ನೋಂದಣಿ ಮತ್ತು ಮುದ್ರಾಂಕ ಇಲಾಖೆ ಗ್ರೂಪ್-ಡಿ (Group-D) (ಜವಾನರ) ಹುದ್ದೆಯ ನೇರ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು 31-ಮಾರ್ಚ-2022ಕೊನೆಯ ದಿನವಾಗಿದೆ. ಹುದ್ದೆಯ ನೇರ ನೇಮಕಾತಿ ಅಧಿಸೂಚನೆ (Notification) ಪ್ರಕಟಿಸಲಾಗಿದೆ. ಅಂಚೆ ಮೂಲಕ ಮಾತ್ರ ಅರ್ಜಿ ಸಲ್ಲಿಕೆ ಮಾಡಲು ಅವಕಾಶವಿದೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ. ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಆಯ್ಕೆಯಾದ ಅಭ್ಯರ್ಥಿಗಳಿಗೆ 17,000 ರಿಂದ 28,950 ರೂ. ವೇತನವನ್ನು ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಎಸ್. ಎಸ್. ಎಲ್. ಸಿ. ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 18 ವರ್ಷ ಪೂರೈಸಿರತಕ್ಕದ್ದು ಮತ್ತು ಪ್ರಕಟಣೆಯ ದಿನಾಂಕದೊಳಗೆ ಗರಿಷ್ಠ 40 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಕೆಯ ವಿಧಾನ (How to apply)
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ನಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಗೆ ಅವಶ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅಂಚೆ ಮೂಲಕ ಕಚೇರಿಯ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು (Documents)
ಜನ್ಮ ದಿನಾಂಕ ದೃಢೀಕರಿಸಿರುವ ಪ್ರಮಾಣ ಪತ್ರ
ಶೈಕ್ಷಣಿಕ ಪ್ರಮಾಣ ಪತ್ರ, ಜಾತಿ ದೃಢೀಕರಿಸುವ ಪ್ರಮಾಣ ಪತ್ರ
ಕನ್ನಡ ಮಾಧ್ಯಮದ ಅಭ್ಯರ್ಥಿ ಆಗಿದ್ದಲ್ಲಿ ಕನ್ನಡ ಮಾಧ್ಯಮ ದೃಢೀಕರಣ ಪತ್ರ
ಆಧಾರ್ ಕಾರ್ಡ್
ಇತರೆ ದಾಖಲೆಗಳು ಇದ್ದರೆ ಲಗತ್ತಿಸಬಹುದು.
ಅರ್ಜಿ ಸಲ್ಲಿಸಬೇಕಾದ ಅಂಚೆ ವಿಳಾಸ (postal Adress)
ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತರು, ಕಂದಾಯ ಭವನ, 8ನೇ ಮಹಡಿ, ಕೆಂಪೇಗೌಡ ರಸ್ತೆ ಬೆಂಗಳೂರು – 560009
ಅಭ್ಯರ್ಥಿ ಒಂದಕ್ಕಿಂತ ಹೆಚ್ಚು ಅರ್ಜಿ ಸಲ್ಲಿಸುವಂತಿಲ್ಲ. ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಿದ ಮಾತ್ರಕ್ಕೆ ಅಭ್ಯರ್ಥಿಯು ಆಯ್ಕೆಗೆ ಅರ್ಹತೆ ಪಡೆಯುವುದಿಲ್ಲ. ಅರ್ಜಿಯಲ್ಲಿ ಸರಿಯಾದ ಮಾಹಿತಿ ನೀಡುವುದು ಅಭ್ಯರ್ಥಿ ಜವಾಬ್ದಾರಿಯಾಗಿದೆ. ಸಂಪೂರ್ಣ ಮಾಹಿತಿ ನೀಡದ, ತಪ್ಪು ಮಾಹಿತಿ ನೀಡಿದ, ಅಭ್ಯರ್ಥಿ ಸಹಿ ಇಲ್ಲದ, ಅಭ್ಯರ್ಥಿ ಭಾವಚಿತ್ರ ಇಲ್ಲದ ಅರ್ಜಿಗಳನ್ನು ತಿರಸ್ಕಾರ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ