1. ಸುದ್ದಿಗಳು

ಮೊಬೈಲ್ ಆ್ಯಪ್ ಬಳಸಿ ಹಿಂಗಾರು ಬೆಳೆ ಸಮೀಕ್ಷೆಯಲ್ಲಿ ಬೆಳೆಗಳ ಮಾಹಿತಿ ನೀಡಿ

Mobile crop survey app

ಪ್ರಸಕ್ತ 2020-21ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆಯು ಈಗಾಗಲೇ ಆರಂಭವಾಗಿದ್ದು, ಹಿಂಗಾರು ಹಂಗಾಮಿನಲ್ಲಿ ರೈತರು ತಮ್ಮ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರಸಹಿತ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಮೂಲಕ ದಾಖಲಿಸಬೇಕು.

ವಿಧಾನ ರೈತರು ಸ್ಮಾರ್ಟ್ ಮೊಬೈಲ್ ಫೋನ್ ಬಳಸಿ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಅನ್ನು ಗೂಗಲ್ ಪ್ಲೇ ಸ್ಟೋರಿನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು. ಅಥವಾರ ರೈತರ ಪರವಾಗಿ ಅವರ ಕುಟುಂಬದ ಸದಸ್ಯರು, ಸಂಬಂಧಿಕರ ಸಹಾಯ ಪಡೆಯಬಹುದು.

ಈ ಕಾರ್ಯಕ್ರಮದಡಿ ಗ್ರಾಮವಾರು ನೇಮಿಸಲಾಗಿರುವ ಖಾಸಗಿ ನಿವಾಸಿಗಳು ‘ರೈತರ ಬೆಳೆ ಸಮೀಕ್ಷೆ ಆ್ಯಪ್” ಮೂಲಕ ತಾವು ಬೆಳೆದಿರುವ ಬೆಳೆಗಳ ವಿವರಗಳನ್ನು ಛಾಯಾಚಿತ್ರ ಸಮೇತ ದಾಖಲಿಸಬಹುದು. ಆ್ಯಪ್ ಮೂಲಕ ದಾಖಲಾಗುವ ಮಾಹಿತಿಗಳನ್ನು ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ, ಬೆಂಬಲ ಬೆಲೆ ಮತ್ತು ಸರ್ಕಾರದ ವಿವಿಧ ಯೋಜನೆಗಳಡಿ ಸವಲತ್ತುಗಳನ್ನು ಒದಗಿಸಲು ಆರ್.ಟಿ.ಸಿ ಯಲ್ಲಿ ಅಳವಡಿಸಲು ಬಳಸಲಾಗುತ್ತದೆ.

ಈ ಬೆಳೆ ವಿವರಗಳನ್ನು ದಾಖಲಿಸುವುದರಿಂದ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆ, ಬೆಳೆ ವಿಮೆ ಯೋಜನೆ, ಬರಗಾಲ ಮತ್ತು ಪ್ರವಾಹ ಸಂದರ್ಭದಲ್ಲಿ ನಷ್ಟದ ಪರಿಹಾರ ಪಡೆಯಲು, ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಹಾಗೂ ಬೆಳೆ ಸಾಲ ಪಡೆಯಲು ಇದು ಅನುಕೂಲವಾಗಲಿದೆ. ರೈತರು ಬೆಳೆ ವಿವರಗಳನ್ನು ದಾಖಲಿಸದಿದ್ದರೆ, ಸರ್ಕಾರದ ಯೋಜನೆಗಳಿಂದ ವಂಚಿತರಾಗುವ ಸಾಧ್ಯತೆ ಇದೆ.

ಬೆಳೆ ವಿವರಗಳನ್ನು ಖಾಸಗಿ ನಿವಾಸಿಗಳು ಮೊಬೈಲ್ ಆ್ಯಪ್ ಮೂಲಕ ದಾಖಲಿಸುವಾಗ ಛಾಯಾಚಿತ್ರದಲ್ಲಿ ರೈತರು ಕಡ್ಡಾಯವಾಗಿ ಹಾಜರಿರಬೇಕು. ಆಧಾರ್ ಕಾರ್ಡ್ ಅಪ್ಲೋಡ್‌ ಮಾಡಬೇಕು. ಒಂದು ವೇಳೆ ರೈತರು ಹಾಜರಾಗಲು ಸಾಧ್ಯವಾಗದಿದ್ದ ಸಂದರ್ಭಗಳಲ್ಲಿ ಖಾಸಗಿ ನಿವಾಸಿಗಳು ಬೆಳೆ ವಿವರಗಳನ್ನು ದಾಖಲಿಸಲು ಒಪ್ಪಿಗೆ ಪತ್ರವನ್ನು ನೀಡಬೇಕು.

Published On: 08 January 2021, 10:24 PM English Summary: crop survey by mobile app

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.