾರ ಹಣ ಅವ್ಯವಹಾರ ಎಸಗಿರುವ ಸಿಬ್ಬಂದಿಗಳ ಆಸ್ತಿ ಮುಟ್ಟುಗೋಲು ಹಾಕಿ ಹಣ ವಸೂಲಿ ಮಾಡಲಾಗುವುದು. ಯಾರೇ ಎಷ್ಟೇ ದೊಡ್ಡವರಿದ್ದರೂ ತಪ್ಪಿತಸ್ಥರನ್ನು ರಕ್ಷಿಸುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

Published On: 31 July 2023, 04:59 PM English Summary: Cooperative Minister K.N. Rajanna Talk About Cooperative Societies

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.