ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಸಮಗ್ರವಾಗಿ ಪರಿಸರ ಅಧ್ಯಯನ ಮಾಡುವ ಪರಿಸರ ವಿಶ್ವವಿದ್ಯಾಲಯವನ್ನು ಶಿರಸಿಯಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇದನ್ನೂ ಓದಿರಿ:ಕೃಷಿ ಯಂತ್ರೋಪಕರಣಗಳನ್ನು ಖರೀದಿಸುವ ಮುನ್ನ ಪರಿಗಣಿಸಬೇಕಾದ ಪ್ರಮುಖ ಅಂಶಗಳು
ಶಿರಸಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅರಣ್ಯ ಹಾಗೂ ತೋಟಗಾರಿಕೆ ಕಾಲೇಜುಗಳು ಇಲ್ಲಿರುವುದರಿಂದ ಇವೆರಡನ್ನೂ ಸಂಯೋಜಿಸಿ, ತೋಟಗಾರಿಕೆ, ಕೃಷಿ, ಜೀವ ವೈವಿಧ್ಯತೆ, ವನ್ಯಜೀವಿ ರಕ್ಷಣೆ, ಜನರ ಅಭಿವೃದ್ಧಿ, ಪರಿಸರ ಸಮತೋಲನ ಮಾಡುವ ಹಿನ್ನೆಲೆಯಲ್ಲಿ ಪರಿಸರ ವಿಶ್ವವಿದ್ಯಾಲಯವನ್ನು ಇಲ್ಲಿ ಸ್ಥಾಪಿಸುವುದು ಸೂಕ್ತ ಎಂದು ಭಾವಿಸಲಾಗಿದೆ ಎಂದರು.
ಸಂಯೋಜಿತ ವಿಶ್ವವಿದ್ಯಾಲಯ
ಪರಿಸರ ವಿಶ್ವವಿದ್ಯಾಲಯದ ಜೊತೆಗೆ ಕಲಾ, ವಿಜ್ಞಾನ, ವಾಣಿಜ್ಯ ಮುಂತಾದ ಸಾಮಾನ್ಯ ಕಲಿಕೆಗೂ ಅವಕಾಶ ಕಲ್ಪಿಸಲಾಗುವುದು. ಸಂಯೋಜಿತ ವಿಶ್ವವಿದ್ಯಾಲಯದ ಇದಾಗಲಿದೆ. ವಿಶೇಷವಾಗಿ ಪರಿಸರದ ಬಗ್ಗೆ ಕೆಲಸ ಮಾಡಲಿದೆ. ಬರುವ ಬಜೆಟ್ ನಲ್ಲಿ ಅದಕ್ಕೆ ಅನುದಾನ ನೀಡಲಾಗುವುದು. ಈ ಭಾಗದ ಜನರಿಗೆ ಕೊಡುಗೆಯಾಗಿ ನೀಡಲಾಗುತ್ತಿದೆ ಎಂದರು.
ಒಕ್ಕಲೆಬ್ಬಿಸುವುದಿಲ್ಲ
ಅಭಿವೃದ್ಧಿ ಜೊತೆಗೆ ಅರಣ್ಯ ಪ್ರದೇಶ ಹೆಚ್ಚಿಸಿ ಪರಿಸರ ಸಮತೋಲನ ಕಾಯ್ದುಕೊಳ್ಳಬೇಕು. ವಿಶೇಷವಾಗಿ ಇಲ್ಲಿ ಪ್ರವಾಹ, ಅಭಿವೃದ್ಧಿ ಯೋಜನೆ ನೀಡುವಾಗ ಅರಣ್ಯ ವಾಸಿಗಳ ಸಮಸ್ಯೆ ಎದುರಾಗುತ್ತಿದೆ. ಕಾನೂನಿನಲ್ಲಿ ಹಲವಾರು ಸಮಸ್ಯೆಗಳಿವೆ. ಪ್ರವಾಹ ಉಂಟಾದಾಗ ಅರಣ್ಯ ವಾಸಿಗಳಿಗೆ ಪರಿಹಾರ ನೀಡಿದ್ದೇವೆ.
ಕೃಷಿ ಜಾಗರಣ ಕಚೇರಿಯಲ್ಲಿ 'ಸಿರಿಧಾನ್ಯ ವಿಶೇಷ ಆವೃತ್ತಿ' ಅನಾವರಣ: ಕೇಂದ್ರ ಸಚಿವ ಪರಶೋತ್ತಮ್ ರೂಪಾಲಾ ಸೇರಿದಂತೆ ಗಣ್ಯರು ಭಾಗಿ
ಮನೆಯನ್ನು ಸಹ ನೀಡಿದ್ದೇವೆ. ತಲ ತಲಾಂತರದಿಂದ ನೆಲೆಸಿ, ಸಾಗುವಳಿ ಮಾಡಿರುವ ಅರಣ್ಯ ವಾಸಿಗಳ ಸಮಸ್ಯೆ ಸುಪ್ರೀಂಕೋರ್ಟ್ ನಲ್ಲಿ ಇದ್ದರೂ ಕೂಡ ಎಲ್ಲಾ ರಾಜ್ಯ ಗಳಲ್ಲಿ ಈ ಸಮಸ್ಯೆ ಇದೆ. ಕೇಂದ್ರ ಸರ್ಕಾರ ಈ ಬಗ್ಗೆ ಸ್ಪಷ್ಟವಾಗಿ ಹೇಳಿದ್ದೇವೆ.
ಮೂರು ತಲೆಮಾರುಗಳನ್ನು ತೆಗೆದುಕೊಳ್ಳುವ ಬದಲು ಒಂದೇ ತಲೆಮಾರನ್ನು ತೆಗೆದುಕೊಂಡು ಅರಣ್ಯ ವಾಸಿಗಳೆಂದು ನಿರ್ಣಯ ಮಾಡಿ ಹಕ್ಕುಪತ್ರಗಳನ್ನು ನೀಡಲು ವ್ಯವಸ್ಥೆ ಮಾಡಲು ರಾಜ್ಯದ ಅಭಿಪ್ರಾಯವನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ.
ಅದರ ಕೆಲಸ ವಾಗುತ್ತದೆ. ಕನ್ನಡ ನಾಡಿನ ಅರಣ್ಯವಾಸಿಗಳಿಗೆ ಯಾವುದೇ ಕಾರಣಕ್ಕೂ ಒಕ್ಕಲು ಎಬ್ಬಿಸುವ ಕೆಲಸ ವನ್ನು ರಾಜ್ಯ ಸರ್ಕಾರ ಮಾಡುವುದಿಲ್ಲ. ಈ ಬಗ್ಗೆ ಸ್ಪಷ್ಟವಾಗಿ ಅಧಿಕಾರಿಗಳಿಗೆ ಸಭೆಯಲ್ಲಿ ನಿರ್ದೇಶನ ನೀಡಿದೆ.
ಸುಪ್ರೀಂಕೋರ್ಟ್ ಆದೇಶ ಬರುವವರೆಗೆ ಯಾವುದೇ ರೀತಿಯ ತೊಂದರೆ ನೀಡಬಾರದೆಂದು ಸೂಚನೆ ನೀಡಲಾಗಿದೆ. ಯಾರೂ ಆತಂಕ ಪಡುವ ಪ್ರಶ್ನೆಯೇ ಇಲ್ಲ. ಎಲ್ಲಿಯೂ ಅವರಿಗೆ ತೊಂದರೆ ಮಾಡುವ ಪ್ರಶ್ನೆ ಇಲ್ಲ ಎಂದರು.
Job Alert: ಮಿಲೆಟ್ಸ್ ರಿಸರ್ಚ್ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ, ಜನವರಿ 2ರಂದು ಸಂದರ್ಶನ!
ಸಚಿವ ಸಂಪುಟ ವಿಸ್ತರಣೆ
ಅದರ ಪ್ರಸ್ತಾವನೆ ಚರ್ಚೆಯಾಗಿದೆ. ವರಿಷ್ಠರು ಸೂಚನೆ ನೀಡಿದ ಕೂಡಲೇ ಸಚಿವ ಸಂಪುಟ ವಿಸ್ತರಣೆ ಬಗ್ಗೆ ತಿಳಿಸಲಾಗುವುದು ಎಂದರು.
ನಿಗಮ ಮಂಡಳಿಗೆ ನೇಮಕ
ನಿಗಮ ಮಂಡಳಿಗಳ ನೇಮಕಾತಿ ಬಗ್ಗೆ ಉತ್ತರಿಸಿ, ಕೆಲವರ ಅವಧಿ ಮುಗಿದಿದೆ ಕೆಲವರದ್ದು ಮುಗಿದಿಲ್ಲ. ಪರಿಶೀಲನೆ ಮಾಡಿ ಅಧ್ಯಕ್ಷರು ಮತ್ತು ಸದಸ್ಯ ನೇಮಕ ಮಾಡಲಾಗುವುದು ಎಂದರು.
ಹೊಸ ಜಿಲ್ಲೆ
ಹೊಸ ಜಿಲ್ಲೆ ರಚನೆ ಬಗ್ಗೆ ಮನವಿ, ಮನವರಿಕೆ ಮಾಡಿಕೊಟ್ಟಿದ್ದಾರೆ. ಇಡೀ ರಾಜ್ಯದಲ್ಲಿ ಈ ರೀತಿಯ ಬೇಡಿಕೆಗಳಿವೆ. ಸಚಿವ ಸಂಪುಟದಲ್ಲಿ ಚರ್ಚೆ ಮಾಡುವ ಅವಶ್ಯಕತೆ ಇದೆ. ಸಾಧಕ ಬಾಧಕಗಳನ್ನು ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದರು.
ಮಹದಾಯಿ: ಕಾನೂನುಬದ್ಧವಾಗಿ ಕಾಮಗಾರಿ
ಸುಪ್ರೀಂಕೋರ್ಟ್ ನಿರ್ದೇಶಿತ ನ್ಯಾಯಾಧಿಕರಣ ಮಂಡಳಿ ರಚನೆಯಾಗಿತ್ತು. ಸುಪ್ರೀಂಕೋರ್ಟ್ ಆದೇಶದ ಮೇಲೆ ನ್ಯಾಯಮಂಡಲಿ ತನ್ನ ಆದೇಶವನ್ನು ನೀಡಿದೆ. ವರದಿಗಳನ್ನು ನೀಡಿದ ನಂತರ ಅಧಿಸೂಚನೆಯಾಗಿದೆ. ಜಲ ನ್ಯಾಯಾಧಿಕರಣದ ಅಧಿಸೂಚನೆ ಸುಪ್ರೀಂಕೋರ್ಟ್ ಆದೇಶದಷ್ಟೇ ಮಹತ್ವವುಳ್ಳದ್ದು.
ಅದರನ್ವಯ ಡಿಪಿಆರ್ ಗೆ ಅನುಮೋದನೆಯಾಗಿದೆ. ಎಲ್ಲವೂ ಕಾನೂನು ಬದ್ಧವಾಗಿದೆ. ಸುಪ್ರೀಂಕೋರ್ಟ್ ಹಲವಾರು ವರ್ಷ ಪರಿಶೀಲಿಸಿ ಆದೇಶ ನೀಡಿದೆ. ಆ ಕಾಮಗಾರಿಗಳನ್ನು ಕಾನೂನುಬದ್ಧವಾಗಿ, ಸುಪ್ರೀಂಕೋರ್ಟ್ ಆದೇಶಕ್ಕೆ ಬದ್ಧವಾಗಿ ಕೈಗೊಳ್ಳಲಾಗುವುದು ಎಂದರು.
Share your comments