ರಾಜ್ಯದ ಗ್ರಾಮೀಣ ಭಾಗದ ಯವರೈತರನ್ನು ಮದುವೆಯಾಗುವ ಯುವತಿಯರಿಗೆ 10 ಲಕ್ಷ ರೂಪಾಯಿ ಪ್ರೋತ್ಸಾಹ ಧನ ನೀಡಬೇಕು
ಎಂದು ಹಸಿರು ಪ್ರತಿಷ್ಠಾನದ ಅಧ್ಯಕ್ಷ ಕೆ.ಜಿ. ಕುಮಾರ್ ಆಗ್ರಹಿಸಿದ್ದಾರೆ.
ದೇಶದಲ್ಲಿ ಸೈನಿಕನಷ್ಟೇ ರೈತರ ಪಾತ್ರವೂ ಮಹತ್ವದ್ದಾಗಿದೆ. ಹೀಗಾಗಿ, ರೈತರಿಗೆ ವಿಶೇಷ ಪ್ಯಾಕೇಜ್ ನೀಡಬೇಕು ಎಂದಿದ್ದಾರೆ.
ರಾಜ್ಯ ಸರ್ಕಾರವು ಚಳಿಗಾಲದ ಅಧಿವೇಶನದಲ್ಲಿ ಈ ಸಂಬಂಧ ಚರ್ಚೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
Heavy Rain| ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ!
-------
ವಿಶ್ವದಲ್ಲಿ ಕೊರೊನಾ ಸೋಂಕಿನ ನಂತರ ಜನರನ್ನು ತೀವ್ರ ಆತಂಕಕ್ಕೆ ಗುರಿ ಮಾಡಿದ್ದ ಮಂಕಿಪಾಕ್ಸ್ ಸೋಂಕನ್ನು ಇನ್ನು ಮುಂದೆ
ಎಂಪಾಕ್ಸ್ ಎಂದು ವಿಶ್ವ ಆರೋಗ್ಯ ಸಂಸ್ಥೆ ನಾಮಕರಣ ಮಾಡಿದೆ.
ವಿಶ್ವ ಆರೋಗ್ಯ ಸಂಸ್ಥೆಯು ಜಾಗತಿಕ ತಜ್ಞರೊಂದಿಗೆ ಸಮಾಲೋಚನೆ ನಡೆಸಿದ್ದು, ಮಂಕಿಪಾಕ್ಸ್‌ಗೆ ಪರ್ಯಾಯವಾಗಿ ಎಂಪಾಕ್ಸ್
ಎಂಬ ಹೊಸ ಹೆಸರು ಘೋಷಿಸಿದೆ. ಮಾರಕ ಕಾಯಿಲೆಯ ಹೆಸರಿನ ಮೂಲಕ
ಜನಾಂಗೀಯ ಮತ್ತು ಕಳಂಕಿತ ಭಾಷೆ ಬಳಕೆ ಆಗುತ್ತಿರುವುದು ವರದಿ ಆಗಿರುವುದರಿಂದ ಈ ಬದಲಾವಣೆ ಮಾಡಲಾಗಿದೆ.
-------
ರಾಜ್ಯದಲ್ಲಿ ಮಧುಮೇಹ ಸೇರಿದಂತೆ ಅಸಾಂಕ್ರಾಮಿಕ ರೋಗಗಳನ್ನು ತಡೆಯಲು ಸರ್ಕಾರ ಅಗತ್ಯ ಕ್ರಮ ವಹಿಸುತ್ತಿದ್ದು,
ನಮ್ಮ ಕ್ಲಿನಿಕ್‌ಗಳ ಮೂಲಕ 30 ವರ್ಷ ಮೇಲ್ಪಟ್ಟ ಎಲ್ಲರಿಗೂ ಮಧುಮೇಹದ ತಪಾಸಣೆ ಮಾಡಲಾಗುವುದು ಎಂದು ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಮುಂದಿನ 18 ತಿಂಗಳಲ್ಲಿ ರಾಜ್ಯದ ಶೇ.100ರಷ್ಟು ಜನರಿಗೆ ಆರೋಗ್ಯ ತಪಾಸಣೆ ಗುರಿ ಹಾಕಿಕೊಳ್ಳಲಾಗಿದೆ.
ಅಸಾಂಕ್ರಾಮಿಕ ರೋಗಗಳ ನಿರ್ವಹಣೆಗೆ ನಗರಗಳಲ್ಲಿ 438 ನಮ್ಮ ಕ್ಲಿನಿಕ್‌ಗಳನ್ನು ಆರಂಭಿಸಲಾಗುತ್ತಿದೆ ಎಂದಿದ್ದಾರೆ.
Heavy Rain ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದ ವಿವಿಧೆಡೆ ಮೂರು ದಿನ ಮಳೆ
ರಾಜ್ಯದ ಕರಾವಳಿ ಸೇರಿದಂತೆ ವಿವಿಧೆಡೆ ಧಾರಾಕಾರ ಮಳೆ ಆಗುತ್ತಿದೆ. ಸೋಮವಾರ ದಕ್ಷಿಣಕನ್ನಡ ಜಿಲ್ಲೆ, ಉಡುಪಿ, ಧಾರವಾಡ,
ಚಿಕ್ಕಮಗಳೂರು, ಉತ್ತರ ಕನ್ನಡ, ಮೈಸೂರು ಹಾಗೂ ಶಿವಮೊಗ್ಗ ಸೇರಿದಂತೆ ವಿವಿಧೆಡೆ ಮಳೆ ಆಗಿದೆ.
ಮಂಗಳವಾರ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ
ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಇನ್ನು ರಾಜ್ಯದಲ್ಲಿ ಮುಂದಿನ 24 ಗಂಟೆ ಗರಿಷ್ಠ ತಾಪಮಾನ 27 ಡಿಗ್ರಿ
ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
-------
ರಾಜ್ಯದಲ್ಲಿ ಅಕಾಲಿಕ ಮಳೆ ಆಗುತ್ತಿರುವುದರಿಂದ ಹಿಂಗಾರು ಬಿತ್ತನೆಗೆ ಹಿನ್ನಡೆ ಉಂಟಾಗಿದೆ.
ಪ್ರಸಕ್ತ ವರ್ಷದ ಸೆಪ್ಟೆಂಬರ್ ಮತ್ತು ಅಕ್ಟೋಬರ್‌ನಲ್ಲಿ ಅಧಿಕ ಮಳೆಯಿಂದಾಗಿ ಹಿಂಗಾರು ಬಿತ್ತನೆಗೆ ತೊಡಕಾಗಿದೆ.
ಕರ್ನಾಟಕದಲ್ಲಿ ಒಟ್ಟು ಗುರಿಯ ಶೇ.74 ರಷ್ಟು ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದ್ದು, ಇಳುವರಿ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ರಾಜ್ಯ ಕೃಷಿ ಇಲಾಖೆಯು 26.68 ಲಕ್ಷ ಹೆಕ್ಟೇರ್‌ನಲ್ಲಿ ಹಿಂಗಾರು ಬಿತ್ತನೆ ಗುರಿ ಹೊಂದಿದ್ದು, ಶೇ.74 ರಷ್ಟು ಬಿತ್ತನೆಯಾಗಿದೆ.
ಮಳೆಯಿಂದ ಈ ಋತುವಿನ ಬೆಳೆಗಳ ಬಿತ್ತನೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಾಗಿದೆ.
ಅಲ್ಲದೇ ಮಣ್ಣಿನ ತೇವಾಂಶ ಹೆಚ್ಚಾಗುತ್ತಿದ್ದು, ಸಮಸ್ಯೆ ಆಗುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಇನ್ನು ಉತ್ತಮ ಮಳೆಯಿಂದಾಗಿ ರಾಜ್ಯದ ಎಲ್ಲ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ.
ಮೂರನೇ ಜಾಗತಿಕ ವರ್ಟಿಕಲ್ ಫಾರ್ಮಿಂಗ್ ಶೋ ಇದೇ 29 ಹಾಗೂ 30ಕ್ಕೆ ನವದೆಹಲಿಯ ದ್ವಾರಕದ ವೆಲ್‌ಕಮ್ ಹೋಟೆಲ್‌ನಲ್ಲಿ ಜರುಗಲಿದೆ.
ವರ್ಟಿಕಲ್ ಫಾರ್ಮಿಂಗ್ ಶೋನಲ್ಲಿ ಕೃಷಿ, ಪರಿಸರ ಸಂರಕ್ಷಣೆ ಮತ್ತು ನಗರ ಕೃಷಿ ಮೌಲ್ಯ ಸರಪಳಿಯನ್ನು ಒಂದೇ ಸೂರಿನಡಿ ತರಲಾಗುತ್ತದೆ.
ಭಾರತದ ತೋಟಗಾರಿಕೆ ಉದ್ಯಮದಲ್ಲಿನ ಇತ್ತೀಚಿನ ಬೆಳವಣಿಗೆಗಳನ್ನು ಕಾರ್ಯಕ್ರಮದಲ್ಲಿ ಚರ್ಚಿಸಲಾಗುತ್ತದೆ.
ಕೃಷಿ ಹಾಗೂ ಕೃಷಿಯೇತರ ವ್ಯಾಪಾರ ಅವಕಾಶಗಳನ್ನು ಅನ್ವೇಷಿಸಲು ಇದು ವೇದಿಕೆ ಆಗಿದೆ.
ಅಲ್ಲದೇ ತಜ್ಞರನ್ನು ಭೇಟಿ ಮಾಡಲು, ಹೊಸ ಯೋಜನೆಗಳನ್ನು ಪಡೆಯಲು ಮತ್ತು ದೀರ್ಘಾವಧಿಯ
ಸಹಯೋಗಗಳಿಗೆ ಈ ಕಾರ್ಯಕ್ರಮ ವೇದಿಕೆ ಕಲ್ಪಿಸಲಿದೆ. ಈ ಹಿಂದೆ ನಡೆದ ಎರಡು ಆವೃತ್ತಿಗಳು ಜಾಗತಿಕ ಯಶಸ್ಸು ಕಂಡಿವೆ.
-------
Share your comments