1. ಸುದ್ದಿಗಳು

ಸಿತ್ರಾಂಗ್‌ ಚಂಡಮಾರುತ: ಈ ನಾಲ್ಕು ರಾಜ್ಯದಲ್ಲಿ ರೆಡ್‌ ಅಲರ್ಟ್‌!

KJ Staff
KJ Staff
weather report

ಸಿತ್ರಾಂಗ್‌ ಚಂಡಮಾರುತ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ದೇಶದ ನಾಲ್ಕು ರಾಜ್ಯಗಳಲ್ಲಿ ಕೆಲವು ದಿನ ರೆಡ್‌ ಅರ್ಲಟ್‌ ಘೋಷಿಸಲಾಗಿದೆ.

ಇದನ್ನೂ ಓದಿರಿ: ರಾಜ್ಯದಲ್ಲಿ ನೈರುತ್ಯ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ! 

ಸಿತ್ರಾಂಗ್‌ ಚಂಡಮಾರುತದಿಂದಾಗಿ ಇನ್ನು ಕೆಲವು ದಿನ ಈಶಾನ್ಯ ರಾಜ್ಯಗಳಾದ ಅಸ್ಸಾಂ, ಮೇಘಾಲಯ, ಮಿಜೋರಾಂ ಹಾಗೂ ತ್ರಿಪುರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ನಿರ್ದಿಷ್ಟ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ  ರೆಡ್ ಅಲರ್ಟ್ ಘೋಷಿಸಿದೆ.

ಈ ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  

ಚಂಡಮಾರುತ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪಶ್ಚಿಮ ಬಂಗಾಳ ಸರ್ಕಾರವು ಅಪಾಯಕಾರಿ ಸ್ಥಳದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿದ್ದು, ಪರಿಹಾರ ಸಾಮಾಗ್ರಿ ವಿತರಣೆ ಸೇರಿದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದೆ.

10ನೇ ತರಗತಿ ಪಾಸಾಗಿದ್ದರೇ ಸಾಕು KMF ನಲ್ಲಿವೆ ಉದ್ಯೋಗಾವಕಾಶ; ರೂ.97100 ಸಂಬಳ!

ದಕ್ಷಿಣ 24 ಪರಗಣಗಳ ಬಕ್ಖಾಲಿ ಸಮುದ್ರ ತೀರದಲ್ಲಿ ನಾಗರಿಕ ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದ್ದು, ಈ ಭಾಗದ ಬೀಚ್‌ಗಳಲ್ಲಿ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಅಲ್ಲದೇ ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಲಾಗಿದ್ದು, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಮುನ್ನೆಚ್ಚರಿಕೆಯನ್ನೂ ನೀಡಲಾಗಿದೆ.   

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಸಿತ್ರಾಂಗ್ ಚಂಡಮಾರುತದಿಂದಾಗಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿರುವುದರಿಂದ ಎಚ್ಚರವಾಗಿರಿ ಎಂದು ಜನರಲ್ಲಿ ಮನವಿ ಮಾಡಿದ್ದಾರೆ.   

ಚಂಡಮಾರುತವು ಸುಂದರಬನ್ಸ್‌ ತಿನ್ಕೋನಾ ದ್ವೀಪ ಮತ್ತು ಬಾಂಗ್ಲಾದೇಶದ ಸ್ಯಾಂಡ್ವಿಪ್ ನಡುವೆ ಅಪ್ಪಳಿಸುವ ನಿರೀಕ್ಷೆಯಿದೆ. ಕರಾವಳಿ ಪ್ರದೇಶಗಳಲ್ಲಿ ಭಾರೀ ಗಾಳಿ ಮತ್ತು ಮಳೆಯಾಗುವ ಸಾಧ್ಯತೆಯಿದೆ.

ಚಿನ್ನ, ಬೆಳ್ಳಿ ದರ ಯಥಾಸ್ಥಿತಿ, ಎಷ್ಟಿದೆ ಚಿನ್ನ, ಬೆಳ್ಳಿ ದರ ? 

cyclone

ರಾಜ್ಯದಲ್ಲಿ ಹೇಗಿದೆ ಹವಾಮಾನ

ರಾಜ್ಯದಲ್ಲಿ ಸದ್ಯ ಮಳೆ ಇಲ್ಲ. ರಾಜ್ಯದಲ್ಲಿ ಒಣಹವೆ ಮುಂದುವರಿದ್ದಿದ್ದು, ಕೆಲವು ಕಡೆ ಮಾತ್ರ ಮೋಡ ಕವಿದ ವಾತಾವರಣ ಇದೆ. ಇನ್ನುಳಿದಂತೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದೆ.

ರಾಜ್ಯದಲ್ಲಿ ಮುಂದಿನ 24 ಗಂಟೆಗಳ ಕಾಲ ಒಣಹವೆ ಮುಂದುವರಿಯಲಿದೆ. ಗರಿಷ್ಠ ತಪಮಾನ 28 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.  

Published On: 26 October 2022, 12:26 PM English Summary: Cyclone Sitrang: Red alert in these four states!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.