1. ಸುದ್ದಿಗಳು

ಮೇ 10 ರಿಂದ 18-44 ವರ್ಷ ವಯೋಮಾನದವರಿಗೆ ಕೋವಿಡ್ ಲಸಿಕೆ- ಸಚಿವ ಸುಧಾಕರ್

Health Minister Sudhakar

ಮೇ 10 ರಿಂದಲೇ ರಾಜ್ಯದಲ್ಲಿ  18-44 ವರ್ಷ ವಯೋಮಾನದವರಿಗೆ ಕೋವಿಡ್ ಲಸಿಕೆ ಸಿಕ್ಕಲಿದೆ. ಆದರೆ ಯುವಕರು  ತಮ್ಮ ಸರದಿಗಾಗಿ ತಾಳ್ಮೆಯಿಂದ ಕಾಯಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮನವಿ ಮಾಡಿದ್ದಾರೆ.

ಕೊನೆಗೂ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡುವ ಕಾಲ ಕೂಡಿ ಬಂದಿದೆ. ಮೇ 10 ಯಿಂದ 18 ರಿಂದ 45 ವರ್ಷ ವಯೋಮಾನದವರಿಗೆ ಕೋವಿಡ್ ಲಸಿಕೆ ನೀಡಲಾಗುವುದು. ಬೆಂಗಳೂರಿನ ಕೆಸಿ ಜನರಲ್, ಜಯನಗರ ಸರ್ಕಾರಿ ಆಸ್ಪತ್ರೆ, ಸರ್ ಸಿವಿ ರಾಮನ್ ಆಸ್ಪತ್ರೆ, ಇಎಸ್‌ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಈ ಕೋವಿಡ್ ಲಸಿಕೆ ನೀಡಲಾಗುವುದು ಎಂದಿದ್ದಾರೆ.
ಈಗಾಗಲೇ ಲಸಿಕೆಗಾಗಿ ನೋಂದಣಿ ಮಾಡಿಸಿಕೊಂಡವರಿಗೆ ಲಸಿಕೆ ನೀಡಲಾಗುತ್ತದೆ. ಯುವ ಮಿತ್ರರು ತಾಳ್ಮೆಯಿಂದ ಕಾಯಬೇಕು. ಎಲ್ಲರಿಗೂ ಲಸಿಕೆ ಸಿಗಲಿದೆ ಎಂದು ಹೇಳಿದ್ದಾರೆ.
ಬೆಂಗಳೂರು ಹೊರತುಪಡಿಸಿ ಇತರ ಜಿಲ್ಲೆಗಳಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಅರಂಭಿಕವಾಗಿ ಜಿಲ್ಲಾಸ್ಪತ್ರೆ, ತಾಲ್ಲೂಕು ಸರ್ಕಾರಿ ಆಸ್ಪತ್ರೆ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಲಸಿಕೆ ನೀಡಲಾಗುವುದು, ಲಸಿಕೆ ಪೂರೈಕೆ ಹೆಚ್ಚಾಗುತ್ತಿದ್ದಂತೆ ಮುಂದಿನ ದಿನಗಳಲ್ಲಿ ಇನ್ನಷ್ಟು ಲಸಿಕೆ ಕೇಂದ್ರಗಳಲ್ಲಿ ವಿತರಣೆ ಆರಂಭಿಸಲಾಗುವುದು ಎಂದರು.

18-44 ವರ್ಷ ವಯೋಮಾನದವರಿಗೆ ಲಸಿಕೆ ವಿತರಿಸುವ ಎಲ್ಲ ಕೇಂದ್ರಗಳಲ್ಲಿ ಈ ಗುಂಪಿನವರಿಗೆ ಪ್ರತ್ಯೇಕ ಸ್ಥಳ ಗುರುತಿಸಲಾಗಿವುದು. ಕೋವಿನ್ ಅಥವಾ ಆರೋಗ್ಯ ಸೇತು ಆಪ್ ಮೂಲಕ ನೋಂದಣಿ ಮಾಡಿಸಿ, ಸಮಯ ನಿಗದಿ ಮಾಡಿಕೊಂಡಿರುವವರಿಗೆ ಮಾತ್ರ ಲಸಿಕೆ ನೀಡಲಾಗುವುದು. ನೋಂದಣಿ ಇಲ್ಲದೆ ನೇರವಾಗಿ ಲಸಿಕಾ ಕೇಂದ್ರಕ್ಕೆ ಬರುವವರಿಗೆ ಅವಕಾಶವಿರುವುದಿಲ್ಲ.18 ರಿಂದ 44 ವಯೋಮಾನದವರಿಗೆ ಲಸಿಕೆ ವಿತರಿಸುವ ಎಲ್ಲ ಕೇಂದ್ರಗಳಲ್ಲಿ ಪ್ರತ್ಯೇಕ ಸ್ಥಳ ಗುರುತಿಸಲಾಗುವುದು, ನೋಂದಣಿ ಇಲ್ಲದೆ ನೇರವಾಗಿ ಲಸಿಕಾ ಕೇಂದ್ರಕ್ಕೆ ಬರುವವರಿಗೆ ಅವಕಾಶವಿಲ್ಲ. ಆರೋಗ್ಯ ಸೇತು ಆಪ್ ಮೂಲಕ ನೋಂದಣಿ ಕಡ್ಡಾಯ ಎಂದರು.
ಪ್ರತಿಯೊಬ್ಬರಿಗೂ ಆದಷ್ಟು ಶೀಘ್ರದಲ್ಲಿ ಲಸಿಕೆ ಒದಗಿಸಲು ಸರ್ಕಾರ ಬದ್ಧವಾಗಿದೆ. ಅಗತ್ಯ ಲಸಿಕೆ ಪೂರೈಕೆ ಮಾಡಿಕೊಳ್ಳಲು ನಿರಂತರ ಪ್ರಯತ್ನ ಸಾಗಿದೆ. ಖಂಡಿತವಾಗಿ ಎಲ್ಲರಿಗೂ ಲಸಿಕೆ ಸಿಗುತ್ತದೆ ಎಂದು ಅವರು ಹೇಳಿದ್ದಾರೆ.

18 ರಿಂದ 44 ವರ್ಷದವರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಮೇ 1 ರಂದೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಾಂಖೇತಿಕ ಚಾಲನೆ ನೀಡಿದ್ದರು. ರಾಜ್ಯದಲ್ಲಿ 3.26 ಕೋಟಿ ಈ ವಯೋಮಾನದವರಿದ್ದಾರೆ. ಎಲ್ಲರಿಗೂ 6.52 ಕೋಟಿ ಡೋಸ್ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಇದಕ್ಕಾಗಿ ಸರ್ಕಾರದಿಂದ 2 ಕೋಟಿ ಕೋವಿಶೀಲ್ಡ್, 1 ಕೋಟಿ ಕೊವಾಕ್ಸಿನ್ ಲಸಿಕೆ ಡೋಸ್‌ಗೆ ಬೇಡಿಕೆ ಇಟ್ಟಿದ್ದೇವೆ. ಸೀರಂ ಸಂಸ್ಥೆಯಿಂದ ಈವರೆಗೆ 6.5 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆಯಲಾಗಿದೆ. ಇನ್ನಷ್ಟು ಲಸಿಕೆ ಮೇ 2 ಅಥವಾ 3ನೇ ವಾರ ಲಭ್ಯವಾಗಲಿದೆ ಎಂದು ಅವರು ಹೇಳಿದರು

Published On: 09 May 2021, 07:53 PM English Summary: covid vaccine for 18 to 44 year olds from 10th may

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.