ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ 2020-21ನೇ ಸಾಲಿಗೆ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ”, “ಶುಲ್ಕ ವಿನಾಯಿತಿ”, “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಹಾಗೂ “ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ” ಸೌಲಭ್ಯಕ್ಕಾಗಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ-ಅಲೆಮಾರಿ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2021ರ ಮಾರ್ಚ್ 20 ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಪೋಷಕರು, ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಸಂಸ್ಥೆಗಳು ಮನವಿ ಮೇರೆಗೆ ಹಾಗೂ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದ್ದು, ವಿದ್ಯಾರ್ಥಿಗಳು www.ssp.postmatric.karnataka.gov.in ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಮೇಲ್ಕಂಡ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಹ ವಿದ್ಯಾರ್ಥಿಗಳು ಅರ್ಹತೆ, ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಮಾಹಿತಿಗಾಗಿ www.bcwd.karnataka.gov.in ವೆಬ್‍ಸೈಟ್‍ನ್ನು ಸಂಪರ್ಕಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ 8050770005, 8050770004 ಅಥವಾ bcwd.scholarship@karnataka.gov.in ಗೆ, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್ postmetrichelpdesk@karnataka.gov.in ಹಾಗೂ ದೂರವಾಣಿ ಸಂಖ್ಯೆ 080-35254757 ಗೆ ಸಂಪರ್ಕಿಸಲು ಕೋರಲಾಗಿದೆ.
ಜೂನ್ 21 ರಿಂದ ಜುಲೈ 5ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ
ಪ್ರಸಕ್ತ ಸಾಲಿನ ಎಸ್‌ಎಸ್ಎಲ್‌ಸಿ ಪರೀಕ್ಷೆಗಳು ಜೂನ್ 21ರಿಂದ ಜುಲೈ 5ರವರೆಗೆ ನಡೆಯಲಿವೆ. ಜೂನ್ 21ರಂದು ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ, ಜೂನ್ 24-ಗಣಿತ, ಜೂನ್ 28-ವಿಜ್ಞಾನ, ಜೂನ್ 30-ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೆಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಜುಲೈ2- ದ್ವಿತೀಯ ಭಾಷೆ ಇಂಗ್ಲಿಷ್/ ಕನ್ನಡ, ಜುಲೈ 5- ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದರು.
ಐಸಿಎಸ್‌ಇ ಪರೀಕ್ಷೆ ದಿನಾಂಕ ಪ್ರಕಟ
ಇಂಡಿಯನ್ ಸರ್ಟಿಫಿಕೆಟ್ ಆಫ್ ಸೆಕಂಡರಿ ಎಜುಕೇಶನ್ (ಐಸಿಎಸ್‌ಇ) 10 ಮತ್ತು 12ನೇ ತರಗತಿಗಳ ಪರೀಕ್ಷಾ ದಿನಾಂಕ ಪ್ರಕಟಿಸಿದ್ದು, 12ನೇ ತರಗತಿ ಪರೀಕ್ಷೆಗಳು ಏಪ್ರಿಲ್ 8ರಿಂದ ಹಾಗೂ 10ನೇ ತರಗತಿ ಪರೀಕ್ಷೆಗಳು ಮೇ 5ರಿಂದ ಆರಂಭವಾಗಲಿವೆ. ‘10ನೇ ತರಗತಿ ಬೋರ್ಡ್ ಪರೀಕ್ಷೆಗಳು ಮೇ 5ರಿಂದ ಜೂನ್ 7ರವರೆಗೆ ನಡೆಯಲಿವೆ. ಇಂಡಿಯನ್ ಸ್ಕೂಲ್ ಸರ್ಟಿಫಿಕೆಟ್ ಎಕ್ಸಾಮಿನೇಷನ್ (ಐಎಸ್‌ಸಿ) 12ನೇ ತರಗತಿಗೆ ಏಪ್ರಿಲ್ 8ರಿಂದ ಜೂನ್ 16ರವರೆಗೆ ಪರೀಕ್ಷೆ ನಡೆಸಲಿದೆ.