News

ಬೆಳೆ ಮಾಹಿತಿ ಅಪ್ಲೋಡ್ ಮಾಡಲು ಡಿ. 31 ಕೊನೆಯ ದಿನ

21 December, 2020 6:20 PM IST By:

2020-21ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಮಾಹಿತಿಯನ್ನು ಬೆಳೆ ಸಮೀಕ್ಷೆ ಆ್ಯಪ್ ಮೂಲಕ  ರೈತರು ಅಪ್‍ಲೋಡ್ ಮಾಡಲು ಡಿಸೆಂಬರ್ 31 ಕೊನೆಯ ದಿನವಾಗಿದೆ.

ಬೆಳೆವಿಮೆ, ಬೆಳೆ ನಷ್ಟ ಪರಿಹಾರ, ಬೆಂಬಲ ಬೆಲೆ ಮತ್ತು ಸರ್ಕಾರದ ವಿವಿಧ ಯೋಜನೆಯಡಿ ಸವಲತ್ತುಗಳನ್ನು ಒದಗಿಸಲು ಆರ್‌ಟಿಸಿಯಲ್ಲಿ ಅಳವಡಿಸಲು ಬಳಸಲಾಗುತ್ತದೆ. ರೈತರು ತಮ್ಮ ಜಮೀನುಗಳ ಸರ್ವೆ ನಂ/ ಹಿಸ್ಸಾವಾರು ತಾವು ಬೆಳೆದ ಕೃಷಿ ಬೆಳೆಗಳ ಹಾಗೂ ತಮ್ಮ ಜಮೀನಿನಲ್ಲಿರುವ ಬಹುವಾರ್ಷಿಕ ತೋಟಗಾರಿಕೆ, ಅರಣ್ಯ, ಇತರೆ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ರೈತರು ಗೂಗಲ್ ಪ್ಲೆಸ್ಟೋರ್‌ನಿಂದ ಹಿಂಗಾರು ರೈತರ ಬೆಳೆ ಸಮೀಕ್ಷೆ 2020-21’ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಬೇಕು.

ಬೆಳೆ ಸಮೀಕ್ಷೆ ಹಿಂಗಾರು ಹಂಗಾಮು ಲಿಂಕ್ ಬಳಸಿ ಆರ್ಥಿಕ ವರ್ಷ ಹಾಗೂ ಹಾಗೂ ಋತುವನ್ನು ದಾಖಲಿಸಿ ಆನಂತರ ಕ್ಯೂ ಆರ್ ಕೋಡ್‍ನ್ನು ಸ್ಕ್ಯಾನ್ ಮಾಡಿ ಮೊಬೈಲ್ ಸಂಖ್ಯೆ ನಮೂದಿಸಿ ಸಕ್ರಿಯಗೊಳಿಸಬೇಕು. ನಂತರದಲ್ಲಿ ಮೊಬೈಲ್‌ಗೆ ಬರುವ ಒಟಿಪಿಯನ್ನು ದಾಖಲಿಸಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕಚೇರಿ, ಕಂದಾಯ, ತೋಟಗಾರಿಕೆ, ರೇಷ್ಮೇ ಇಲಾಖೆಗಳ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರ ಗಳನ್ನು ಸಂಪರ್ಕಿಸಬಹುದು.

ಬೆಳೆ ವಿವರಗಳನ್ನು ಅಪ್‍ಲೋಡ್ ಮಾಡದಿದ್ದಲ್ಲಿ ಇಲಾಖೆಗಳಿಂದ ದೊರೆಯುವ ಸವಲತ್ತುಗಳಿಂದ ವಂಚಿತರಾಗುವ ಸಾಧ್ಯತೆಯಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಆಯಾ ಗ್ರಾಮಗಳಿಗೆ ನಿಯೋಜಿಸಿದ ಖಾಸಗಿ ನಿವಾಸಿಗಳ ಸಹಾಯದೊಂದಿಗೆ ಬೆಳೆ ಮಾಹಿತಿಯನ್ನು ದಾಖಲಿಸಲು ಕೋರಲಾಗಿದೆ.