1. ಸುದ್ದಿಗಳು

ಮಾಜಿ ಸಿಎಂ ಸಿದ್ದರಾಮಯ್ಯರವರಿಗೆ ಕೊರೋನಾ ಸೋಂಕು ದೃಢ

ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನ ಹಿರಿಯ ನಾಯಕ ಸಿದ್ದರಾಮಯ್ಯರವರಿಗೆ ಕೊರೋನಾ (Corona) ಸೋಂಕಿರುವುದು ದೃಢಪಟ್ಟಿದೆ. ಅನಾರೋಗ್ಯದ ಹಿನ್ನೆಲೆ ಅವರನ್ನು ಸೋಮವಾರ ರಾತ್ರಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಪುತ್ರ ಡಾ.ಯತೀಂದ್ರ ಸಲಹೆ ಮೇರೆಗೆ ಅವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಗೆ ದಾಖಲಾದ ಕೂಡಲೇ ಅವರು ಕೊರೋನಾ ಟೆಸ್ಟ್​ (Corona test)ಗೆ ಒಳಗಾಗಿದ್ದರು. ಮಂಗಳವಾರ ಬೆಳಗ್ಗೆ ಕೊರೋನಾ ಸೋಂಕಿರುವುದು ದೃಢಪಟ್ಟಿದೆ. ಇತ್ತೀಚೆಗೆ ಅವರ ಸಂಪರ್ಕಕ್ಕೆ ಬಂದವರು quarantine ಆಗಬೇಕೆಂದು ಕೇಳಿಕೊಂಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರೂ ಟ್ವೀಟ್ ಮಾಡಿದ್ದು, ನನ್ನ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

Published On: 04 August 2020, 03:13 PM English Summary: Coronavirus positive for senior congress leade -siddaramaiah

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.