1. ಸುದ್ದಿಗಳು

ಸೈಕ್ಲೋನ್‌ ಎಫೆಕ್ಟ್‌: ರಾಜ್ಯಾದ್ಯಂತ ಅಬ್ಬರದ ಮಳೆ ಸಾಧ್ಯತೆ..15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

Maltesh
Maltesh
Cyclone Effect.. Heavy Rain..Yellow Alert For Districts

ದೇಶಾದ್ಯಂತ ಎರಡು ಹಂತಗಳಲ್ಲಿ 22 ಕೋಟಿಗೂ ಹೆಚ್ಚು ಮಣ್ಣು ಆರೋಗ್ಯ ಕಾರ್ಡ್‌ಗಳನ್ನು ರೈತರಿಗೆ ವಿತರಿಸಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಸೋಮವಾರ ಹೇಳಿದ್ದಾರೆ.

ಸುಸ್ಥಿರ ಕೃಷಿಗಾಗಿ ಮಣ್ಣಿನ ಆರೋಗ್ಯ ನಿರ್ವಹಣೆಯ ರಾಷ್ಟ್ರೀಯ ಸಮ್ಮೇಳನದ ಉದ್ಘಾಟನಾ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಸರ್ಕಾರವು ಮಣ್ಣಿನ ಆರೋಗ್ಯ ನಿರ್ವಹಣೆ ಯೋಜನೆಯಡಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುತ್ತಿದೆ.

ಈ ಯೋಜನೆಯು ವಿವಿಧ ರೀತಿಯ ಮಣ್ಣು ಪರೀಕ್ಷಾ ಪ್ರಯೋಗಾಲಯಗಳನ್ನು ಸ್ಥಾಪಿಸಲು ಅವಕಾಶವನ್ನು ಹೊಂದಿದೆ. ಇಲ್ಲಿಯವರೆಗೆ, 499 ಶಾಶ್ವತ, 113 ಮೊಬೈಲ್, 8,811 ಮಿನಿ ಮತ್ತು 2,395 ಗ್ರಾಮ ಮಟ್ಟದ ಮಣ್ಣು ಪರೀಕ್ಷಾ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗಿದ್ದು, ಬರೋಬ್ಬರಿ ರೈತರಿಗೆ 22 ಕೋಟಿಗೂ ಹೆಚ್ಚು ಮಣ್ಣು ಆರೋಗ್ಯ ಕಾರ್ಡ್ ವಿತರಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಮುಂದುವರೆದ ಕಬ್ಬು ಬೆಳೆಗಾರರ ಪ್ರತಿಭಟನೆ

ಕಬ್ಬು ಬೆಳೆಗಾರರ 18ನೇ ದಿನದ ಆಹೋ ರಾತ್ರಿ ಧರಣಿ ಮುಂದುವರೆದಿದ್ದು, ಧರಣಿ ನಿರತ ರೈತರು ಭತ್ತ ಖರೀದಿ ಕನಿಷ್ಠ ಬೆಂಬಲ ಬೆಲೆಗ ಪ್ರೋತ್ಸಾಹ ಧನ ರೂ -500 /- ಹಾಗೂ ಕಬ್ಬಿಗೆ  ಬೆಳೆ ವಿಮೆ ಜಾರಿಗೆ ತರಲು ಕೃಷಿ ಆಯುಕ್ತರ ಕಚೇರಿ ಎದುರು ಭತ್ತ ಸುರಿದು  ಪ್ರತಿಭಟನೆ   ನಡೆಸಿದರು.

ಕೇಂದ್ರ ಸರ್ಕಾರ ನಿಗದಿ ಮಾಡಿದ ಕನಿಷ್ಠ ಬೆಂಬಲ ಬೆಲೆಗೆ ಭತ್ತ ಖರೀದಿ ಮಾಡಿದರೆ ರೈತನಿಗೆ ಯಾವುದೇ ಲಾಭ ಸಿಗುವುದಿಲ್ಲ ಆದಕಾರಣ ಪ್ರತಿ ಕಿಂಟಾಲ್ ಭತ್ತಕ್ಕೆ ಎಂ ಎಸ್‌ ಪಿ ಗೆ ಹೆಚ್ಚುವರಿ ಪ್ರೋತ್ಸಾಹ ಧನವಾಗಿ-500/- ರೂ ಗಳನ್ನು ನೀಡುವ ಮೂಲಕ ರೈತರನ್ನು ರಕ್ಷಣೆ ಮಾಡಬೇಕು.

ರಾಜ್ಯ ಸರ್ಕಾರ ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಹಾಕಬಾರದು, ಇದು ರೈತರನ್ನು ಹೊಡೆದಾಳುವ ನೀತಿಯಾಗುತ್ತದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಮಳೆ ಹಾನಿಯಿಂದ ಬೆಳೆ, ಬೆಂಕಿ ಆಕಸ್ಮಿಕದಿಂದ ಕಬ್ಬು ನಾಶವಾದರೆ ಪರಿಹಾರ ಸಿಗುವುದಿಲ್ಲ, ಅಂತಹ ಸಂದರ್ಭದಲ್ಲಿ ರೈತ ಸಾಲ ತೀರಿಸಲು ಕಷ್ಟವಾಗುತ್ತಿದೆ ಆದಕಾರಣ ಕಬ್ಬು ಬೆಳೆ ವಿಮೆ ಜಾರಿಗೆ ತಂದು ನಷ್ಟ ತುಂಬಿ ಕೊಡುವಂತಹ  ಯೋಜನೆ ಜಾರಿಗೆ ತರಬೇಕು ಎಂದು ರೈತರು ಮನವಿ ಮಾಡಿದ್ದಾರೆ.

ಸೈಕ್ಲೋನ್‌ ಎಫೆಕ್ಟ್‌: ಅಬ್ಬರದ ಮಳೆ ಸಾಧ್ಯತೆ..15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯದ ಮೇಲೆ ಕೂಡ ಇದು ಪರಿಣಾಮ ಬೀರಿದೆ. ಹೌದು ಸೈಕ್ಲೋನ್‌ನಿಂದಾಗಿ ಎರಡು ದಿನ ರಾಜ್ಯದಲ್ಲಿ ಮಳೆ ಆರ್ಭಟಿಸಲಿದ್ದು, ಒಟ್ಟು 15ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೊಷಿಸಲಾಗಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೇಲೆ 'ಮಾಂಡೌಸ್' ಪರಿಣಾಮ ಅಧಿಕವಾಗಿರಲಿದೆ. ಡಿಸೆಂಬರ್ 11 ಮತ್ತು 12ರಂದು ಗುಡುಗು ಸಹಿತ ಧಾರಾಕಾರವಾಗಿ ಮಳೆ ಆಗಲಿದೆ. ಹೀಗಾಗಿ ಎರಡು ದಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಮತ್ತು ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಸೇರಿ ಒಟ್ಟು 15 ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ.

Published On: 10 December 2022, 05:06 PM English Summary: Cyclone Effect.. Heavy Rain..Yellow Alert For Districts

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.