News

ಜುಲೈ ತಿಂಗಳಲ್ಲಿ ಬಿತ್ತನೆ ಮಾಡಬೇಕಾದ ಬೆಳೆಗಳು!..ಇದೀಗ ರೈತರು ಗಳಿಸಲಿದ್ದಾರೆ ಬಂಪರ್‌ ಆದಾಯ

06 July, 2022 2:37 PM IST By: Maltesh
Crop to grow in the month of july

ನಾವೀಗ ಜುಲೈ ತಿಂಗಳ ಆರಂಭದಲ್ಲಿದ್ದೇವೆ.  ಸಾಮಾನ್ಯವಾಗಿ ಇದು ಉತ್ತಮ ಮಳೆ ಬೀಳುವ ಸಮಯ. ಜೂನ್ ಅಂತ್ಯ ಮತ್ತು ಜುಲೈ ಆರಂಭದ ಎರಡು ವಾರಗಳ ಕಾಲ ದೊಡ್ಡ ಮಳೆಗಳು ಬಿದ್ದು, ಕೃಷಿಗೆ ಅನುಕುಲಕರ ವಾತಾವರಣ ನಿರ್ಮಿಸಿಕೊಡುತ್ತವೆ.

ಹೀಗಾಗಿ ಈ ಅವಧಿಯಲ್ಲಿ ಮಳೆಗೆ ಹೊಂದಿಕೊಂಡು, ಹೆಚ್ಚು ನೀರುಂಡರೂ ಸಹಿಸಿಕೊಂಡು ಬೆಳೆಯುವ ಸಾಮರ್ಥ್ಯವಿರುವ ತರಕಾರಿ ಬೆಳೆಗಳನ್ನು ಬೆಳೆಯಬೇಕು.

ಕರ್ನಾಟಕದಲ್ಲಿ ಜೂನ್ ಮತ್ತು ಜುಲೈ ಮಾಸಗಳಲ್ಲಿ ಸಾಮಾನ್ಯವಾಗಿ ಟೊಮೇಟೊ, ಬದನೆ, ಬೆಂಡೆಕಾಯಿ, ಹಸಿ ಮೆಣಸಿನಕಾಯಿ, ಕುಂಬಳಕಾಯಿ, ಸೋರೆಕಾಯಿ, ಸೌತೆಕಾಯಿ, ಈರುಳ್ಳಿ, ವಿವಿಧ ಸೊಪ್ಪು ಹಾಗೂ ಆಹಾರ ಧಾನ್ಯಗಳ ಪೈಕಿ ನವಣೆ ಮತ್ತು ಹಲಸಂದಿ ಬೆಳೆ ಬಿತ್ತನೆ ಮಾಡಲು ಸೂಕ್ತ ಸಮಯವಾಗಿದೆ.

ಜುಲೈ 14-15 ರಂದು ಕರ್ನಾಟಕದಲ್ಲಿ ನಡೆಯಲಿದೆ ಎಲ್ಲ ರಾಜ್ಯಗಳ ಕೃಷಿ ಸಚಿವರ ಸಭೆ!

ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ದೇಶದ ಎಲ್ಲ ರಾಜ್ಯಗಳ ಕೃಷಿ ಸಚಿವರ ಸಭೆಯನ್ನು ಆಯೋಜಿಸಿದೆ.ಬರೋಬ್ಬರಿ 23 ಅಡಿ ಉದ್ದದ ಕಬ್ಬು ಬೆಳೆದ ರೈತ! ಅಚ್ಚರಿಯಾದರೂ ಇದು ಸತ್ಯ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ವತಿಯಿಂದ ಜುಲೈ 14 ಮತ್ತು 15ರಂದು ಬೆಂಗಳೂರಿನಲ್ಲಿ ದೇಶದ ಎಲ್ಲಾ ರಾಜ್ಯಗಳ ಕೃಷಿ ಸಚಿವರ ಸಭೆ ನಡೆಯಲಿದೆ.

ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಮತ್ತು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸಭೆಯ ನೇತೃತ್ವ ವಹಿಸಲಿದ್ದಾರೆ. ಈ ಕುರಿತು ಕೇಂದ್ರದಿಂದ ಈಗಾಗಲೇ ರಾಜ್ಯಕ್ಕೆ ಮಾಹಿತಿ ನೀಡಲಾಗಿದೆ.

ಈ ಸಭೆಯಲ್ಲಿ ಕೃಷಿ ಸಚಿವರು ದೇಶದ ಕೃಷಿ ಕುರಿತು ಎರಡು ದಿನ ಸರಣಿ ಸಭೆಗಳನ್ನು ನಡೆಸಲಿದ್ದಾರೆ. ದೇಶದ ರೈತರ ಆದಾಯ ಹೆಚ್ಚಳ, ಕೃಷಿ ಉತ್ಪಾದನೆ ವೆಚ್ಚ ತಗ್ಗಿಸುವುದು, ಕೃಷಿ ಸಂಬಂಧಿ ಉಪಕ್ರಮಗಳ ವಿನಿಮಯ ವಿಷಯವಾಗಿ ಈ ಸಭೆ ಹೆಚ್ಚು ಮಹತ್ವ ಪಡೆದುಕೊಂಡಿದೆ.ಹಸುವಿನ ಸಗಣಿಯಿಂದ ಆಭರಣ ತಯಾರಿಸಿ ಆದಾಯ ಗಳಿಸುತ್ತಿರುವ ಸ್ವಾವಲಂಬಿ ಮಹಿಳೆಯರು! ಹೇಗೆ ಗೊತ್ತೆ?

ಮೊದಲ ಬಾರಿಗೆ ಕರ್ನಾಟಕದಲ್ಲಿ ಸಭೆ ಈ ಸಭೆ ಆಯೋಜನೆ ಕುರಿತು ರಾಜ್ಯದ ಕೃಷಿ ಸಚಿವ ಬಿ. ಸಿ. ಪಾಟೀಲ್ ಪ್ರತಿಕ್ರಿಯಿಸಿದ್ದು, "ಸಭೆಯನ್ನು ಮೊದಲು ಕರ್ನಾಟಕ ಇಲ್ಲವೇ ರಾಜಸ್ಥಾನ ರಾಜ್ಯದಲ್ಲಿ ನಡೆಸುವ ಕುರಿತು ಚರ್ಚೆಗಳಾಗಿದ್ದವು.

ಕೊನೆಗೆ ಕೇಂದ್ರ ಕೃಷಿ ಸಚಿವಾಲಯ ಕರ್ನಾಟಕವನ್ನು ಆಯ್ಕೆ ಮಾಡಿಕೊಂಡಿತು. ಈ ಮೂಲಕ ಕೃಷಿ ಕ್ಷೇತ್ರದ ಅಭಿವೃದ್ಧಿ ಬಗೆಗಿನ ಬೃಹತ್ ಸಭೆಗೆ ರಾಜಧಾನಿ ಸಾಕ್ಷಿಯಾಗಲಿದೆ" ಎಂದರು.

ರಾಜ್ಯ ಸರ್ಕಾರದಿಂದ ಕೃಷಿ,ಕೃಷಿಕರಿಗೆ ಆದ್ಯತೆ "ರಾಜ್ಯ ಸರ್ಕಾರ ಈಗಾಗಲೇ ರೈತರ ಮಕ್ಕಳ ಶಿಕ್ಷಣ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿದ್ಯಾನಿಧಿ ಯೋಜನೆ ಸೇರಿದಂತೆ ಹಲವು ವಿನೂತನ ಕಾರ್ಯಕ್ರಮಗಳು ಜಾರಿಗೊಳಿಸುವ ಮೂಲಕ ಕೃಷಿಕರಿಗೂ ಆದ್ಯತೆ ನೀಡಿದೆ.ಇದನ್ನೂ ಓದಿರಿ: 187.89 ಲಕ್ಷ ಮೆಟ್ರಿಕ್ ಟನ್ ಗೋಧಿ ಸಂಗ್ರಹ; ₹37,859.34 ಲಕ್ಷ ಕೋಟಿ ಲಾಭ!