News

ಯಾಸ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಮೇ 26ರವರೆಗೆ ಭಾರಿ ಮಳೆ ಸಾಧ್ಯತೆ

23 May, 2021 9:15 PM IST By:
cyclone

ಕರ್ನಾಟಕ ಸೇರಿದಂತೆ ದಕ್ಷಿಣದ ಆರು ಜಿಲ್ಲೆಗಳಲ್ಲಿ ತೌಕ್ತೆ ಚಂಡಮಾರುತದ ಆವಾಂತರ ಬೆನ್ನಲ್ಲೆ ಈಗ ಯಾಸ್ ಚಂಡಮಾರುತದ ಅಬ್ಬರ ಶುರುವಾಗಿದ್ದು, ರಾಜ್ಯದಲ್ಲಿ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಸೃಷ್ಟಿಯಾದ ಚಂಡಮಾರುತ ಮೇ 26 ರಂದು ಓಡಿಸ್ಸಾ ಮತ್ತು ಪಶ್ಚಿಮ ಬಂಗಾಳ ಕರಾವಳಿಗೆ ಅಪ್ಪಳಿಸಲಿದೆ ಎಂದು ಬಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಚಂಡಮಾರುತದ ಪ್ರಭಾವದಿಂದಾಗಿ ಪೂರ್ವ ಕರಾವಳಿಯಲ್ಲಿ ಭಾರಿ ಮಲೆಯಾಗಲಿದ್ದು, ಪಶ್ಚಿಮ ಕಡಲ ತೀರದ ಪ್ರದೇಶಗಲ್ಲಿಯೂ ಇದರ ಪ್ರಭಾವ ಬೀರಲಿದೆ. ಆದರೂ ಅರಬ್ಬಿ ಸಮುದ್ರದಲ್ಲಿ ಎದ್ದಿರುವ ಸುಳಿಗಾಳಿಯ ಪ್ರಧಾವಂದಿಂದ ಮೇ 26ರವರೆಗೆ ಕರಾಳವಿ ಸೇರಿದಂತೆ ಹಲು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

ಕಳೆದ ವಾರ ಎದ್ದ ತೌಕ್ತೆ ಚಂಡಮಾರತದ ಪರಿಣಾಮವಾಗಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿತ್ತು. ಗಾಳಿಯೊಂದಿಗೆ ಸುರಿದ ಮಳೆಗೆ ನಷ್ಟವೂ ಉಂಟಾಗಿತ್ತು.

ಮೇ 25ರವರೆಗೆ ಮೈಸೂರು, ಬೆಂಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಅದೇ ರೀತಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಭಾಗದಲ್ಲಿಯೂ ಮೂರ್ನಾಲ್ಕು ದನ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಚಂಡಮಾರುತದ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಒಡಿಸ್ಸಾ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪ, ಪಶ್ಚಿಮಬಂಗಾಳ, ಅರುಣಾಚಲಪ್ರದೇಶ, ಅಸ್ಸಾಂ, ಮೇಘಾಲಯ, ನಾಗಲ್ಯಾಂಡ್,  ಮಣಿಪುರ,  ಮಿಜೋರೋಂ, ಆಂಧ್ರಪ್ರದೇಶ, ತಮಿಳುನಾಡು ಪ್ರದೇಶಗಳಲ್ಲಿ ಸೈಕ್ಲೋನ್ ಪ್ರಭಾವ ಕಂಡುಬರಲಿದೆ.

ಪಶ್ಚಿಮ ಬಂಗಾಳ, ಒಡಿಸ್ಸಾ ಹೈ ಅಲರ್ಟ್

ತೌಕ್ತ ಚಂಡಮಾರುತದ ಪ್ರಭಾವ ಕಡಿಮೆಯಾದ ಬೆನ್ನಿಗೆ ಪೂರ್ವ ಕರಾವಳಿ ಭಾಗಕ್ಕೆ ಯಾಸ್ ಸೈಕ್ಲೋನ್  ಅಪ್ಪಳಿಸಲಿದ್ದು, ಪಶ್ಚಿಮ ಬಂಗಾಳ ಮತ್ತು ಒಡಿಸ್ಸಾ, ಬಾಂಗ್ಲಾದೇಶದ ಕರಾವಳಿಯಲ್ಲಿ ಹೈ ಅಲರ್ಟ್ ಘೋ,ಣ ಮಾಡಲಾಗಿದೆ. ಗರಿಷ್ಟ 110 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಸಂಜೆ ವೇಳೆಗೆ ಶೀತ ಹೆಚ್ಚಾಗಲಿದೆ.