ಕೇರಳ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರಿಂದ ದಕ್ಷಿಣ ಕನ್ನಡ-ಕೇರಳ ಗಡಿಯಲ್ಲಿ ಅಗತ್ಯ ಎಚ್ಚರಿಕೆಯನ್ನು ಕೈಗೊಳ್ಳಲಾಗಿದೆ. ಕೇರಳದಿಂದ ಬರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿ ತರುವಂತೆ ಸೂಚನೆ ನೀಡಲಾಗಿದೆ.
ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರು ಪ್ರಯಾಣಕ್ಕೂ ಮೊದಲಿನ 72 ಗಂಟೆಗಳ ಅವಧಿ ಯಲ್ಲಿ ನಡೆಸಲಾದ ಕೋವಿಡ್ ಆರ್ಟಿ– ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಯನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಅರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.
ಒಂದು ವಾರದಿಂದ ಪ್ರತಿನಿತ್ಯ ಮಹಾರಾಷ್ಟ್ರದಲ್ಲಿಸರಾಸರಿ 645 ಮಂದಿ ಕೋವಿಡ್ ಪೀಡಿತರಾಗುತ್ತಿದ್ದಾರೆ. ಅಮರಾವತಿ, ನಾಗಪುರ, ಪುಣೆ, ಮುಂಬೈ ಸೇರಿ ದಂತೆ ವಿವಿಧ ನಗರದಲ್ಲಿ ಗಮನಾರ್ಹವಾಗಿ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿವೆ. ಅಲ್ಲಿ ಕೋವಿಡ್ ಎರಡಲೇ ಅಲೆ ಪ್ರಾರಂಭವಾಗಿದೆ ಎನ್ನುವ ಸೂಚನೆಗಳು ದೊರೆತಿವೆ. ಹಾಗಾಗಿ, ಹೋಟೆಲ್, ರೆಸಾರ್ಟ್, ಹಾಸ್ಟೆಲ್, ಹೋಂ ಸ್ಟೇಗಳು ಮತ್ತಿತರ ಕಡೆಗಳಲ್ಲಿ ಮಹಾರಾಷ್ಟ್ರದಿಂದ ಹಿಂದಿರುಗಿರುವವರಿಗೆ ಪ್ರವೇಶ ನೀಡುವ ಮುನ್ನ ‘ಕೋವಿಡ್ ನೆಗೆಟಿವ್’ ವರದಿಯನ್ನು ಖಾತರಿಪಡಿಸಿಕೊಳ್ಳುವುದು ಕಡ್ಡಾಯ ಎಂದು ಇಲಾಖೆ ತಿಳಿಸಿದೆ.
ಕೇರಳದಿಂದ ಬರುವ ಸಿಬ್ಬಂದಿಗಳಿಗೆ 15 ದಿನಗಳಿಗೊಮ್ಮೆ ಕೋವಿಡ್ ನಕಾರಾತ್ಮಕ ವರದಿಗಳನ್ನು ಪಡೆದು ಉದ್ಯೋಗ ಸಂಸ್ಥೆಗಳು ಖಚಿತಪಡಿಸಿಕೊಳ್ಳಬೇಕು. ಅಲ್ಲದೆ, ಕೇರಳದಿಂದ ಆಗಮಿಸುವ ರೋಗಿಗಳ ಪರಿಚಾರಕರನ್ನು ಕೋವಿಡ್ ಪರೀಕ್ಷೆಗಳಿಗೆ ಒಳಪಡಿಸುವಂತೆ ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದಾರೆ.
ಐವರು ಸೋಂಕಿತರಿದ್ದರೆ ನಿರ್ಬಂಧಿತ ವಲಯಯಾವುದೇ ಪ್ರದೇಶದಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆಯಾದರೆ ಆ ಸ್ಥಳವನ್ನು ನಿರ್ಬಂಧಿತ ವಲಯ (ಕಂಟೇನ್ಮೆಂಟ್ ಝೋನ್) ಎಂದು ಘೋಷಿಸಬೇಕು. ಅಂತಹ ಸ್ಥಳದ ಮೇಲೆ ಸ್ಥಳೀಯ ಆಡಳಿತದಿಂದ ವಿಶೇಷ ನಿಗಾ ಇರಿಸಬೇಕು. ಏಳು ದಿನಗಳ ಬಳಿಕ ಮತ್ತೊಮ್ಮೆ ಕೋವಿಡ್ ಪರೀಕ್ಷೆ ನಡೆಸಬೇಕು ಎಂದು ಸುತ್ತೋಲೆಯಲ್ಲಿ ನಿರ್ದೇಶನ ನೀಡಲಾಗಿದೆ.
ರೂಪಾಂತರ ವೈರಾಣು ಕಾಣಿಸಿಕೊಂಡ ಕಾರಣ ಬ್ರಿಟನ್, ಯುರೋಪ್ ಮತ್ತು ಮಧ್ಯಪ್ರಾಚ್ಯದ ದೇಶಗಳಿಂದ ಬರುವ ವಿಮಾನಗಳಲ್ಲಿ ಇಲ್ಲಿಗೆ ಬರುವವರು ಪ್ರಯಾಣಕ್ಕೂ ಮೊದಲಿನ 72 ಗಂಟೆಗಳ ಅವಧಿಯಲ್ಲಿ ನಡೆಸಲಾದ ಕೋವಿಡ್ ಆರ್ಟಿ–ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ತರಬೇಕು. ಅವರಿಗೆ ಇಲ್ಲಿನ ವಿಮಾನ ನಿಲ್ದಾಣಗಳಲ್ಲಿ ಕೂಡ ಆರ್ಟಿ–ಪಿಸಿಆರ್ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಪರೀಕ್ಷೆಯ ವರದಿ ಬಂದ ಬಳಿಕವೇ ವಿಮಾನ ನಿಲ್ದಾಣದಿಂದ ಕಳುಹಿಸಲಾಗುತ್ತದೆ ಎಂದು ಆರೋಗ್ಯ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ.
Share your comments