1. ಸುದ್ದಿಗಳು

ಕಬ್ಬು ಬೆಳೆ FRP ದರ ಹೆಚ್ಚಳಕ್ಕೆ ಆಗ್ರಹಿಸಿ ಸಿ.ಎಂ ಮನೆ ಮುಂದೆ ನ.22ರಿಂದ ಧರಣಿ: ಕುರುಬೂರು ಶಾಂತಕುಮಾರ್‌ ಎಚ್ಚರಿಕೆ

Hitesh
Hitesh
Kuruburu Shanthakumar

ಕಬ್ಬು ಬೆಳೆಗೆ ಎಫ್‌ಆರ್‌ಪಿ (FRP)ದರ ಹೆಚ್ಚಳಕ್ಕೆ ಒತ್ತಾಯಿಸಿ ಕಬ್ಬು ಬೆಳೆಯುವ ರೈತರಿಂದ 22ರಿಂದ ಮುಖ್ಯಮಂತ್ರಿ ಮನೆ ಮುಂದೆ ನಿರಂತರ ಧರಣಿ ನಡೆಸಲಾಗುವುದು ಎಂದು ರಾಜ್ಯ ಕಬ್ಬು ಬೆಳಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್‌ ಎಚ್ಚರಿಕೆ ನೀಡಿದ್ದಾರೆ.

ರೈತರ ಮೇಲೆ ಕ್ರಿಮಿನಲ್‌ ಪ್ರಕರಣ ದಾಖಲಿಸಿದರೆ ಜೋಕೆ: ಆರ್‌. ಅಶೋಕ್‌ ಎಚ್ಚರಿಕೆ!

ಕಬ್ಬಿನ ಎಫ್‌ಆರ್‌ಪಿ (FRP)ದರ ಹೆಚ್ಚುವರಿ ನಿಗದಿ ಮಾಡುವಂತೆ ನಿರಂತರವಾಗಿ ಆಗ್ರಹಿಸಲಾಗಿದೆ. ಆದರೆ, ರಾಜ್ಯ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ.

ವಿಳಂಬ ನೀತಿ ಖಂಡಿಸಿ, ಕಬ್ಬು ಬೆಳೆಗಾರ ರೈತರು ಮುಖ್ಯಮಂತ್ರಿ ಮನೆ ಮುಂದೆ ನ್ಯಾಯ ಸಿಗುವ ತನಕ ನಿರಂತರ ಆಹೋ ರಾತ್ರಿ ಧರಣಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಕಬ್ಬು ಹೆಚ್ಚುವರಿ ದರ ನಿಗದಿ ಬಗ್ಗೆ ರಾಜ್ಯ ಸರ್ಕಾರ ನಾಲ್ಕಾರು ಸಭೆಗಳನ್ನು ನಡೆಸಿ, ತಜ್ಞರ ಸಮಿತಿ ರಚಿಸಿ ಐದು ದಿನದಲ್ಲಿ ವರದಿ ಪಡೆದು 20ರ ಒಳಗಾಗಿ ರೈತರಿಗೆ ಸಿಹಿ ಸುದ್ದಿ ನೀಡುವುದಾಗಿ ಹೇಳಿ ಸಕ್ಕರೆ ಸಚಿವರು ಭರವಸೆ ನೀಡಿದ್ದರು.

ಆದರೆ, ಇಲ್ಲಿಯವರೆಗೆ ಯಾವುದೇ ನಿರ್ಧಾರ ಪ್ರಕಟಿಸಿದೆ ಇರುವುದನ್ನು ಖಂಡಿಸಿ, ಮುಖ್ಯಮಂತ್ರಿಗಳ ಎರಡು ಬಾರಿ ಭೇಟಿ ಮಾಡಿದಾಗಲೂ ರೈತರಿಗೆ ನ್ಯಾಯ ನೀಡುವುದಾಗಿ

ಭರವಸೆ ನೀಡಿ ವಿಳಂಬ ನೀತಿ ಅನುಸರಿಸುತ್ತಿರುವುದು ಸರಿಯಲ್ಲ ಆದ್ದರಿಂದ ತುರ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.  

ಕಬ್ಬು ಬೆಳೆಗಾರ ರೈತರು ನಾಲ್ಕು ತಿಂಗಳಿಂದಲೂ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಸಬೂಬು ಹೇಳುತ್ತಾ ಕಾಲ ಕಳೆಯುತ್ತಿರುವುದು ಸರಿಯಲ್ಲ. ರೈತರ ಬದುಕು ಬೆಕ್ಕಿಗೆ ಚೆಲ್ಲಾಟ ಇಲಿಗೆ ಸಂಕಟ ಎನ್ನುವಂತಾಗಿದೆ.

ರಾಜ್ಯದಲ್ಲಿ ಚಳಿ ಹೆಚ್ಚಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ! 

Demanding increase in sugarcane crop FRP rate, sit-in in front of CM house from November 22: Kuruburu Shanthakumar warns

ರಾಜ್ಯದಲ್ಲಿ 30 ಲಕ್ಷ ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಗಂಭೀರ ಪ್ರಯತ್ನ ನಡೆಸದೆ ಸದಾ ರೈತರ ಪರ ಎಂದು ಹೇಳಿಕೆ ನೀಡುತ್ತಾ,  ಸರ್ಕಾರ ರೈತರ ಮೂಗಿಗೆ ತುಪ್ಪ ಸವರೋ ಕೆಲಸ ಮಾಡುತ್ತಿದ್ದಾರೆ.

ರಾಜ್ಯದ ಬೆಳಗಾವಿ, ದಾವಣಗೆರೆ, ಧಾರವಾಡ , ಉತ್ತರ ಕನ್ನಡ, ಮೈಸೂರು, ಹಡಗಲಿ, ಕಲಬುರಗಿ, ಬಿಜಾಪುರ, ಬಾಗಲಕೋಟೆ ,ಗದಗ, ಚಾಮರಾಜನಗರ, ಹಾಸನ, ಬೀದರ್, ಚನ್ನರಾಯಪಟ್ಟಣ, ಕೊಪ್ಪಳ ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ನಿರಂತರ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಯಾವುದೇ ಸ್ಪಷ್ಟ ತೀರ್ಮಾನ ಕೈಗೊಳ್ಳದೆ, ರೈತರ ಕಣ್ಣಿಗೆ ಮಣ್ಣೆರಚುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಕರ್ನಾಟಕ ರಾಜ್ಯಕ್ಕಿಂತ ಸಕ್ಕರೆ ಇಳುವರಿ ಕಡಿಮೆ ಬರುವ ಪಂಜಾಬ್ ರಾಜ್ಯದಲ್ಲಿ 3800 ಉತ್ತರ ಪ್ರದೇಶದಲ್ಲಿ 3500 ಗುಜರಾತ್ ನಲ್ಲಿ

4400 ದರ ರಾಜ್ಯ ಸರ್ಕಾರಗಳೇ ನಿಗದಿ ಮಾಡಿದ್ದಾರೆ, ತಮಿಳುನಾಡಿನಲ್ಲಿ ಕಬ್ಬು ಸಾಗಾಣಿಕೆ  ವೆಚ್ಚವನ್ನು ಸಕ್ಕರೆ ಕಾರ್ಖಾನೆಗಳೆ ಬರಿಸುತ್ತವೆ

ಇದನ್ನು ಗಮನಿಸಿ ಎಫ್‌ಆರ್ಪಿ ಬೆಲೆಯನ್ನ ಕನಿಷ್ಠ ಇಳುವರಿಗೆ ಟನ್‌ಗೆ 3500 ರೂ  ನಿಗದಿ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ. 

ಕಬ್ಬಿನ ಕಟಾವು ಸಾಗಾಣಿಕೆ ವೆಚ್ಚದಲ್ಲಿ ಕಾರ್ಖಾನೆಯವರು ರೈತರನ್ನು ಸುಲಿಗೆ ಮಾಡುತ್ತಿದ್ದಾರೆ.

ಲಗಾಣಿ ಹೆಚ್ಚು ಪಡೆಯುತ್ತಿದ್ದಾರೆ ಕಬ್ಬು ಕಟಾವು 16 ತಿಂಗಳಾಗುತ್ತಿದೆ ರಾಜ್ಯ ಸರ್ಕಾರ ನಿಗದಿ ಮಾಡಿರುವ ಮಾರ್ಗಸೂಚಿಯಂತೆ ರೈತನ ಜಮೀನಿನಿಂದ ಕಾರ್ಖಾನೆ ನಡುವೆ ಇರುವ ಕಿಲೋಮೀಟರ್ 

ಆಧಾರದ ದರ ಕಡಿತ ಮಾಡಬೇಕು, ಕಾನೂನು ಬಾಹಿರವಾಗಿ ಹೆಚ್ಚುವರಿ ಮಾಡಿದರೆ ಆಯಾ ಜಿಲ್ಲಾಧಿಕಾರಿಗಳು ಕಾರ್ಖಾನೆಗಳ ಮೇಲೆ ಚೀಟಿಂಗ್ ಕೇಸ್ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕಬ್ಬು ಕಟಾವು16-18 ತಿಂಗಳು ವಿಳಂಬವಾಗುತ್ತಿದೆ ಇದರಿಂದ ರೈತರಿಗೆ ತುಂಬಾ ನಷ್ಟವಾಗುತ್ತಿದೆ, ಈ ರೀತಿ ವಿಳಂಬವಾಗಿ ಕಟಾವು ಮಾಡಿದ ಕಬ್ಬಿಗೆ ವಿಳಂಬದ ಅವಧಿಗೆ ಶೇಕಡ 15 ಬಡ್ಡಿ ಸೇರಿಸಿ ಹೆಚ್ಚುವರಿ ಹಣ ಕಾರ್ಖಾನೆಗಳು ನೀಡುವಂತಾಗಬೇಕು.

ಕಬ್ಬು ಕಟಾವು ಸಾಗಾಣಿಕೆ ವೆಚ್ಚವನ್ನು ಸರ್ಕಾರ ನಿಗದಿ ಮಾಡಿರುವ ಮಾರ್ಗಸೂಚಿಯಂತೆ ಕಡಿತಗೊಳಿಸಬೇಕು, ಸಕ್ಕರೆ ಕಾರ್ಖಾನೆ ಫೀಲ್ಡ್ ಮೆನ್‌ಗಳು ಬಿಲ್‌ನಲ್ಲಿ ನೋಂದಾಯಿಸದೆ ರೈತರಿಂದ ಹೆಚ್ಚುವರಿ ಹಣ ವಸೂಲಿ ಮಾಡುವುದು ನಿಲ್ಲಬೇಕು.

ಅಲ್ಲದೇ ರೈತ ಮತ್ತು ಕಾರ್ಖಾನೆ ನಡುವೆ ಸರ್ಕಾರ ಜಾರಿಗೆ ತಂದಿರುವ ದ್ವಿಪಕ್ಷೀಯ ಒಪ್ಪಂದ ಪತ್ರ ಜಾರಿ ಮಾಡಬೇಕು, ಒಪ್ಪಂದ ಪತ್ರ ರೈತರಿಗೂ ಕೊಡಬೇಕು ಎಂದು ಹೇಳಿದ್ದಾರೆ.

ಅತಿವೃಷ್ಟಿ ಮಳೆಹಾನಿ ಕಾರಣ ಭತ್ತದ ಬೆಳೆ ಸ್ವಲ್ಪಮಟ್ಟಿಗೆ ಇಳುವರಿ ಕಡಿಮೆಯಾಗುತ್ತಿದ್ದು, ಬೆಲೆ ಕಡಿಮೆಯಾಗುವ ಕಾರಣ ಕೂಡಲೇ ಭತ್ತ ಕಟಾವು ಆರಂಭಕೆ ಮುನ್ನ ಖರೀದಿ ಕೇಂದ್ರಗಳನ್ನು ತಕ್ಷಣ ತೆರೆಯಬೇಕು.

ವಿದ್ಯುತ್ ಖಾಸಗಿಕರಣ ಕೈಬಿಡಬೇಕು ಕೃಷಿ ಪಂಪ್ಸೆಟ್‌ಗಳಿಗೆ ಮೀಟರ್ ಅಳವಡಿಸುವುದು ಬೇಡ, ಬ್ಯಾಂಕುಗಳು ರೈತರಿಗೆ ಸಾಲ ನೀಡುವಾಗ ಸಿಬಿಲ್ ಸ್ಕೋರ್

ಪದ್ಧತಿಯನ್ನು ಪರಿಗಣಿಸಿ ಸಾಲ ನೀಡುವ ಪದ್ಧತಿ ಕೈಬಿಡಬೇಕು ರಿಸರ್ವ್ ಬ್ಯಾಂಕ್ ಮುಖ್ಯಸ್ಥರು ಸಭೆ ಕರೆಯುವ ಭರವಸೆ ನೀಡಿದಂತೆ ತಕ್ಷಣವೇ ಸಭೆ ಕರೆದು ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸರ್ಕಾರ ನೀಡುವ ಪರಿಹಾರಧನ ಪ್ರೋತ್ಸಾಹಧನ, ವಿಧವಾ ವೇತನ, ವೃದ್ಧಾಪ್ಯ ವೇತನದ ಹಣವನ್ನು ಬ್ಯಾಂಕುಗಳು ಸಾಲದ ಖಾತೆಗಳಿಗೆ ಜಮಾ ಮಾಡಬಾರದು 

ಎನ್ನುವ ನಿಯಮವನ್ನು ಉಲ್ಲಂಗಿಸಿ ಸಿಬಿಲ್ ಸ್ಕೋರಿಲ್ಲ ಎಂದು ಸಬೂಬು ಹೇಳುತ್ತಾ ರೈತರಿಗೆ ಸಾಲ ಕೊಡುವುದನ್ನು ನಿಲ್ಲಿಸುತ್ತಿದ್ದಾರೆ,

ಬಗರ್ ಹುಕುಂ ಸಾಗುವಳಿ  ಹತ್ತಾರು ವರ್ಷಗಳಿಂದ ಕೃಷಿ ಮಾಡುತ್ತಿರುವ ರೈತರಿಗೆ ಸಾಗುವಳಿ ಪತ್ರ,ಅರಣ್ಯ ಭೂಮಿಯನ್ನು ವ್ಯವಸಾಯ ಮಾಡುತ್ತಿರುವ ರೈತರಿಗೆ ಸಾಗುವಳಿ ಪಟ್ಟಾವನ್ನು ನೀಡಬೇಕು.

ಎಲ್ಲಾ ಒತ್ತಾಯಗಳ ಬಗ್ಗೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುವವರೆಗೆ ನಿರಂತರ ಆಹೋ ರಾತ್ರಿ ಹೋರಾಟ ನಡೆಸಲು ರಾಜ್ಯ ಸಮಿತಿ ತೀರ್ಮಾನಿಸಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   

Published On: 20 November 2022, 06:12 PM English Summary: Demanding increase in sugarcane crop FRP rate, sit-in in front of CM house from November 22: Kuruburu Shanthakumar warns

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.