1. ಸುದ್ದಿಗಳು

ದೆಹಲಿಯ ಆಟೋರಿಕ್ಷಾ ಹಾಗೂ ಟ್ಯಾಕ್ಸಿ ಡ್ರೈವರ್‍ ಗಳಿಗೆ ತಲಾ 5000 ರುಪಾಯಿ ಸಹಾಯ

Ramlingam
Ramlingam
Aravind Kejriwal

 ಲಾಕ್‍ಡೌನ್‍ನಿಂದಾಗಿ ಸಂಕಷ್ಟದಲ್ಲಿರುವ ರಾಷ್ಟ್ರದ ರಾಜಧಾನಿ ದೆಹಲಿಯ ಜನತೆಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೆಲವೊಂದು ಸೌಲಭ್ಯಗಳನ್ನು ಘೋಷಿಸಿದ್ದಾರೆ. ಕೊರೊನಾವೈರಸ್ ಸಾಂಕ್ರಾಮಿಕ ರೋಗದ ಎರಡನೇ ಅಲೆಗೆ ತತ್ತರಿಸಿದ  ರಾಷ್ಟ್ರ ರಾಜಧಾನಿ ದೆಹಲಿಯ 72 ಲಕ್ಷ ಜನರಿಗೆ ಉಚಿತವಾಗಿ ಪಡಿತರ ನೀಡುವುದಾಗಿ ಘೋಷಿಸಿದೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಕೇಜ್ರಿವಾಲ್, ರಾಜ್ಯದ ಎಲ್ಲ ಆಟೋರಿಕ್ಷಾ ಹಾಗೂ ಟ್ಯಾಕ್ಸಿ ಡ್ರೈವರ್‍ ಗಳಿಗೆ ಆರ್ಥಿಕ ಬೆಂಬಲ ನೀಡಿದ್ದಾರೆ. ಆಟೋರಿಕ್ಷಾ ಹಾಗೂ ಟ್ಯಾಕ್ಸಿ ಡ್ರೈವರ್‍ ಗಳಿಗೆ ತಲಾ 5000 ರೂಪಾಯಿ ನೀಡುವುದಾಗಿ ಘೋಷಿಸಿದ್ದಾರೆ. ಕೋವಿಡ್‍ನಿಂದಾಗಿ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಡ್ರೈವರ್ ಗಳಿಗೆ ಈ ಹಣ ಸಹಾಯಕ್ಕೆ ಬರಲಿದೆ ಎಂದು ತಿಳಿಸಿದ್ದಾರೆ

ಅದೇ ರೀತಿ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ ಮುಂದಿನ ಎರಡು ತಿಂಗಳು ಉಚಿತವಾಗಿ ಪಡಿತರ ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಹಾಗಂತ ಎರಡು ತಿಂಗಳ ವರೆಗೆ ಲಾಕ್ ಡೌನ್ ಮುಂದುವರೆಯುವುದಿಲ್ಲ. ಇದು ಕೇವಲ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಎರಡು ತಿಂಗಳು ಪಡಿತರ ನೀಡಲಾಗುತ್ತದೆ. ಈ ಸೌಲಭ್ಯವನ್ನು 72 ಲಕ್ಷ ಜನರು ಪಡೆಯಲಿದ್ದಾರೆ ಎಂದು ತಿಳಿಸಿದ್ದಾರೆ.

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೋವಿಡ್ ಮಿತಿ ಮೀರಿ ಹರಡುತ್ತಿದೆ. ಕೋವಿಡ್ ಸೋಂಕಿನ ಸರಪಳಿ ತುಂಡರಿಸುವ ನಿಟ್ಟಿನಲ್ಲಿ ಲಾಕ್ ಡೌನ್ ಘೋಷಣೆಯಾಗಿದೆ. ಅಲ್ಲಿಯ ಸರ್ಕಾರ ಕೋವಿಡ್ ವಿರುದ್ಧದ ಹೋರಾಟ ಚುರುಕುಗೊಳಿಸಿದೆ.

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ವೇಗ ಕಡಿಮೆಯಾಗಿದೆ. ನವದೆಹಲಿಯಲ್ಲಿ ಬಹುಶಃ ಕೊವಿಡ್-19 ಸೋಂಕಿನ ಪ್ರಮಾಣ ಕಡಿಮೆಯಾಗಿದೆ ಎಂಬಂತೆ ಗೋಚರಿಸುತ್ತಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿಗೊಳಿಸುವ ಅಗತ್ಯ ಇರುವುದಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಕೊವಿಡ್-19 ಸೋಂಕನ್ನು ನಿಯಂತ್ರಿಸುವ ಉದ್ದೇಶದಿಂದ ಘೋಷಿಸಿರುವ ಲಾಕ್‌ಡೌನ್ ಆದೇಶವು ಮೇ 10ರವರೆಗೂ ಜಾರಿಯಲ್ಲಿರಲಿದೆ. ಕಳೆದ ವರ್ಷ ಲಾಕ್‌ಡೌನ್ ಜಾರಿಗೊಳಿಸಿದ ಸಂದರ್ಭದಲ್ಲೂ 1.56 ಲಕ್ಷ ಆಟೋ ಚಾಲಕರು ಮತ್ತು ಟ್ಯಾಕ್ಸಿ ಚಾಲಕರಿಗೆ ತಲಾ 5000 ರೂಪಾಯಿ ಸಹಾಯ ಧನವನ್ನು ಘೋಷಿಸಲಾಗಿತ್ತು.

Share your comments

Top Stories

View More

Latest feeds

More News
Krishi Jagran Kannada Magazine Subscription Online Subscription
Krishi Jagran Kannada Subscription

CopyRight - 2021 Krishi Jagran Media Group. All Rights Reserved.