News

Dasara ದಸರಾ ಸಂಭ್ರಮಾಚರಣೆಗೆ ಇನ್ನು ಎರಡು ದಿನ ಮಾತ್ರ ಬಾಕಿ!

13 October, 2023 4:33 PM IST By: Hitesh
Dasara celebrations are only two days away!

ರೈತರಿಗೆ ಪ್ರಮುಖ ಸುದ್ದಿಗಳನ್ನು ತಲುಪಿಸುವ ಉದ್ದೇಶದಿಂದ ಕೃಷಿ ಜಾಗರಣ ಕನ್ನಡ ಅಗ್ರಿನ್ಯೂಸ್‌ ಪರಿಚಯಿಸಿದೆ. ಇಂದಿನ ಪ್ರಮುಖ ಸುದ್ದಿಗಳು ಇಲ್ಲಿವೆ.

1. ವಿದ್ಯುತ್‌ ಕೊರತೆ ಪರಿಹರಿಸಲು ಕ್ರಮ: ಡಿ.ಕೆ ಶಿವಕುಮಾರ್‌
2. ದಸರಾಗೆ ಇನ್ನು ಎರಡು ದಿನ ಮಾತ್ರ ಬಾಕಿ
3. ನಕಲಿ ರಸಗೊಬ್ಬರ, ಬಿತ್ತನೆ ಬೀಜ ಮಾರಾಟ ತಡೆಗೆ ಕ್ರಮ: ಎನ್.ಚೆಲುವರಾಯಸ್ವಾಮಿ
4. ಕೃಷ್ಣಾ ಮೇಲ್ದಂಡೆ ಯೋಜನೆ ಅಚ್ಚುಕಟ್ಟು ಪ್ರದೇಶ ನೀರು ಹರಿಸಲು ಕ್ರಮ
5. ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ
6. ಹಂದಿ ಕಿಡ್ನಿ ಕಸಿಯ 2 ವರ್ಷದ ನಂತರವೂ ಬದುಕುಳಿದ ಮಂಗ!

ಸುದ್ದಿಗಳ ವಿವರ ಈ ರೀತಿ ಇದೆ.

1. ರಾಜ್ಯದಲ್ಲಿ ಈ ಬಾರಿ ಮಳೆ ಅಭಾವದಿಂದಾಗಿ ಬರಪರಿಸ್ಥಿತಿ ಇರುವುದರಿಂದ ಅಣೆಕಟ್ಟುಗಳಲ್ಲಿ ನೀರಿನ ಕೊರತೆ ಇದೆ.

ಹೀಗಾಗಿ, ಇಂತಹ ಸಂದರ್ಭಗಳಲ್ಲಿ ವಿದ್ಯುತ್ ಉತ್ಪಾದನೆ ಕುಸಿಯುವುದು ಸಹಜ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಪ್ರತಿ ವರ್ಷ ಶೇಕಡ 10 ರಿಂದ 15ರಷ್ಟು ಪ್ರಮಾಣದ ವಿದ್ಯುತ್ ಬೇಡಿಕೆಯೂ ಹೆಚ್ಚಾಗುತ್ತದೆ.

ಈಗ ಇರುವ ಪರಿಸ್ಥಿತಿಯನ್ನು ನಿರ್ವಹಿಸಲು ಇನ್ನೂ 10 ಸಾವಿರ ಎಕರೆ ವ್ಯಾಪ್ತಿಯಲ್ಲಿ ಪರ್ಯಾಯ

ವಿದ್ಯುತ್ ಉತ್ಪಾದನೆಗೆ ಯೋಜನೆ ರೂಪಿಸಲಾಗುತ್ತಿದೆ ಎಂದಿದ್ದಾರೆ. 
-------------------------
2. ವಿಶ್ವ ವಿಖ್ಯಾತ ಮೈಸೂರು ದಸರಾ ಪ್ರಾರಂಭಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ಭಾನುವಾರ ಬೆಳಿಗ್ಗೆ 10.15ಕ್ಕೆ ನಡೆಯುವ ಸಮಾರಂಭದಲ್ಲಿ

ಸಂಗೀತ ನಿರ್ದೇಶಕ ಡಾ. ಹಂಸಲೇಖ ಅವರು ಉದ್ಘಾಟಿಸಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರ

ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರ ಪೂಜೆಯೊಂದಿಗೆ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.  
-------------------------
3. ರಾಜ್ಯದ ರೈತರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ. ರೈತರ ಅನುಕೂಲಕ್ಕಾಗಿ ಏಕೀಕೃತ ರೈತ ಕರೆ

ಕೇಂದ್ರವನ್ನು ಈಗಾಗಲೇ ಸ್ಥಾಪಿಸಲಾಗಿದೆ ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ತಿಳಿಸಿದ್ದಾರೆ.

ಇನ್ನು ನಕಲಿ ರಸಗೊಬ್ಬರ, ಬಿತ್ತನೆ ಬೀಜ, ಕೀಟನಾಶಕಗಳ ಮಾರಾಟವನ್ನು ನಿಯಂತ್ರಿಸಲು ಸೂಕ್ತ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.

ಈ ಸಂಬಂಧ  ಇಲ್ಲಿಯವರೆಗೆ 148 ಪ್ರಕರಣಗಳನ್ನು ದಾಖಲಿಸಲಾಗಿದ್ದು, 11 ಲಕ್ಷ ರೂಪಾಯಿ ದಂಡ ವಸೂಲಿ ಮಾಡಲಾಗಿದೆ.

15 ಪರವಾನಗಿಗಳನ್ನು ರದ್ದು ಮಾಡಿರುವುದಾಗಿ ಹೇಳಿದ್ದಾರೆ.   
-------------------------
4. ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರಾವರಿ ಉಳುಮೆಗಾಗಿ ನೀರು ಹರಿಸುವ ಬಗ್ಗೆ

ನೀರು ಹರಿಸಲು ತೀರ್ಮಾನಿಸಲಾಗಿದೆ ಎಂದು ಬಾಗಲಕೋಟೆ ಜಿಲ್ಲಾ ಉಸ್ತುವಾರಿ

ಸಚಿವ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷ ಆರ್.ಬಿ.ತಿಮ್ಮಾಪೂರ್ ಹೇಳಿದ್ದಾರೆ.
-------------------------  
5. ರಾಜ್ಯದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಮುಂದಿನ 24 ಗಂಟೆಯ ಅವಧಿಯಲ್ಲಿ ದಕ್ಷಿಣ ಕನ್ನಡ

ಜಿಲ್ಲೆ, ಚಿಕ್ಕಮಗಳೂರು, ಹಾಸನ, ಕೊಡಗು ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗಲಿದೆ

ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಅತೀ ಹೆಚ್ಚಿನ ಗರಿಷ್ಠ ಉಷ್ಣಾಂಶವು 35.8 ಡಿಗ್ರಿ ಸೆಲ್ಸಿಯಸ್‌ ಶಿರಾಳಿಯಲ್ಲಿ ದಾಖಲಾಗಿದೆ.

ಇನ್ನು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವಣವಿರಲಿದ್ದು, ಸಂಜೆ ಅಥವಾ ರಾತ್ರಿ

ವೇಳೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.