ಮೈಚಾಂಗ್ ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕವು ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆಯಾಗಲಿದೆ.
ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಮೈಚಾಂಗ್ ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕವೂ
ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆಯ ವರದಿಯ ಪ್ರಕಾರ, ಡಿಸೆಂಬರ್ 4ಕ್ಕೆ ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲಿ ಚಂಡಮಾರುತ ಸೃಷ್ಟಿಯಾಗಿ
ಭಾರೀಯಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಮೈಚಾಂಗ್ ಚಂಡಮಾರುತದ ಪ್ರಭಾವದಿಂದಾಗಿ ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಮಿಂಚು ಗುಡುಗು ಸಹಿತ ಭಾರೀಯಿಂದ
ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಭಾರತದ ಪ್ರಮುಖ ನಗರಗಳಲ್ಲಿ ಭಾರೀ ಮಳೆ!
ಮೈಚಾಂಗ್ ಚಂಡಮಾರುತದ ಪ್ರಭಾವದಿಂದಾಗಿ ದಕ್ಷಿಣ ಭಾರತದ ಪ್ರಮುಖ ನಗರಗಳಲ್ಲಿ ಭಾರೀ ಮಳೆಯಾಗುತ್ತಿದೆ.
ಅದರಲ್ಲಿ ಚೆನ್ನೈ, ತಿರುವಳ್ಳೂರು, ಚೆಂಗಲ್ಪಟ್ಟು, ಕಾಂಚೀಪುರಂ, ಕಲ್ಲಕುರಿಚ್ಚಿ, ವೆಲ್ಲೂರು, ತಿರುಪಟ್ಟೂರು, ಧರ್ಮಪುರಿ, ವಿಲ್ಲುಪುರಂ
ಕಡಲೂರು, ರಾಣಿಪ್ಪೆಟ್ಟೈ, ತಿರುವಣ್ಣಾಮಲೈ, ಪೆರಂಬಲೂರ್, ಮೈಲಾಡುತುರೈ, ತಂಜಾವೂರು, ಅರಿಯಲೂರ್, ಕೃಷ್ಣಗಿರಿ ಹಾಗೂ
ತಮಿಳುನಾಡಿನ ಸೇಲಂ ಜಿಲ್ಲೆಗಳು ಸೇರಿದಂತೆ ವಿವಿಧ ಭಾಗದಲ್ಲಿ ಭಾರೀಯಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ರಾಜ್ಯದಲ್ಲಿ ಹೇಗಿದೆ ಹವಾಮಾನ ?
ರಾಜ್ಯದ ವಿವಿಧ ಜಿಲ್ಲೆಗಳಲ್ಲೂ ಮಳೆ ಮುಂದುವರಿದಿದೆ. ಬೆಂಗಳೂರು ಸೇರಿದಂತೆ ವಿವಿಧ ಭಾಗದಲ್ಲಿ ಮಳೆಯಾಗುತ್ತಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ.
ಆದರೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ. ಗುಡುಗು ಮುನ್ನೆಚ್ಚರಿಕೆ ಇಲ್ಲ.
ಇನ್ನು ಕನಿಷ್ಠ ಉಷ್ಣಾಂಶವು ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಹೇಗಿದೆ ಹವಾಮಾನ
ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಕೆಲವು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ.
ಗರಿಷ್ಠ ಉಷ್ಣಾಂಶವು 25 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶವು 19 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ
ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.
ಆಂಧ್ರಪ್ರದೇಶದ ಕರಾವಳಿಯಲ್ಲಿ ಮಳೆ:
ಡಿಸೆಂಬರ್ 4 ಮತ್ತು 5ರಂದು ಕರಾವಳಿಯ ಆಂಧ್ರಪ್ರದೇಶ ಮತ್ತು ಯಾನಂನ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ.
ಇನ್ನೂ ಕೆಲವು ಕಡೆಗಳಲ್ಲಿ ಭಾರೀಯಿಂದ ಭಾರೀ ಮಳೆಯಾಗಲಿದೆ.
ಡಿಸೆಂಬರ್ 6 ರಂದು ಉತ್ತರ ಕರಾವಳಿ ಆಂಧ್ರಪ್ರದೇಶದಲ್ಲಿ ಪ್ರತ್ಯೇಕ ಭಾರೀ ಮಳೆಯಾಗುವ ಸಾಧ್ಯತೆಯಿದೆ
ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಯಲಸೀಮಾ ಭಾಗದಲ್ಲೂ ಮಳೆ
ಆಂಧ್ರಪ್ರದೇಶದ ರಾಯಲಸೀಮಾದಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಜೊತೆಗೆ ಡಿಸೆಂಬರ್ 5 ರಂದು ಸಹ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಲಾಗಿದೆ.
ತೆಲಂಗಾಣದಲ್ಲೂ ಮಳೆಯ ಆತಂಕ
ತೆಲಂಗಾಣದಲ್ಲಿ ಚುನಾವಣೆಯ ಕಾವು ಮುಗಿದ ಫಲಿತಾಂಶವೂ ಬಂದಿದೆ. ಈಗ ಅಲ್ಲಿ ಯಾರು ಮುಖ್ಯಮಂತ್ರಿ ಎನ್ನುವುದೇ ಗಂಭೀರವಾದ ಚರ್ಚೆ.
ಇದೀಗ ತೆಲಂಗಾಣದಲ್ಲೂ ಡಿಸೆಂಬರ್ 4 ಮತ್ತು 5ರಂದು ಭಾರೀಯಿಂದ ಭಾರೀ ಮಳೆಯಾಗಲಿದೆ.
ಒಡಿಶಾದಲ್ಲೂ ಮಳೆಯ ಅಬ್ಬರ
ಈಶಾನ್ಯ ರಾಜ್ಯಗಳಲ್ಲಿಯೂ ಭಾರೀ ಮಳೆ ಮುಂದುವರಿದಿದೆ.
ಡಿಸೆಂಬರ್ 4 ಮತ್ತು 6ರಂದು ದಕ್ಷಿಣ ಕರಾವಳಿ ವ್ಯಾಪ್ತಿ ಹಾಗೂ ಒಡಿಶಾದ ದಕ್ಷಿಣ ಒಳಭಾಗ ದಲ್ಲಿ ಮಳೆಯಾಗಲಿದೆ
ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.