ರಾಜ್ಯದಲ್ಲಿ ಕಬ್ಬು ಬೆಳೆಗಾರರಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಇಂದು ಕರ್ನಾಟಕದಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡುವುದಾಗಿ ರೈತರು ಘೋಷಣೆ ಮಾಡಿದೆ.
ಇದನ್ನೂ ಓದಿರಿ: ಭೂಕಂಪದಿಂದ ಕಟ್ಟಡ ರಕ್ಷಣೆಗೆ ಹೊಸ ಪ್ಲಾನ್ ಕಂಡುಕೊಂಡ ಸಂಶೋಧಕರು!
ಇಂದು ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.
ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.
ಪ್ರತಿ ಟನ್ ಕಬ್ಬಿಗೆ 5,500 ರೂಪಾಯಿ ದರ ನಿಗದಿ ಮಾಡುವಂತೆ ರೈತ ಸಂಘಟನೆಗಳು ಆಗ್ರಹಿಸಿವೆ. ಈಗಾಗಲೇ ಕಬ್ಬು ಬೆಳೆ ನಿಗದಿಗೆ ಹಲವು ಸುತ್ತಿನ ಸಭೆಗಳು ಸಹ ನಡೆದಿವೆ.
ಆದರೆ, ಕಬ್ಬು ಬೆಂಬಲ ಬೆಲೆ ನಿಗದಿ ಮಾಡುವ ವಿಚಾರವಾಗಿ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳದೆ ಇರುವುದರಿಂದ ರೈತರು ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ.