ಕೋವಿಡ್ ಸೋಂಕು ಪ್ರಕರಣ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು , ಕೋರೋನಾ ವಾರಿಯರ್ಸ್, ಪೊಲೀಸ್ ಸಿಬ್ಬಂದಿ, ಶಿಕ್ಷಕ ಹೀಗೆ ಬ್ಯಾಂಕ್ ಹೀಗೆ ಎಲ್ಲಾ ಕ್ಷೇತ್ರಗಳಲ್ಲಿ ಹಬ್ಬಿದೆ. ಇದೀಗ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಗೂ ಕೋವಿಡ್ ಸೋಂಕು ದೃಢ ಪಟ್ಟಿದೆ,
ಶನಿವಾರ ತಲೆ ನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ಹಾಗಾಗಿ ಕೊವಿಡ್-19 ಟೆಸ್ಟ್ಗೆ ಒಳಗಾಗಿದ್ದೆ. ಇವತ್ತು ವರದಿ ಬಂದಿದ್ದು, ಕೊವಿಡ್-19 ಇರುವುದು ದೃಢಪಟ್ಟಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಷಯ ಹಂಚಿಕೊಂಡಿದ್ದಾರೆ.
ಕೊರೋನಾ ಪೀಡಿತ ಪ್ರದೇಶಗಳಿಗೂ ಭೇಟಿ ನೀಡಿದ್ದೆ. ಹಾಗಾಗಿ ಸೋಂಕು ತಗುಲಿದೆ. ನನ್ನಲ್ಲಿ ರೋಗನಿರೋಧಕ ಶಕ್ತಿ ಪ್ರಬಲವಾಗಿದೆ. ನಿಮ್ಮೆಲ್ಲರ ಆಶೀರ್ವಾದದಿಂದ ಖಂಡಿತ ಬೇಗ ಗುಣವಾಗುತ್ತೇನೆ. ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದು, ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.
ನಾನು ಭೇಟಿ ಕೊಟ್ಟಿರುವ ಸ್ಥಳ, ವ್ಯಕ್ತಿಗಳ ವಿವರವನ್ನು ಸರ್ಕಾರಿ ಅಧಿಕಾರಿಗಳಿಗೆ ನೀಡಿದ್ದೇನೆ. ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕರೊನಾ ಲಕ್ಷಣಗಳು ಕಂಡುಬಂದಿದ್ದರೆ ಕೂಡಲೇ ಪರೀಕ್ಷೆ ಮಾಡಿಸಿ ಎಂದು ಮನವಿ ಮಾಡಿದ್ದಾರೆ. . ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ. ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೋವಿಡ್ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ. ನಿಮ್ಮ ಹಾರೈಕೆ ಇರಲಿ ಎಂದು ತಿಳಿಸಿದ್ದಾರೆ.
Share your comments