News

ಮಾಂಡೌಸ್‌ ಚಂಡಮಾರುತ: ರಾಜ್ಯದ ವಿವಿಧ ಜಿಲ್ಲೆಯಲ್ಲಿ ಧಾರಾಕಾರ ಮಳೆ

08 December, 2022 12:11 PM IST By: Hitesh
Cyclone Mandaus: Heavy rains in various districts of the state

ಬಂಗಾಳಕೊಲ್ಲಿಯಲ್ಲಿ ಮಾಂಡೌಸ್‌ ಚಂಡಮಾರುತ ತೀವ್ರಗೊಂಡಿದ್ದು, ತಮಿಳುನಾಡು, ಆಂಧ್ರಪ್ರದೇಶ ಹಾಗೂ ಪುದುಚೇರಿಯಲ್ಲಿ ಗುರುವಾರ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಾಂಡೌಸ್‌ ಚಂಡಮಾರುತದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲೂ ಧಾರಾಕಾರ ಮಳೆ ಆಗುವ ಸಾಧ್ಯತೆ ಇದ್ದು, ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಮಾಂಡೌಸ್‌ ಚಂಡಮಾರುತದಿಂದ ಉತ್ತರ ಭಾರತದ ಕೆಲವು ಭಾಗ ಸೇರಿದಂತೆ ದಕ್ಷಿಣ ಭಾರತದ ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ.

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಡಿಸೆಂಬರ್‌ 11 ಹಾಗೂ ಡಿಸೆಂಬರ್‌ 12ಕ್ಕೆ ಭಾರೀ ಮಳೆ ಆಗುವ ಸಾಧ್ಯತೆ ಇದ್ದು, ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ.

PmKisan | ಪಿ.ಎಂ ಕಿಸಾನ್‌ ಸಮ್ಮಾನ್‌ 13ನೇ ಕಂತಿನ ಹಣಕ್ಕೆ ಕ್ಷಣಗಣನೆ!

ರಾಜ್ಯದ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಡಿಸೆಂಬರ್‌ 11ರಂದು ಧಾರಾಕಾರ ಮಳೆ ಆಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಅಲ್ಲದೇ ಡಿಸೆಂಬರ್‌ 12ಕ್ಕೆ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ,ಕೋಲಾರ, ಚಿಕ್ಕಮಗಳೂರು, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ.

Cyclone Mandaus: Heavy rains in various districts of the state

ಈ ಜಿಲ್ಲೆಗಲ್ಲಿ ಡಿಸೆಂಬರ್‌ 11 ಮತ್ತು 12ಕ್ಕೆ 64.5 ಮಿ.ಮೀನಿಂದ 115.5 ಮಿ.ಮೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ರಾಜ್ಯದ ಸಮತಟ್ಟದ ಪ್ರದೇಶದಲ್ಲಿ ಅತೀ ಕನಿಷ್ಠ ಉಷ್ಣಾಂಶ 9.6 ಡಿಗ್ರಿ ಸೆಲ್ಸಿಯಸ್‌ ಬಾಗಲಕೋಟೆಯಲ್ಲಿ ದಾಖಲಾಗಿದೆ.

ಉಳಿದಂತೆ ರಾಜ್ಯದಲ್ಲಿ ಮುಂದಿನ 24 ಗಂಟೆಗಳ ಕಾಲ ಒಣಹವೆ ಮುಂದುವರಿಲಿದ್ದು, ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ.

ಮುಂದಿನ 48ಗಂಟೆಗಳ ಕಾಲ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಹಾಗೂ ಉತ್ತರ ಒಳನಾಡಿನ ಒಣಹವೆ ಇರುವ ಬಹಳಷ್ಟು ಸಾಧ್ಯತೆ ಇದೆ. ಅಲ್ಲದೇ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ

ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Cyclone Mandaus: Heavy rains in various districts of the state

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಕಡೆಗಳಲ್ಲಿ ಹಗುರ ಮಳೆ ಆಗುವ ಸಾಧ್ಯತೆ ಇದೆ.

ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್‌ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.