News

ರಾಜ್ಯದಲ್ಲಿ ನಿಗದಿಯಾದಂತೆ 30, 31ರಂದು ಸಿಇಟಿ ಪರೀಕ್ಷೆ (CET Exam)

22 July, 2020 9:06 AM IST By:

ಕೊರೋನಾ ಆತಂಕದ ನಡುವೆಯೂ ದ್ವಿತೀಯ ಪಿಯು ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದ್ದ ರಾಜ್ಯ ಸರ್ಕಾರ ಇದೀಗ ಜು.30 ಮತ್ತು 31ರಂದು ರಾಜ್ಯಾದ್ಯಂತ ಸಿಇಟಿ ನಡೆಸಲು ತೀರ್ವನಿಸಿದೆ.

ರಾಜ್ಯದಲ್ಲಿ ಇದೇ 30 ಮತ್ತು 31ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) (CET Exam) ನಡೆಯಲಿದ್ದು, ಒಟ್ಟು 1,94,356 ವಿದ್ಯಾರ್ಥಿಗಳು 120 ಸ್ಥಳಗಳ 497 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ ಎಂದು ಉಪ ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ (DCM Ashwath Narayan ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ 83 ಕೇಂದ್ರ: ಬೆಂಗಳೂರು ಮಹಾನಗರದಲ್ಲಿ 83 ಕೇಂದ್ರಗಳ ವ್ಯವಸ್ಥೆ ಮಾಡಲಾಗಿದ್ದು, 40,200 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಒಟ್ಟು ವಿದ್ಯಾರ್ಥಿಗಳಲ್ಲಿ 30 ಮಂದಿ ವಿದೇಶಿಯರೂ ಇದ್ದಾರೆ. ಪರೀಕ್ಷೆಯ ಸಮಯ ಬೆಳಗ್ಗೆ 10.30ರಿಂದ 11.50 ಹಾಗೂ ಮಧ್ಯಾಹ್ನ 2.30 ರಿಂದ 3.30 ಎಂದು ಮಾಹಿತಿ ನೀಡಿದರು.

ಗಡಿನಾಡಿನ 188 ವಿದ್ಯಾರ್ಥಿಗಳಿಗೆ ಬಳ್ಳಾರಿ, ಬೆಳಗಾವಿ, ಬೆಂಗಳೂರು, ಮಂಗಳೂರು, ಬೀದರ್‌ಗಳಲ್ಲಿನ ಕೇಂದ್ರಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. ಈ ವಿದ್ಯಾರ್ಥಿಗಳಿಗೆ ಆಗಸ್ಟ್ 1ರಂದು ಕನ್ನಡ ಪರೀಕ್ಷೆ ನಡೆಯಲಿದೆ ಎಂದರು.

ಪಾಸಿಟಿವ್ ವಿದ್ಯಾರ್ಥಿಗಳಿಗೂ ಅವಕಾಶ (Covid positive candidates will be allow): ಕೊರೊನಾ ಪಾಸಿಟಿವ್ ಬಂದಿರುವ ವಿದ್ಯಾರ್ಥಿಗಳಿಗೂ ಸಿಇಟಿ ಬರೆಯಲು ಅವಕಾಶ ನೀಡಲಾಗಿದೆ. ಅವರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗುತ್ತದೆ. ಕರೊನಾ ಲಕ್ಷಣಗಳಲ್ಲದೆ ನೆಗಡಿ, ಕೆಮ್ಮು, ಶೀತ ಇರುವ ವಿದ್ಯಾರ್ಥಿಗಳನ್ನೂ ಪ್ರತ್ಯೇಕ ಕೊಠಡಿಗಳಲ್ಲಿ ಕೂರಿಸಲಾಗುವುದು ಎಂದು ತಿಳಿಸಿದರು.

ಕ್ವಾರಂಟೈನ್ ವಿನಾಯಿತಿ (No quarantine students parent): ಸಿಇಟಿ ಎದುರಿಸುತ್ತಿರುವ ವಿದೇಶಿ ಅಥವಾ ಹೊರಗಿನ ವಿದ್ಯಾರ್ಥಿಗಳಿಗೆ ಹಾಗೂ ಅವರ ಜತೆ ಬಂದಿರುವ ಪಾಲಕರಿಗೆ 4 ದಿನ ಕ್ವಾರಂಟೈನ್​ನಿಂದ ವಿನಾಯಿತಿ ನೀಡಲಾಗಿದೆ. ಅವರೂ ಎಲ್ಲ ರೀತಿಯಲ್ಲೂ ಪರೀಕ್ಷೆಗೆ ಒಳಗಾಗಿದ್ದಾರೆ. ಹೀಗಾಗಿ ಆತಂಕಪಡುವ ಅಗತ್ಯವಿಲ್ಲ. . ಸಿಇಟಿ ಕೌನ್ಸೆಲಿಂಗ್, ದಾಖಲೆಗಳ ಪರಿಶೀಲನೆ ಸೇರಿದಂತೆ ಎಲ್ಲ ಪ್ರಕ್ರಿಯೆ ಆನ್‌ಲೈನ್‌ನಲ್ಲಿ ನಡೆಯಲಿದೆ. ಎಲ್ಲವನ್ನೂ ಮನೆಯಿಂದಲೇ ಮುಗಿಸಿ, ಅಂತಿಮವಾಗಿ ಆಯ್ಕೆ ಮಾಡಿಕೊಳ್ಳುವ ಕಾಲೇಜಿಗೆ ತೆರಳಿ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದು ಎಂದರು.