1. ಸುದ್ದಿಗಳು

ಹೊರ ರಾಜ್ಯದಿಂದ ಬಂದವರಿಗೆ ಮತ್ತೆ 14 ದಿನ ಕ್ವಾರಂಟೈನ್

Corona

ಹೊರ ರಾಜ್ಯಗಳಿಂದ ಬಂದ ಪ್ರಯಾಣಿಕರಿಗೆ 7 ದಿನದ ಬದಲಿಗೆ 14 ದಿನಗಳ ಕಾಲ ಕ್ವಾರಂಟೈನ್ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವಿಟರ್ ನಲ್ಲಿ  ತಿಳಿಸಿದ್ದಾರೆ.

ಇತ್ತೀಚೆಗೆ ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಲೇ ಇದೆ. ಅದರಲ್ಲೂ ವಿಶೇಷವಾಗಿ ಹೊರರಾಜ್ಯಗಳಿಂದ ಬಂದವರಿಂದ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದೆ. ಬೆಂಗಳೂರು ಮತ್ತು ರಾಜ್ಯದಲ್ಲಿ ಹೊರ ರಾಜ್ಯಗಳಿಂದ ಬಂದಿರುವ ಪ್ರಯಾಣಿಕರಿಗೆ ವ್ಯಾಪಕ ಪ್ರಮಾಣದಲ್ಲಿ ಸೋಂಕು ತಗುಲಿರುವುದನ್ನು ಪರಿಗಣಿಸಿ ರಾಜ್ಯ ಸರ್ಕಾರ ಹೊರ ರಾಜ್ಯಗಳ ಪ್ರಯಾಣಿಕರಿಗೆ ವಿಧಿಸಲಾಗಿರುವ ನಿಯಮಗಳನ್ನು ಬದಲಿಸಿದೆ.

ಲಾಕ್ಡೌನ್ ನಂತರ ರಾಜ್ಯದಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡ ಆರಂಭದಲ್ಲಿ ಕಟ್ಟುನಿಟ್ಟಾಗಿ ಕ್ವಾರಂಟೈನ್ ಮಾಡ

ಲಾಗುತ್ತಿತ್ತು. ಆದರೆ ಕ್ವಾರೆಂಟೈನಲ್ಲಿರುವ ಸಂಖ್ಯೆ ಹೆಚ್ಚಾಗಿ ಅಲ್ಲಿ ಪ್ರಕರಣಗಳು ಹೆಚ್ಚಾಗುತ್ತಿತ್ತು. ಇದನ್ನು ಗಮನಿಸಿ ಕ್ವಾರಂಟೈನ್ ನಿಯಮಗಳನ್ನು ರಾಜ್ಯ ಸರ್ಕಾರ ಸಡಿಲಗೊಳಿಸಿತು. ಹೊರ ರಾಜ್ಯಗಳಿಂದ ಬಂದ ಪ್ರಯಾಣಿಕರಿಗೆ 7 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ ಮಾಡಿತು. ಅಷ್ಟರೊಳಗೆ ರೋಗ ಲಕ್ಷಣಗಳು ಕಂಡು ಬರದಿದ್ದರೇ ಮನೆಯಲ್ಲೇ ಕ್ವಾರಂಟೈನ್ ಆಗಲು ಸರ್ಕಾರ ಅನುಮತಿ ನೀಡಿತು. ಆದರೆ ಈಗ ಹೊರ ರಾಜ್ಯದಿಂದ ಬಂದವರಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವುದರಿಂದ  ಹೊರ ರಾಜ್ಯಗಳಿಂದ ಬಂದವರಿಗೆ 14 ದಿನ ಸ್ಥಾಂಸ್ಥಿಕ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ ಎಂದು  ತಿಳಿಸಿದ್ದಾರೆ.

Published On: 22 June 2020, 04:39 PM English Summary: corona news

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.