ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಭಾರಿ ಮಳೆ ಸುರಿಸುತ್ತಾ ಭಾರೀ ಪ್ರಮಾಣದ ಹಾನಿಯುಂಟು ಮಾಡಿರುವ ಯಾಸ್ ಚಂಡಮಾರುತವು ಜಾರ್ಖಂಡ್ ಪ್ರವೇಶಿಸಿ ಆತಂಕ ಸೃಷ್ಟಿಸಿದೆ. ಜಾರ್ಖಂಡ್ ಪ್ರವೇಶಿಸಿದ ನಂತರ ದುರ್ಬಲಗೊಂಡ ಚಂಡಮಾರುತ ಇನ್ನೂ ರಾಂಚಿಯ ಸುತ್ತಲೂ ಇದೆ. ಚಂಡಮಾರುತ ದುರ್ಬಲಗೊಂಡ ಕಾರಣ ಧನ್ ಬಾದ್ ನಲ್ಲಿ ಮಳೆ ನಿಂತಿದೆ. ಆದಾಗ್ಯೂ, ಮಧ್ಯಂತರ ತುಂತುರು ಮಳೆ ಇರುತ್ತದೆ. ಆಳವಾದ ಖಿನ್ನತೆಇನ್ನೂ ಗಾಳಿಯ ಮೇಲೆ ಪರಿಣಾಮ ಬೀರುತ್ತಿದೆ. ಮತ್ತೊಂದೆಡೆ, ಚಂಡಮಾರುತ ದುರ್ಬಲಗೊಂಡ ನಂತರವೂ ಜಾರ್ಖಂಡ್ ಸೇರಿದಂತೆ ಐದು ರಾಜ್ಯಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ಹವಾಮಾಲ ಇಲಾಖೆಯ ಪ್ರಕಾರ, ಮೇ 28 ರಂದು ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಉತ್ತರ ಪ್ರದೇಶದಲ್ಲಿ ಭಾರಿ ಮಳೆ ವರದಿಯಾಗಲಿದೆ ಎಂದು ಹವಾಮಾನ ತಜ್ಞ ಅಭಿಷೇಕ್ ಆನಂದ್ ತಿಳಿಸಿದ್ದಾರೆ.
ಯಾಸ್ ಚಂಡಮಾರುತದಿಂದ ಉಂಟಾಗುವ ಹಾನಿಯ ಪ್ರಮಾಣವನ್ನು ತಗ್ಗಿಸಲು ಜಾರ್ಖಂಡ್ ರಾಜ್ಯ ಸರ್ಕಾರ ತೀವ್ರ ಕಟ್ಟೆಚ್ಚರ ವಹಿಸಿದ್ದು, ಸುಮಾರು 12 ಸಾವಿರ ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಈಗಾಗಲೇ ಯಾಸ್ ಚಂಡಮಾರುತದಿಂದ 8 ಲಕ್ಷ ಜನರ ಜೀವನದ ಮೇಲೆ ಪರಿಣಾಮ ಉಂಟಾಗಿದ್ದು, ಜನರು ಹೊರಗೆ ಓಡಾಡುವುದನ್ನು ತಪ್ಪಿಸಲು ರಾಜ್ಯದ ಕೆಲವು ಪ್ರದೇಶಗಳಲ್ಲಿ ಸಂಪೂರ್ಣ ಲಾಕ್‌ಡೌನ್ ಜಾರಿ ಮಾಡಲಾಗಿದೆ.
ಯಾಸ್ ಚಂಡಮಾರುತವು ನಿನ್ನೆಯಿಂದ ಗಂಟೆಗೆ 130 ರಿಂದ 145 ಕಿ.ಮೀ. ವೇಗದ ಗಾಳಿಯೊಂದಿಗೆ ಪೂರ್ವ ಕರಾವಳಿಗೆ ಅಪ್ಪಳಿಸಿ ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಅಪಾರ ಹಾನಿಗೆ ಕಾರಣವಾಗಿದೆ.
ಸಮರೋಪಾದಿ ಕೆಲಸ:
ಯಾಸ್ ಚಂಡಮಾರುತದ ಪ್ರಭಾವ ಹೆಚ್ಚಾಗಿರುವ ಪೂರ್ವ ಮತ್ತು ಪಶ್ಚಿಮ ಸಿಂಹಭೂಮ ಪ್ರದೇಶ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಸೂಕ್ಷ್ಮ ಪ್ರದೇಶಗಳಲ್ಲಿ ರಕ್ಷಣಾ ಹಾಗೂ ಪರಿಹಾರ ಕಾರ್ಯಗಳು ಪರಿಸಮರೋಪಾದಿಯಲ್ಲಿ ನಡೆಯುತ್ತಿವೆ. ’ಒಟ್ಟು 848 ಹಳ್ಳಿಗಳ ಮೇಲೆ ಚಂಡಮಾರುತದ ಪರಿಣಾಮವಾಗಿದ್ದು, 310 ಆಶ್ರಯ ಕೇಂದ್ರಗಳಿಗೆ 10,767 ಜನರನ್ನು ಸ್ಥಳಾಂತರಿಸಿದ್ದೇವೆ. ಎಂದು ಪೂರ್ವ ಸಿಂಹಭೂಮದ ಜಿಲ್ಲಾಧಿಕಾರಿ ಸೂರಜ್ ಕುಮಾರ್ ಹೇಳಿದ್ದಾರೆ.
ಒಂದು ವಾರದಲ್ಲಿ ಭಾರತಕ್ಕೆ ಅಪ್ಪಳಿಸಿದ ಎರಡನೇ ಚಂಡಮಾರುತ ಇದಾಗಿದ್ದು. ತೌಕ್ತೆ ಚಂಡಮಾರುತವು ಪಶ್ಚಿಮ ಕರಾವಳಿಗೆ ಕಳೆದ ವಾರ ಅಪ್ಪಳಿಸಿತ್ತು. ಮಹಾರಾಷ್ಟ್ರ, ಗುಜರಾತ್ ಸೇರಿ ಐದು ರಾಜ್ಯಗಳಲ್ಲಿ ಭಾರಿ ಪ್ರಮಾಣದ ಅನಾಹುತಕ್ಕೆ ಕಾರಣವಾಗಿತ್ತು.